ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಸವರಾಜ ಬೊಮ್ಮಾಯಿ ಸಂಪುಟ; ಚಿಕ್ಕಮಗಳೂರಿಗೆ ತಪ್ಪಿದ ಸಚಿವ ಸ್ಥಾನ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಆಗಸ್ಟ್ 04; ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ. 29 ಶಾಸಕರು ಬುಧವಾರ ಸಚಿವರಾಗಿ ಸಂಪುಟವನ್ನು ಸೇರುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಗೆ ಸಚಿವ ಸ್ಥಾನ ಕೈತಪ್ಪಿದೆ.

ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಮೂಡಿಗೆರೆ ಶಾಸಕ ಎಂ. ಪಿ. ಕುಮಾರಸ್ವಾಮಿ ಸಚಿವರಾಗಲಿದ್ದಾರೆ ಎಂಬ ನಿರೀಕ್ಷೆ ಇತ್ತು. ಆದರೆ ಸಚಿವರ ಪಟ್ಟಿ ಬಿಡುಗಡೆಯಾಗಿದ್ದು ಕುಮಾರಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದೆ.

BREAKING: ಕೊನೆಗೂ ಬಿಜೆಪಿ ಹೈಕಮಾಂಡ್ ಒಪ್ಪಿಗೆ: ಬುಧವಾರ ಮಧ್ಯಾಹ್ನ 2 ಗಂಟೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ!BREAKING: ಕೊನೆಗೂ ಬಿಜೆಪಿ ಹೈಕಮಾಂಡ್ ಒಪ್ಪಿಗೆ: ಬುಧವಾರ ಮಧ್ಯಾಹ್ನ 2 ಗಂಟೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ!

ಸ್ವತಃ ಶಾಸಕರು ಈ ಕುರಿತು ಫೇಸ್‌ಬುಕ್ ಪೋಸ್ಟ್ ಹಾಕಿದ್ದಾರೆ. 'ಮುಂದಿನ ಕೆಲ ದಿನಗಳಲ್ಲಿ ಸಂಪುಟ ವಿಸ್ತರಣೆ ನಡೆಯುವ ಸಂದರ್ಭದಲ್ಲಿ ನನ್ನನ್ನು ಪರಿಗಣಿಸುವುದಾಗಿಯೂ ಭರವಸೆ ನೀಡಿದ್ದಾರೆ" ಎಂದು ಅವರು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಬೊಮ್ಮಾಯಿ ಸಂಪುಟ ಸೇರಲಿದ್ದಾರೆಯೇ ಗೂಳಿಹಟ್ಟಿ ಶೇಖರ್? ಬೊಮ್ಮಾಯಿ ಸಂಪುಟ ಸೇರಲಿದ್ದಾರೆಯೇ ಗೂಳಿಹಟ್ಟಿ ಶೇಖರ್?

Basavaraj Bommai Cabinet No Minister Post For Chikkamagaluru District

ಶಾಸಕರ ಫೇಸ್ ಬುಕ್ ಪೋಸ್ಟ್; ಆತ್ಮೀಯ ನನ್ನ ವಿಧಾನಸಭಾ ಕ್ಷೇತ್ರದ ಬಂಧುಗಳೇ, ಈಗ ತಾನೇ ವಿಧಾನಸೌಧದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ನನ್ನನ್ನು ಕರೆಸಿ ಇಂದಿನ ಸಂಪುಟದಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಯಾವುದೇ ಸಚಿವ ಸ್ಥಾನ ನೀಡಲಾಗುತ್ತಿಲ್ಲ ಹಾಗೂ ಸರ್ಕಾರಕ್ಕೆ ನನ್ನ ಬೆಂಬಲವನ್ನು ಕೋರಿದರು.

ಸಂಪುಟ ವಿಸ್ತರಣೆ ಬೆನ್ನಲ್ಲೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ: ರಾಜೀನಾಮೆ ಬೆದರಿಕೆ!ಸಂಪುಟ ವಿಸ್ತರಣೆ ಬೆನ್ನಲ್ಲೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ: ರಾಜೀನಾಮೆ ಬೆದರಿಕೆ!

ಹಾಗೆ ನನ್ನ ಕ್ಷೇತ್ರಕ್ಕೆ ಹಾಗೂ ಚಿಕ್ಕಮಗಳೂರು ಜಿಲ್ಲೆ ಅಭಿವೃದ್ಧಿಗೆ ಪ್ರಾಶಸ್ತ್ಯ ನೀಡುವುದಾಗಿಯೂ, ಮುಂದಿನ ಕೆಲ ದಿನಗಳಲ್ಲಿ ಸಂಪುಟ ವಿಸ್ತರಣೆ ನಡೆಯುವ ಸಂದರ್ಭದಲ್ಲಿ ನನ್ನನ್ನು ಪರಿಗಣಿಸುವುದಾಗಿಯೂ ಭರವಸೆ ನೀಡಿದ್ದಾರೆ.

ಭರವಸೆ ನೀಡಿದ ಮಾನ್ಯ ಮುಖ್ಯಮಂತ್ರಿಗಳಿಗೆ, ನನಗಾಗಿ ಪ್ರಾರ್ಥನೆ ಸಲ್ಲಿಸಿ ನಿರೀಕ್ಷೆ ಇಟ್ಟುಕೊಂಡಿದ್ದ ಕ್ಷೇತ್ರದ ಜನತೆಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ.

ಈ ಸರ್ಕಾರ ಅತ್ಯಂತ ಸುಭದ್ರವಾಗಿ ಕೆಲಸ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ, ಹಾಗೂ ಕ್ಷೇತ್ರದ ಅಭಿವೃದ್ಧಿ ಮಾಡುತ್ತಾ ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸೋಣಾ, ನನ್ನ ಮೇಲಿನ ನಿಮ್ಮ ಪ್ರೀತಿಗೆ ನಿಮ್ಮೆಲ್ಲರಿಗೂ ಮತ್ತೊಮ್ಮೆ ಆಭಾರಿಯಾಗಿದ್ದೇನೆ.

ಇಂತಿ
ಎಂಪಿ ಕುಮಾರಸ್ವಾಮಿ
ಶಾಸಕರು
ಮೂಡಿಗೆರೆ ವಿಧಾನಸಭಾ ಕ್ಷೇತ್ರ

ಸಂಪುಟ ವಿಸ್ತರಣೆ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಿ ಬುಧವಾರ ಬೆಳಗ್ಗೆ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಇಂದು ಮಧ್ಯಾಹ್ನ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ 29 ಸಚಿವರು ಬೊಮ್ಮಾಯಿ ಸಂಪುಟವನ್ನು ಸೇರುತ್ತಿದ್ದಾರೆ.

ಮೂವರು ಉಪಮುಖ್ಯಮಂತ್ರಿಗಳು ನೇಮಕವಾಗಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಹೈಕಮಾಂಡ್ ಉಪಮುಖ್ಯಮಂತ್ರಿ ಹುದ್ದೆಗೆ ಒಪ್ಪಿಗೆ ಕೊಟ್ಟಿಲ್ಲ. ಬೆಂಗಳೂರು ನಗರಕ್ಕೆ ಹೆಚ್ಚಿನ ಪ್ರಾಶಸ್ತ್ಯ ಸಿಕ್ಕಿದ್ದು, 8 ಶಾಸಕರು ಬೊಮ್ಮಾಯಿ ಸಂಪುಟ ಸೇರುತ್ತಿದ್ದಾರೆ.

ಸಂಪುಟದಕ್ಕೆ 8 ಲಿಂಗಾಯತ, 7 ಒಕ್ಕಲಿಗ, 7 ಒಬಿಸಿ, 3 ದಲಿತ, 3 ಎಸ್.ಸಿ., 1 ಎಸ್.ಟಿ ಶಾಸಕರು ಸೇರುತ್ತಿದ್ದಾರೆ. ಉಳಿದಂತೆ ಶಶಿಕಲಾ ಜೊಲ್ಲೆ ಮಹಿಳಾ ಕೋಟಾದಡಿ ಸಂಪುಟವನ್ನು ಸೇರುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿ. ಟಿ. ರವಿ ಸಚಿವರಾಗಿದ್ದರು; ಚಿಕ್ಕಮಗಳೂರು ಜಿಲ್ಲೆಗೆ ಸಚಿವ ಸ್ಥಾನ ಕೈತಪ್ಪಿದೆ. ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಚಿಕ್ಕಮಗಳೂರು ಶಾಸಕ ಸಿ. ಟಿ. ರವಿ ಸಂಪುಟದಲ್ಲಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಖಾತೆ ನಿರ್ವಹಣೆ ಮಾಡುತ್ತಿದ್ದರು.

ಆದರೆ ಸಿ. ಟಿ. ರವಿ ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಬಾರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಜಿಲ್ಲೆಗೆ ಮತ್ತೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು.

ಮೂಡಿಗೆರೆ ಕ್ಷೇತ್ರದ ಶಾಸಕ ಎಂ. ಪಿ. ಕುಮಾರಸ್ವಾಮಿ ದೆಹಲಿಗೆ ಹೋಗಿ ಲಾಬಿಯನ್ನು ಸಹ ಮಾಡಿದ್ದರು. ಆದರೆ ಮಂತ್ರಿಸ್ಥಾನ ಸಿಕ್ಕಿಲ್ಲ. ಶಾಸಕರು ಮಂತ್ರಿ ಸ್ಥಾನ ಕೈತಪ್ಪಿದ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಮಂತ್ರಿ ಮಾಡುವ ಭರವಸೆಯನ್ನು ಸ್ವತಃ ಮುಖ್ಯಮಂತ್ರಿಗಳಿ ನೀಡಿದ್ದಾರೆ ಎಂದು ಹೇಳಿದ್ದಾರೆ.

Recommended Video

ಭಾರತ-ಪಾಕ್ ನಡುವೆ ಶತೃತ್ವ ಬೆಳೆಯೋದಕ್ಕೆ ಈ ಅಂಶಗಳೇ ಕಾರಣ | Oneindia Kannada

English summary
No minister post for Chikkamagaluru district in the chief minister Basavaraj Bommai cabinet. Mudigere BJP MLA M. P. Kumaraswamy will not join cabinet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X