ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರು; ಮತ್ತೊಂದು ಕೋವಿಡ್ ಕೇರ್ ಸೆಂಟರ್ ಆರಂಭ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಏಪ್ರಿಲ್ 27; "ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆ ಸೇರಿ ಒಟ್ಟು 700 ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಹಾಸಿಗೆ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ" ಎಂದು ಚಿಕ್ಕಮಗಳೂರು ಶಾಸಕ ಸಿ. ಟಿ. ರವಿ ಹೇಳಿದರು.

ಮಂಗಳವಾರ ಸಿ. ಟಿ. ರವಿ ಪಿಪಿಇ ಕಿಟ್ ಧರಿಸಿ ಜಿಲ್ಲಾಸ್ಪತ್ರೆಗೆ ತೆರಳಿ ಕೋವಿಡ್ ಸೋಂಕಿತರನ್ನು ಭೇಟಿಯಾಗಿ ಧೈರ್ಯ ತುಂಬಿದರು. ಆಸ್ಪತ್ರೆಯಲ್ಲಿನ ಚಿಕಿತ್ಸೆಯ ವಿವರಗಳನ್ನು ಪಡೆದರು. ಸುಮಾರು ಅರ್ಧಗಂಟೆಗಳ ಕಾಲ ಸೋಂಕಿತರನ್ನು ಆತ್ಮೀಯವಾಗಿ ಮಾತನಾಡಿಸಿದರು.

ಸೋಂಕಿಗಿಂತ ಕೋವಿಡ್ ಕೇಂದ್ರಗಳ ಅವ್ಯವಸ್ಥೆಯೇ ಹೆಚ್ಚು ಭಯ ಹುಟ್ಟಿಸುತ್ತವೆಸೋಂಕಿಗಿಂತ ಕೋವಿಡ್ ಕೇಂದ್ರಗಳ ಅವ್ಯವಸ್ಥೆಯೇ ಹೆಚ್ಚು ಭಯ ಹುಟ್ಟಿಸುತ್ತವೆ

ಬಳಿಕ ಅವರು ಆಸ್ಪತ್ರೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಜೊತೆಗೆ ಸಮಾಲೋಚನೆ ನಡೆಸಿ ಆಸ್ಪತ್ರೆಗೆ ಬರುತ್ತಿರುವ ರೋಗಿಗಳ ಸಂಖ್ಯೆ, ನೀಡುತ್ತಿರುವ ಚಿಕಿತ್ಸೆ ಹಾಗೂ ಲಸಿಕೆ ಕಾರ್ಯಕ್ರಮದ ಕುರಿತು ಮಾಹಿತಿ ಪಡೆದರು.

ಕೋವಿಡ್; ಬೆಂಗಳೂರು ಉತ್ತರದಲ್ಲಿ ತೆರೆದ ಚಿತಾಗಾರ ಸಿದ್ಧ ಕೋವಿಡ್; ಬೆಂಗಳೂರು ಉತ್ತರದಲ್ಲಿ ತೆರೆದ ಚಿತಾಗಾರ ಸಿದ್ಧ

Another COVID Care Center May Come Up In Chikkamagaluru

ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆ ಸೇರಿ ಒಟ್ಟು 700 ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಹಾಸಿಗೆ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯ 142 ಖಾಸಗಿ ಆಸ್ಪತ್ರೆ, 558 ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ನೀಡಲು ವ್ಯವಸ್ಥೆ ಮಾಡಲಾಗಿದೆ" ಎಂದರು.

ಕೋಲಾರ; ತಾಲೂಕಿಗೆ 2 ಕೋವಿಡ್ ಕೇರ್ ಸೆಂಟರ್ ಆರಂಭ ಕೋಲಾರ; ತಾಲೂಕಿಗೆ 2 ಕೋವಿಡ್ ಕೇರ್ ಸೆಂಟರ್ ಆರಂಭ

"ಜಿಲ್ಲಾಸ್ಪತ್ರೆಯಲ್ಲಿ 150 ಬೆಡ್‍ಗಳ ವ್ಯವಸ್ಥೆಯನ್ನು ಈಗಾಗಲೇ ಮಾಡಲಾಗಿದೆ. ಇನ್ನು 70 ಬೆಡ್ ಗಳನ್ನು ಹೆಚ್ಚು ಮಾಡಲು ಅವಕಾಶ ಇದೆ. ಜಿಲ್ಲಾಸ್ಪತ್ರೆಯಲ್ಲಿ 28 ವೆಂಟಿಲೇಟರ್ ವ್ಯವಸ್ಥೆ ಇದ್ದು, ಜಿಲ್ಲೆಯಲ್ಲಿ ಒಟ್ಟು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆ ಸೇರಿ 97 ವೆಂಟಿಲೇಟರ್ ವ್ಯವಸ್ಥೆ ಇದೆ. ಜಿಲ್ಲಾಸ್ಪತ್ರೆಯ ವೆಂಟಿಲೇಟರ್‌ನಲ್ಲಿ 4 ಜನರು ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 24 ವೆಂಟಿಲೇಟರ್ ಖಾಲಿ ಇದೆ" ಎಂದು ತಿಳಿಸಿದರು.

"ಈಗ 72 ಒಳ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ 403 ಜನರು ಸೋಂಕಿತರು ಪತ್ತೆಯಾಗಿದ್ದು. ಈಗಿನ ಪರಿಸ್ಥಿತಿಯಲ್ಲಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವಂತಹ ಸೋಂಕಿತ ಪ್ರಕರಣಗಳು ಕಡಿಮೆ ಇದ್ದು, ಹೋಂ ಕ್ವಾರಂಟೈನ್‍ನಲ್ಲಿ ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ" ಎಂದರು.

"ಜಿಲ್ಲೆಯಲ್ಲಿ ಇನ್ನು 7 ದಿನಕ್ಕೆ ಆಗುವಷ್ಟು ಆಕ್ಸಿಜನ್ ಸೌಲಭ್ಯವಿದ್ದು, ವೈದ್ಯರು, ಸಿಬ್ಬಂದಿಗಳ ಕೊರತೆಯ ನಡುವೆಯೂ ಉತ್ತಮವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಕೋವಿಡ್ ಮೊದಲನೇ ಅಲೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದೇವೆ. ಈ ಬಾರಿಯೂ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಜನಪ್ರತಿನಿಧಿಗಳ ಸಹಕಾರದಿಂದ ವಿಶ್ವಾಸದಿಂದ ನಿಂತುಕೊಂಡು ಪರಿಸ್ಥಿತಿಯನ್ನು ಎದುರಿಸುವ ಜೊತೆಗೆ ಹಿಮ್ಮೆಟಿಸಲು ಪ್ರಯತ್ನಿಸೋಣ" ಎಂದು ಕರೆ ನೀಡಿದರು.

ಕೋವಿಡ್ ಕೇರ್ ಸೆಂಟರ್; "ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯಲ್ಲಿ ಮತ್ತೊಂದು ಕೋವಿಡ್ ಕೇರ್ ಸೆಂಟರ್ ತೆರೆಯಲು ಚಿಂತಿಸಲಾಗುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ, ಇನ್ನಿತರ ಜನಪ್ರತಿನಿಧಿಗಳ ನೇತೃತ್ವದಲ್ಲಿ ವರ್ಚುವಲ್ ಸಭೆ ನಡೆಸಲಾಗುತ್ತದೆ" ಎಂದು ಸಿ. ಟಿ. ರವಿ ಹೇಳಿದರು.

Recommended Video

ಅಡುಗೆ ಮನೆಯಲ್ಲಿ ಆರೋಗ್ಯ..! ಸುಲಭದಲ್ಲಿ ಸಿಗುವ ಈ ಆಹಾರ ಆರೋಗ್ಯವೃದ್ಧಿಗೆ ಸಹಾಯಕ | Oneindia Kannada

"ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಇನ್ನೊಂದು ಕೋವಿಡ್ ಸೆಂಟರ್ ಅಗತ್ಯತೆ ಇದ್ದು ಈ ಬಗ್ಗೆ ಚಿಂತಿಸಲಾಗುತ್ತಿದ್ದು, ಶೀಘ್ರದಲ್ಲಿ ಮತ್ತೊಂದು ಕೋವಿಡ್ ಕೇರ್ ಸೆಂಟರ್ ತೆರೆಯಲಾಗುವುದು" ಎಂದು ತಿಳಿಸಿದರು.

English summary
Chikkamagaluru BJP MLA C. T. Ravi said that planning to establishing COVID care center for Isolation and management of asymptomatic COVID 19 cases in district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X