ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರು: ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿ ಸೆರೆ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಮೇ 28: ಗಾಂಜಾ ಕೇಸ್ ನಲ್ಲಿ ಬಂಧಿತನಾಗಿದ್ದ ವಿಚಾರಣಾಧೀನ ಖೈದಿ ಚಿಕಿತ್ಸೆಗೆಂದು ದಾಖಲಾಗಿದ್ದ ವೇಳೆ ಸರ್ಕಾರಿ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿಯನ್ನು ಜಿಲ್ಲೆಯ ಕಡೂರು ಪೊಲೀಸರು ಶಿವಮೊಗ್ಗ ತಾಲೂಕಿನ ಕುಂಸಿಯಲ್ಲಿ ಬಂಧಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಧನರಾಜ್ ಎಂಬುವನನ್ನ ಕಡೂರು ಪೊಲೀಸರು ಗಾಂಜಾ ಪ್ರಕರಣದಲ್ಲಿ ಬಂದಿಸಿದ್ದರು. ವಿಚಾರಣಾಧೀನ ಕೈದಿಯಾಗಿದ್ದ ಧನರಾಜ್ ಹೊಟ್ಟೆನೋವು ಎಂಬ ಕಾರಣಕ್ಕೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಧನರಾಜ್ ಶೌಚಾಲಯಕ್ಕೆ ಹೋಗಬೇಕೆಂದು ಕೇಳಿಕೊಂಡಿದ್ದ. ಈ ವೇಳೆ ಆಸ್ಪತ್ರೆಯಲ್ಲಿ ಕಾವಲಿಗೆ ಇದ್ದ ಸಿಬ್ಬಂದಿ ಆತನ ಕೈಗಳಿಗೆ ಹಾಕಿದ್ದ ಕೋಳವನ್ನು ಬಿಚ್ಚಿ ಕಳುಹಿಸಿದ್ದರು. ಆರೋಪಿ ಧನರಾಜ್ ಶೌಚಗೃಹಕ್ಕೆ ಹೋಗುವಾಗ ಸಿಬ್ಬಂದಿಯನ್ನು ಅದೇ ಶೌಚಾಲಯದ ಒಳಕ್ಕೆ ದೂಡಿ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದನು.

ಬಳಿಕ ಆರೋಪಿ ಧನರಾಜ್ ಗಾಗಿ ಜೈಲು ಸಿಬ್ಬಂದಿ ಹಾಗೂ ಪೊಲೀಸರು ಹುಡುಕಾಟ ಆರಂಭಿಸಿದರು. ಶಿವಮೊಗ್ಗ ತಾಲೂಕಿನ ಕುಂಸಿಯಲ್ಲಿ ಆರೋಪಿ ಧನರಾಜ್ ಇರುವುದನ್ನ ಖಚಿತಪಡಿಸಿಕೊಂಡ ಜೈಲು ಸಿಬ್ಬಂದಿ ಹಾಗೂ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

An inquisitive inmate who escaped from the hospital was arrested

ಆತನ ಬಳಿ ಯಾವುದೇ ಮೊಬೈಲ್ ಇಲ್ಲದಿದ್ದರೂ ಕೂಡ ಆರೋಪಿಯ ಜಾಡು ಹಿಡಿದು 48 ಗಂಟೆಯೊಳಗೆ ಪೊಲೀಸರು ಆತನನ್ನು ಸೆರೆ ಹಿಡಿದಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಎಸ್ಪಿ ಅಕ್ಷಯ್ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಕಡೂರು ಪಿ.ಎಸ್.ಐ. ರಮ್ಯಾ, ಜೈಲು ಸಿಬ್ಬಂದಿ ಪಾಲ್ಗೊಂಡಿದ್ದರು.

ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ, ಎರಡು ಹಸುಗಳು ಸಜೀವ ದಹನ:

ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಎರಡು ರಾಸುಗಳು ಜೀವಂತವಾಗಿ ಸುಟ್ಟು ಹೋಗಿರುವ ಕರುಣಾಜನಕ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಹಿರೇಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ನಡೆದಿದೆ.

ರೈತ ನಾಗೇಶ್ ಎಂಬುವರಿಗೆ ಸೇರಿದ ಎರಡು ಹಸುಗಳು ಸಜೀವ ದಹನವಾಗಿದೆ. ಶುಕ್ರವಾರ ರಾತ್ರಿ ಶನಿವಾರ ಬೆಳಗಿನ ಜಾವ ಈ ದುರ್ಘಟನೆ ಸಂಭವಿದೆ. ಶುಕ್ರವಾರ ರಾತ್ರಿ ಶಿವಪುರ ಗ್ರಾಮದ ನಾಗೇಶ್ ಮನೆಯಲ್ಲಿ ಯಾರೂ ಇರಲಿಲ್ಲ. ಮನೆ ಹಿಂಭಾಗದ ಕೊಟ್ಟಿಗೆಯಲ್ಲಿ ಎರಡು ರಾಸುಗಳನ್ನ ಕಟ್ಟಿದ್ದರು. ಮನೆಯಲ್ಲಿ ಯಾರು ಇಲ್ಲದ ವೇಳೆ ಆಕಸ್ಮಿಕ ಬೆಂಕಿ ತಗುಲಿದೆ ಎಂದು ಹೇಳಲಾಗಿದೆ. ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಎರಡು ರಾಸುಗಳು ಸಜೀವ ದಹನವಾಗಿವೆ.

An inquisitive inmate who escaped from the hospital was arrested

ರಾಸುಗಳನ್ನ ಹಗ್ಗದಿಂದ ಕಟ್ಟಿ ಹಾಕಿದ್ದರಿಂದ ಅವು ತಪ್ಪಿಸಿಕೊಳ್ಳಲು ಸಾಧ್ಯವಾಗದೆ. ಬೆಂಕಿಯ ಕೆನ್ನಾಲಿಗೆಯಲ್ಲಿ ಉಸಿರು ಚೆಲ್ಲಿವೆ. ಮನೆ ಮೇಲೆ ಹಾಗೂ ಸುತ್ತಮುತ್ತ ದಟ್ಟ ಹೊಗೆ ಆವರಿಸಿದ್ದರಿಂದ ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಧಾವಿಸಿದಾಗ ಬೆಂಕಿ ತಗುಲಿರುವುದು ತಿಳಿದು ಬಂದಿದೆ. ಸ್ಥಳಿಯರು ರಾಸುಗಳನ್ನ ರಕ್ಷಿಸಲು ಮುಂದಾದರೂ ಸಾಧ್ಯವಾಗಲಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಆ ವೇಳೆಗಾಗಲೇ ರಾಸುಗಳು ಬೆಂಕಿಯಲ್ಲಿ ಬೆಂದು ಉಸಿರು ಚೆಲ್ಲಿದ್ದವು. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ಅಭಿಷೇಕ್, ಕೊಪ್ಪ ಪಿ.ಎಸ್.ಐ. ಶ್ರೀನಾಥ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

English summary
shivamogga district kaduru police arrest Prisoner who escape from the hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X