ಚಿಕ್ಕಮಗಳೂರಿನಲ್ಲಿ ಮಿತಿಮೀರಿದ ಕಳ್ಳಭಟ್ಟಿ ದಂಧೆ
ಚಿಕ್ಕಮಗಳೂರು, ಏಪ್ರಿಲ್ 22: ಲಾಕ್ ಡೌನ್ ಆಗಿರುವ ಸಂದರ್ಭದಲ್ಲಿ ಮದ್ಯ ಮಾರಾಟ ಬಂದ್ ಆಗಿದೆ. ಆದ್ದರಿಂದ ಚಿಕ್ಕಮಗಳೂರಿನಲ್ಲಿ ಕಳ್ಳಭಟ್ಟಿ ದಂಧೆ ಮಿತಿಮೀರಿದ್ದು, ಕಳ್ಳಭಟ್ಟಿಯನ್ನು ತಯಾರಿಸುವಾಗಲೇ ದಂಧೆಕೋರರು ಸಿಕ್ಕಿಬಿದ್ದಿದ್ದಾರೆ.
Recommended Video
ಚಿಕ್ಕಮಗಳೂರಿನಲ್ಲಿ ಕಳ್ಳಭಟ್ಟಿ ತಯಾರಿಸುತ್ತಿದ್ದ ಅಡ್ಡೆ ಮೇಲೆ ಪೊಲೀಸರ ದಾಳಿ | Oneindia Kannada
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ತ್ರಿಪುರ ಗ್ರಾಮದಲ್ಲಿ ತಯಾರಿಸುತ್ತಿದ್ದ ಕಳ್ಳಭಟ್ಟಿ ಅಡ್ಡೆ ಮೇಲೆ ಪೊಲೀಸರ ದಾಳಿ ಮಾಡಿದ್ದಾರೆ. ಬಣಕಲ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಶ್ರೀನಾಥ್ ರೆಡ್ಡಿ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ.

ಕಳ್ಳಭಟ್ಟಿ ಅಡ್ಡೆ ಮೇಲೆ ದಾಳಿ ಮಾಡಿದಾಗ, ಪರಾರಿಯಾಗಲು ಯತ್ನಿಸಿದ ಆರೋಪಿ ಮಣಿಯನ್ನು ಪೊಲೀಸರು ಬಂಧಿಸಿದ್ದಾರೆ. ಶೆಲ್, ಯೂರಿಯಾ ಹಾಕಿ ಕಳ್ಳಭಟ್ಟಿ ತಯಾರಿಕೆ ಮಾಡುತ್ತಿದ್ದರು.
ಕೊಳೆ ನಾಶಪಡಿಸಿ 40 ಲೀಟರ್ ಕಳ್ಳಭಟ್ಟಿ, ಬೈಕ್ ವಶಕ್ಕೆ ಪಡೆಯಲಾಗಿದ್ದು, ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.












Click it and Unblock the Notifications