ಚಾರ್ಮಾಡಿ ಘಾಟಿಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ

ಚಿಕ್ಕಮಗಳೂರು, ಸೆಪ್ಟೆಂಬರ್ 1: ಸತತವಾಗಿ ಸುರಿದ ಭಾರಿ ಮಳೆಗೆ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡಕುಸಿತ ಉಂಟಾಗಿದ್ದರಿಂದ ಭಾರೀ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿತ್ತು.

Recommended Video

      KR Marketನಲ್ಲಿ 5 ತಿಂಗಳಿನ ಬಳಿಕ ವ್ಯಾಪಾರ ಶುರು | Oneindia Kannada

      ಆದರೆ ಈಗ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದು, ಇಂದಿನಿಂದ ದಿನದ 24 ಗಂಟೆಯೂ ಲಘು ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ.

      ಮಳೆ ಮತ್ತು ಗುಡ್ಡ ಕುಸಿತದಿಂದ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ಮಾತ್ರ ಅವಕಾಶ‌ ನೀಡಲಾಗಿತ್ತು. ಇಂದಿನಿಂದ ರಾತ್ರಿ ಸಂಚಾರಕ್ಕೂ ಅವಕಾಶವನ್ನು ಚಿಕ್ಕಮಗಳೂರು ಜಿಲ್ಲಾಡಳಿತ ನೀಡಿದೆ.

       Chikkamagaluru: Allowed For Light Vehicle Traffic In Charmadi Ghat

      ಲಘು ವಾಹನಗಳ ಜೊತೆ ಕೆ.ಎಸ್.ಆರ್.ಟಿ.ಸಿ ಹಾಗೂ ಮಿನಿ ಬಸ್ ಗಳಿಗೂ ಅವಕಾಶ ನೀಡಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ. ಚಿಕ್ಕಮಗಳೂರಿಂದ ಮೂಡಿಗೆರೆ ತಾಲೂಕು ಮೂಲಕ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ಇದಾಗಿದೆ.

      ಎರಡು ದಿನಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಹಾಕಿದ್ದ ನಿರ್ಬಂಧವನ್ನು ಜಿಲ್ಲಾಡಳಿತ ಸಡಿಲಗೊಳಿಸಿತ್ತು. ಪ್ರವಾಸಿಗರು ಕೋವಿಡ್ ಸಂಬಂಧ ಎಲ್ಲಾ ನಿಯಮಗಳನ್ನು ಪಾಲನೆ ಮಾಡಿ, ಪ್ರವಾಸಿ ತಾಣಗಳಿಗೆ ತೆರಳಲು ಅವಕಾಶ ಕಲ್ಪಸಿ ಜಿಲ್ಲಾಧಿಕಾರಿ ಬಗಾದಿ ಗೌತಮ್ ಸೂಚಿಸಿದ್ದಾರೆ.

       Chikkamagaluru: Allowed For Light Vehicle Traffic In Charmadi Ghat

      ಇನ್ನು ಪ್ರವಾಸಿ ತಾಣಗಳಲ್ಲಿ, ಧಾರ್ಮಿಕ ಸ್ಥಳಗಳಲ್ಲಿ, ಹೋಟೆಲ್, ರೆಸಾರ್ಟ್, ಹೋಂ ಸ್ಟೇಗಳಲ್ಲಿ ಕೊರೊನಾ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದ್ದು, ದೊಡ್ಡ ದೊಡ್ಡ ವಾಹನಗಳಲ್ಲಿ ಗುಂಪುಗುಂಪಾಗಿ ಪ್ರವಾಸಿಗರು ಬರುವುದನ್ನು ನಿರ್ಬಂಧಿಸಲಾಗಿದ್ದು, ಸಣ್ಣ ವಾಹನಗಳಲ್ಲಿ ಬರುವವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+