ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಶೋಭಾ ಕರಂದ್ಲಾಜೆ ಹಲ್ಲೆ ಯತ್ನ ಆರೋಪ
Recommended Video
ಮಹಿಳಾ ಕಾಂಗ್ರೆಸ್ ಸದಸ್ಯರ ಪ್ರತಿಭಟನೆಯ ವೇಳೆ ಆರೋಪ ONEINDIA KANNADA
ಚಿಕ್ಕಮಗಳೂರು, ಜನವರಿ 7: ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭ ಮಹಿಳಾ ಕಾಂಗ್ರೆಸ್ ನಾಯಕಿಯೊಬ್ಬರಿಗೆ ಸಂಸದೆ ಶೋಭಾ ಕರಂದ್ಲಾಜೆ ಹಲ್ಲೆ ಯತ್ನ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈರುಳ್ಳಿ, ಅಡುಗೆ ಅನಿಲದ ಬೆಲೆ ಏರಿಕೆ ಖಂಡಿಸಿ ಇಂದು ಚಿಕ್ಕಮಗಳೂರಿನ ಜಿಲ್ಲಾ ಪಂಚಾಯತ್ ಎದುರು ಮಹಿಳಾ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ಕೈಗೊಂಡಿದ್ದರು. ಈ ಸಂದರ್ಭ ಸಂಸದೆ ಶೋಭಾ ಕರಂದ್ಲಾಜೆಗೆ ಸದಸ್ಯೆಯೊಬ್ಬರು ಈರುಳ್ಳಿ ಹಾರ ಹಾಕಲು ಮುಂದಾಗಿದ್ದರು.

ಆಗ ಮನವಿ ಸ್ವೀಕರಿಸದೇ ಕಾರ್ ನಲ್ಲಿ ತೆರಳುತ್ತಿದ್ದ ಶೋಭಾ ಕರಂದ್ಲಾಜೆ, ಈರುಳ್ಳಿ ಹಾರ ಹಾಕಲು ಯತ್ನಿಸಿದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ನಗೀನಾ ಎಂಬುವವರ ಮೇಲೆ ಹಲ್ಲೆಗೆ ಯತ್ನ ನಡೆದಿದೆ ಎಂದು ಶೋಭಾ ಕರಂದ್ಲಾಜೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.












Click it and Unblock the Notifications