Police v/s Lawyer; ಕಾಫಿನಾಡಲ್ಲಿ ಸಿಐಡಿ ತನಿಖೆ ಆರಂಭ

ಚಿಕ್ಕಮಗಳೂರು, ಡಿಸೆಂಬರ್ 06; ಚಿಕ್ಕಮಗಳೂರು ಮಾತ್ರವಲ್ಲ ರಾಜ್ಯದಲ್ಲೇ ಭಾರೀ ಸಂಚಲನಕ್ಕೆ ಕಾರಣವಾಗಿರುವ ವಕೀಲನ ಮೇಲೆ ಪೊಲೀಸರ ಹಲ್ಲೆ ಪ್ರಕರಣದ ತನಿಖೆಯನ್ನು ಸಿಐಡಿ ಆರಂಭಿಸಿದೆ.

ಕರ್ನಾಟಕ ಸರ್ಕಾರ ವಕೀಲರು ಹಾಗೂ ಪೊಲೀಸರ ನಡುವಿನ ಜಟಾಪಟಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು. ಬುಧವಾರ ಸಿಐಡಿ ಅಧಿಕಾರಿಗಳು ಚಿಕ್ಕಮಗಳೂರಿಗೆ ಆಗಮಿಸಿದ್ದಾರೆ. ಎರಡು ತಂಡಗಳು ಆಗಮಿಸಿದ್ದು ಪ್ರಕರಣದ ಇಂಚಿಂಚೂ ತನಿಖೆಗೆ ಮುಂದಾಗಿದ್ದಾರೆ.

ತೀವ್ರ ಸಂಘರ್ಷಕ್ಕೆ ಕಾರಣವಾಗಿದ್ದ ವಕೀಲರು ಹಾಗೂ ಪೊಲೀಸರ ಪ್ರಕರಣದ ತನಿಖೆ ಚುರುಕುಗೊಳ್ಳಲಿದೆ. ಸಿಐಡಿ ಅಧಿಕಾರಿಗಳು ಚಿಕ್ಕಮಗಳೂರು ಪೊಲೀಸರ ಬಳಿ ಪ್ರಾಥಮಿಕ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ಇದರಿಂದಾಗಿ ಸಿಐಡಿ ತನಿಖೆ ಆರಂಭಗೊಂಡಂತಾಗಿದೆ.

Attack On Lawyer By Police At Chikkamagaluru CID Begins Probe

ಕಾಫಿನಾಡಲ್ಲಿ ಸಿಐಡಿ ತಂಡ; ಚಿಕ್ಕಮಗಳೂರಿಗೆ ಆಗಮಿಸಿದ ಸಿಐಡಿ ಪೊಲೀಸರ ತಂಡದಲ್ಲಿ ಸಿಐಡಿ ಎಸ್ಪಿ ವೆಂಕಟೇಶ್, ಡಿವೈಎಸ್ಪಿ ಉಮೇಶ್, ಸಿಐಡಿ ಕಾನೂನು ಸಲಹೆಗಾರ ಎಸ್‌. ಆರ್. ಕಾಳೆ ಸೇರಿ ಐವರು ಇದ್ದಾರೆ. ಚಿಕ್ಕಮಗಳೂರು ನಗರದ ಪ್ರವಾಸಿ ಮಂದಿರಕ್ಕೆ ಸಿಐಡಿ ಪೊಲೀಸರು ಆಗಮಿಸಿದ್ದು ಪೊಲೀಸರು ಹಾಗೂ ವಕೀಲರ ಗಲಾಟೆ ಪ್ರಕರಣದ ತನಿಖೆ ಆರಂಭಿಸಿದ್ದಾರೆ. ನವೆಂಬರ್ 30ರಂದು ಪೊಲೀಸ್ ಹಾಗೂ ವಕೀಲರ ಮಧ್ಯೆ ನಡೆದಿದ್ದ ಗಲಾಟೆ ಬಗ್ಗೆ ವಿವರವಾದ ತನಿಖೆ ನಡೆಯಲಿದೆ.

ಹೆಲ್ಮೆಟ್ ಹಾಕಿಲ್ಲವೆಂದು ವಕೀಲ ಪ್ರೀತಮ್‌ ಮೇಲೆ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂಬುದು ಆರೋಪ. ಈ ಘಟನೆ ಬಳಿಕ ಪೊಲೀಸರು ಮತ್ತು ವಕೀಲರ ನಡುವೆ ಜಟಾಪಟಿ ನಡೆಯುತ್ತಿದೆ. ವಕೀಲ ಪ್ರೀತಮ್ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಸಿಬ್ಬಂದಿಯನ್ನು ಬಂಧಿಸಬೇಕು ಎಂದು ವಕೀಲರು ಒತ್ತಾಯ ಮಾಡುತ್ತಿದ್ದಾರೆ. ಪೊಲೀಸರನ್ನು ಬಂಧಿಸಬಾರದು ಎಂದು ವಿವಿಧ ಠಾಣೆಗಳ ಪೊಲೀಸರು ಕೆಲಸ ನಿಲ್ಲಿಸಿ ಪ್ರತಿಭಟನೆ ಮಾಡಿದ್ದರು.

ಸಿಐಡಿ ಪೊಲೀಸರ ತಂಡ ಪೊಲೀಸರು ಮತ್ತು ಹಲ್ಲೆಗೊಳಗಾದ ವಕೀಲ ಪ್ರೀತಮ್ ವಿಚಾರಣೆ ನಡೆಸಲಿದ್ದಾರೆ. 6 ಜನ ಪೊಲೀಸರ ಮೇಲೆ ಕೇಸ್ ದಾಖಲಾಗಿದ್ದು ಪಿಎಸ್ಐ ಮಹೇಶ್, ಓರ್ವ ಎಎಸ್ಐ, ಹೆಡ್ ಕಾನ್ ಸ್ಟೇಬಲ್, ಮೂವರು ಪೇದೆಗಳ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ನ್ಯಾಯಕ್ಕಾಗಿ ಆಗ್ರಹಿಸಿ ಪೊಲೀಸರು, ವಕೀಲರು ಒಬ್ಬರ ಮೇಲೊಬ್ಬರು ಪ್ರಕರಣ ದಾಖಲಿಸಿದ್ದರು. ಸದ್ಯ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿತ್ತು.

ಇಂದಿನಿಂದ ತನಿಖೆ ಆರಂಭಿಸಿದ ಸಿಐಡಿ ಪೊಲೀಸರು ಡಿಸೆಂಬರ್ 9ಕ್ಕೆ ಮದ್ಯಂತರ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಸಲಿದ್ದಾರೆ. ಪೊಲೀಸ್‌ ಅಧಿಕಾರಿಗೆ ಜೀವ ಬೆದರಿಕೆ ಹಾಕಿದ ಮತ್ತು ಅವರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಚಿಕ್ಕಮಗಳೂರಿನ ನಾಲ್ವರು ವಕೀಲರ ಮೇಲೆ ದಾಖಲಿಸಿದ್ದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ಪೊಲೀಸರು ವಕೀಲರ ಮೇಲೆ ಎಫ್‌ಐಆರ್ ದಾಖಲು ಮಾಡಿದ್ದರು. ಚಿಕ್ಕಮಗಳೂರಿನ ವಕೀಲರಾದ ಡಿ. ಬಿ. ಸುಜೇಂದ್ರ, ಎ. ಕೆ. ಭುವನೇಶ್‌, ಕೆ. ಬಿ. ನಂದೀಶ್‌ ಮತ್ತು ಎಚ್‌. ಎಂ. ಸುಧಾಕರ್‌ ತಮ್ಮ ವಿರುದ್ಧದ ಎಫ್ಐಆರ್‌ ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್‌ ಚಂದನ್‌ ಗೌಡರ್‌ ಅವರ ಪೀಠ ಎಫ್‌ಐಆರ್‌ಗೆ ತಡೆ ನೀಡಿ ಆದೇಶಿಸಿದೆ. ವಕೀಲ ಪ್ರೀತಮ್‌ ಮೇಲೆ ಪೊಲೀಸರು ದಾಖಲಿಸಿಕೊಂಡಿರುವ ಪ್ರತಿ ದೂರಿಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಟೌನ್‌ ಠಾಣಾ ಪೊಲೀಸರಿಗೆ ನ್ಯಾಯಪೀಠ ನೋಟಿಸ್‌ ಜಾರಿಗೊಳಿಸಿದೆ.

ಮತ್ತೊಂದು ಕಡೆ ಹಲ್ಲೆಗೊಳಗಾದ ವಕೀಲ ಪ್ರೀತಮ್‌ಗೆ ಪ್ರಕರಣದಲ್ಲಿ ಜಾಮೀನು ಸಿಕ್ಕಿದೆ. ಪೊಲೀಸರನ್ನು ಬಂಧಿಸಬೇಕು ಎಂದು ವಕೀಲರು ಮೌನ ಹೋರಾಟ ನಡೆಸುತ್ತಿದ್ದಾರೆ. ಕೈಗೆ ಕೆಂಪು ಪಟ್ಟಿ ಧರಿಸಿ ಕೋರ್ಟ್‌ಗೆ ಹಾಜರಾದರು.

ಕೋರ್ಟ್ ಕಲಾಪದಲ್ಲಿ ಭಾಗವಹಿಸಿದೇ ವಿಚಾರಣೆಯ ದಿನಾಂಕ ಪಡೆದು ವಕೀಲರು ವಾಪಸ್ ಆಗುತ್ತಿದ್ದಾರೆ. ಪೊಲೀಸ್‌ ಸಿಬ್ಬಂದಿ ಬಂಧಿಸುವಂತೆ ಪಟ್ಟು ಹಿಡಿದಿರುವ ವಕೀಲರು ಪೊಲೀಸರ ಬಂಧನವಾಗುವವರೆಗೂ ಕೋರ್ಟ್ ಕಲಾಪದಲ್ಲಿ ಭಾಗವಹಿಸದಿರಲು ತೀರ್ಮಾನ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+