ಚಿಕ್ಕಮಗಳೂರಿನಲ್ಲಿ ವಿಕಲಚೇತನರಿಗೆ ಕೃತಕ ಕೈ-ಕಾಲು ವಿತರಣೆ
ಚಿಕ್ಕಮಗಳೂರು, ಅಕ್ಟೋಬರ್, 27: ಜಿಲ್ಲೆಯಲ್ಲಿ ಈವರೆಗೆ ಹಂತಹಂತವಾಗಿ ಒಟ್ಟು 5 ಕೋಟಿ ರೂಪಾಯಿ ಮೊತ್ತದ ಪರಿಕರಗಳನ್ನು ವಿಶೇಷ ಚೇತನರಿಗೆ ವಿತರಿಸಲಾಗಿದೆ. ಈಗಾಗಲೇ 50 ಜನ ವಿಶೇಷ ಚೇತನರಿಗೆ ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಪರಿಕರಗಳನ್ನು ವಿತರಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಕಲಚೇತನರ, ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ವಾರ್ತಾ ಇಲಾಖೆ ಹಾಗೂ ಅಲಿಂಕೊ ಸಂಸ್ಥೆ ಬೆಂಗಳೂರು ಇವುಗಳ ಸಂಯುಕ್ತಾಶ್ರಯದಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ವಿಕಲಚೇತನರ ಕೃತಕ ಕೈ-ಕಾಲು ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಹಂತಹಂತವಾಗಿ ವಿಕಲಚೇತನರಿಗೆ ಪರಿಕರ ವಿತರಿಸಲಾಗಿದೆ. ಜಿಲ್ಲೆಯಲ್ಲಿ ವಿಶೇಷ ಚೇತನರು ಹಾಗೂ ಹಿರಿಯ ನಾಗರೀಕರಿಗೆ ವಿಶೇಷ ಸವಲತ್ತುಗಳನ್ನು ತಲುಪಿಸುವ ಉದ್ದೇಶದಿಂದ ಸಾಕಷ್ಟು ಯೋಜನೆಗಳನ್ನು ರೂಪುಗೊಳಿಸಲಾಗಿದೆ. ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮಾದರಿ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದ್ದು, ಅದರ ಪ್ರಯೋಜನಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ವಿಕಲಚೇತನರಿಗೆ ಕೃತಕ ಕೈ-ಕಾಲು ವಿತರಣೆ
ಜಿಲ್ಲೆಯಲ್ಲಿ 15,584 ವಿಶೇಷ ಚೇತನರನ್ನು ಗುರುತಿಸಲಾಗಿದ್ದು, ಸುಮಾರು 13,354 ಜನರಿಗೆ ಯುಡಿಐಡಿ ಕಾರ್ಡ್ ವಿತರಣೆ ಮಾಡಲಾಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಕಾರ್ಡ್ ವಿತರಿಸಿದ 2ನೇ ಜಿಲ್ಲೆಯಾಗಿದೆ. ಚಿಕ್ಕಮಗಳೂರಿನಲ್ಲಿ 623 ಪರಿಕರಗಳನ್ನು ವಿತರಿಸಲಾಗಿದ್ದು, 355 ಜನರಿಗೆ ಕೃತಕ ಅಂಗಾಂಗಗಳನ್ನು ಜೋಡಣೆ ಮಾಡಲಾಗಿದೆ. ಭಾರತ ಹಾಗೂ ಕರ್ನಾಟಕ ಸರ್ಕಾರದಿಂದ ವಿಶೇಷ ಚೇತನರಿಗೆ ಮಾಸಿಕ 1,400 ಗೌರವಧನ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಒಂದು ಕೋಟಿ ರೂಪಾಯಿ ವೆಚ್ಚದ ವಿಕಲಚೇತನರ ಭವನವನ್ನು ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. 50 ಲಕ್ಷ ರೂಪಾಯಿ ಮೌಲ್ಯದ ಸಂಪನ್ಮೂಲವನ್ನು ಈಗಾಗಲೇ ಕ್ರೋಢೀಕರಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಾಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಪಿ.ವೆಂಕಟೇಶ್, ತಾಲೂಕಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ತಾರಾನಾಥ್, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ.ಆನಂದ್, ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಾ ನಾಯ್ಕ್, ಅಲಿಂಕೊ ಸಂಸ್ಥೆಯ ಪ್ರಾಸ್ಥೆಟಿಸ್ಟ್ ಮತ್ತು ಆರ್ಥೋಟಿಸ್ಟ್ ನಿತೀಶ್ ಕುಮಾರ್, ವಿಕಲಚೇತನರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸೋಮಶೇಖರ್ ಹಾಗೂ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಚರಣ್‌ರಾಜ್.ಎನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications