ತರೀಕೆರೆ: KSRTC ಬಸ್ - ಕಾರು ಮುಖಾಮುಖಿ ಡಿಕ್ಕಿ, 7 ಜನರಿಗೆ ಗಂಭೀರ ಗಾಯ
ಚಿಕ್ಕಮಗಳೂರು, ಸೆಪ್ಟೆಂಬರ್, 12: ಸಾರಿಗೆ (KSRTC) ಬಸ್ ಹಾಗೂ ಕಾರಿನ ನಡುವೆ ಸೋಮವಾರ (ಸೆಪ್ಟೆಂಬರ್ 11) ಮಧ್ಯರಾತ್ರಿ ಮುಖಾಮುಖಿ ಡಿಕ್ಕಿಯಾದ್ದು, ಪರಿಣಾಣ ಕಾರಿನಲ್ಲಿದ್ದ 7 ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಬೇಲೇನಹಳ್ಳಿ ಗ್ರಾಮದ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು,ಕಾರಿನಲ್ಲಿದ್ದ 9 ಜನರಿಗೆ ಗಂಭೀರ ಗಾಯವಾಗಿದೆ. ನಂತರ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ರಾತ್ರಿ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ಇನ್ನು ಸಾರಿಗೆ ಬಸ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ಶಿವಮೊಗ್ಗದಿಂದ ತರೀಕೆರೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ತರೀಕೆರೆಯಿಂದ ಭದ್ರಾವತಿಗೆ ತೆರಳುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ 9 ಜನರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದವರು ಎಂದು ತಿಳಿದು ಬಂದಿದೆ. ಸದ್ಯ ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications