ಚಿಕ್ಕಮಗಳೂರಿನಲ್ಲಿ ಹಲ್ಲೆ ಪ್ರಕರಣ; ದಲಿತ ಕಾರ್ಮಿಕರ ಮೇಲೂ ದೂರು, ಪ್ರತಿಭಟನೆ
ಚಿಕ್ಕಮಗಳೂರು, ಅಕ್ಟೋಬರ್, 13: ಚಿಕ್ಕಮಗಳೂರಿನಲ್ಲಿ ಕಾಫಿ ತೋಟದ ಮಾಲೀಕ ಜಗದೀಶ್ ಎಂಬಾತ ನಮ್ಮನ್ನು ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆಂದು ದಲಿತ ಕೂಲಿ ಕಾರ್ಮಿಕರು ಆರೋಪ ಮಾಡಿದ್ದರು. ಈ ಮಧ್ಯೆ ತೋಟದ ಮಾಲೀಕ ಜಗದೀಶ್‌ನ ಪತ್ನಿಯು ಕಾರ್ಮಿಕರ ಮೇಲೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮನೆಗೆ ನುಗ್ಗಿ ಕಾರ್ಮಿಕರು ಕೊಲೆ ಮಾಡಲು ಯತ್ನಿಸಿದ್ದರು. ಅಲ್ಲದೆ ಮನೆಯ ಮುಂದಿದ್ದ ವಸ್ತುಗಳನ್ನು ಹಾನಿ ಮಾಡಿದ್ದಾರೆ ಎಂದು ಜಗದೀಶ್ ಪತ್ನಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ತೋಟದ ಮಾಲೀಕ ಜಗದೀಶ್ ಪತ್ನಿ ನೀಡದ ದೂರಿನ ಆಧಾರದ ಮೇಲೆ ದಲಿತ ಪೊಲೀಸರು ಕಾರ್ಮಿಕರ ವಿರುದ್ಧ 427, 506, 143, 144, 147, 148, 149, 448 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನು ಖಂಡಿಸಿದ ದಲಿತ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುವ ಮೂಲಕ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಗದೀಶ್ ಗೌಡ ಮತ್ತು ತಿಲಕ್ ಬಂಧನ ಮಾಡದ ಪೊಲೀಸರ ವಿರುದ್ಧ ಹರಿಹಾಯ್ದಿದ್ದಾರೆ. ದಲಿತ ಮಹಿಳೆ ಗರ್ಭಿಣಿ ಮೇಲೆ ಹಲ್ಲೆ ಮಾಡಿದ ಜಗದೀಶ್ ಗೌಡನ ವಿರುದ್ದ ಯಾಕೆ ಕ್ರಮ ಜರುಗಿಸಿಲ್ಲ? ಎಂದು ಪ್ರಶ್ನಿಸುವುದರ ಮೂಲಕ ಕಿಡಿಕಾರಿದ್ದಾರೆ.

ಬಾಳೆಹೊನ್ನೂರಿನಲ್ಲಿ ದಲಿತ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ಜಾಥಾ ಹಮ್ಮಿಕೊಂಡಿದ್ದಾರೆ. ಹತ್ತಕ್ಕೂ ಹೆಚ್ಚು ದಲಿತ ಸಂಘಟನೆಗಳು ಜಗದೀಶ್ ಗೌಡನನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಪ್ರತಿಭಟನೆಯಲ್ಲಿ ಸಾವಿರಕ್ಕೂ ಅಧಿಕ ಜನ ಪಾಲ್ಗೊಂಡು ಪೊಲೀಸ್ ಇಲಾಖೆ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು. ಬಾಳೆಹೊನ್ನೂರಿನ ನಾಡ ಕಚೇರಿಯಿಂದ ಜೆ.ಸಿ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ್ದು, ದಾರಿ ಉದ್ದಕ್ಕೂ ಜಗದೀಶ್ ಗೌಡ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದೂರು ದಾಖಲಾಗಿ ಎರಡು ದಿನ ಕಳೆದರೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ದಲಿತ ಸಂಘಟನೆಯ ಮುಖಂಡರು ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಠಾಣಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.












Click it and Unblock the Notifications