Road Accident: ಚಾರ್ಮಡಿ ಘಾಟ್ ಬಳಿ KSRTC ಬಸ್‌ಗಳ ಮುಖಾಮುಖಿ ಡಿಕ್ಕಿ, ಡ್ರೈವರ್‌ಗಳಿಗೆ ಗಂಭೀರ ಗಾಯ
ಚಿಕ್ಕಮಗಳೂರು, ಜುಲೈ, 07: ಎರಡು ಸರ್ಕಾರಿ (KSRTC) ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಡ್ರೈವರ್‌ಗಳು ಗಂಭೀರ ಗಾಯಗೊಂಡ ಘಟನೆ ಚಾರ್ಮಾಡಿ ಘಾಟ್‌ನಲ್ಲಿ ನಡೆದಿದೆ.
ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಡ್ರೈವರ್‌ಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಅಪಘಾತಕ್ಕೆ ರಸ್ತೆ ಕಾಮಾಗಾರಿಯೇ ಕಾರಣ ಎಂದು ಹೇಳಲಾಗಿದೆ. ಇನ್ನು ಅಪಘಾತಕ್ಕೀಡಾದ 2 ಬಸ್ಸುಗಳಲ್ಲಿ 80ಕ್ಕೂ ಹೆಚ್ಚು ಜನ ಪ್ರವಾಸಿಗರು ಇದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

ಭೀಕರ ಅಪಘಾತ ಸಂಭವಿಸಿದ ಬೆನ್ನಲ್ಲೇ ಚಾರ್ಮಾಡಿ ಘಾಟ್‌ನಲ್ಲಿ ರಸ್ತೆ ಕಾಮಗಾರಿಯನ್ನು ಕೂಡಲೇ ಮುಗಿಸುವಂತೆ ಅಲ್ಲಿನ ಸ್ಥಳೀಯರು ಆಗ್ರಹಿಸಿದ್ದಾರೆ. 2019ರಲ್ಲಿ ಕುಸಿದಿದ್ದ ಕಾಮಗಾರಿ ಇನ್ನೂ ಮುಗಿದಿಲ್ಲ. ಹಾಗೆಯೇ ಮಂಜು ಕೂಡ ಈ ಅಪಘಾತಕ್ಕೆ ಮೂಲ ಕಾರಣವಾಗಿದೆ ಅಂತಿದ್ದಾರೆ ಇಲ್ಲಿನ ಸ್ಥಳೀಯರು.
ಇನ್ನೂ ಕೂಡ ಚಾರ್ಮಾಡಿ ಘಾಟ್‌ನಲ್ಲಿ ಭಾರೀ ಪ್ರಮಾಣದ ಮಂಜು ಕವಿದ ಹಿನ್ನೆಲೆ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ಇನ್ನುಳಿದ ವಾಹನ ವಾಹನ ಸವಾರರು ಪರದಾಡಿದ ಘಟನೆಯು ನಡೆದಿದೆ. ಇನ್ನು ಕೆಲ ಪ್ರಯಾಣಿಕರು 10 ಕಿ.ಮೀ. ನಡೆದು ಕೊಟ್ಟಿಗೆಹಾರ ತಲುಪಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಇನ್ನು ಘಟನೆಯಲ್ಲಿ ಇನ್ನುಳಿದ ಗಾಯಗೊಂಡವರ ಮಾಹಿತಿ ತಿಳಿದುಬರಬೇಕಿದೆ.












Click it and Unblock the Notifications