Mylara Lingeshwara Karnika: ಈ ಬಾರಿ ಇತಿಹಾಸ ಪ್ರಸಿದ್ದ ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕ ಹೀಗಿದೆ
ಚಿಕ್ಕಮಗಳೂರು, ಅಕ್ಟೋಬರ್, 25: ಚಿಕ್ಕಮಗಳೂರು ಜಿಲ್ಲೆ ಬೀರೂರು ಮಹಾನವಮಿ ಬಯಲಿನಲ್ಲಿ ಇಂದು (ಬುಧವಾರ) ಮುಂಜಾನೆ 4:42ಕ್ಕೆ ಇತಿಹಾಸ ಪ್ರಸಿದ್ದ ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕದ ನುಡಿಮುತ್ತು ಹೊರಬಿದ್ದಿದೆ. ದಶರಥ ಪೂಜಾರ್ ಅವ್ರಿಂದ ಅವರು ಈ ಭವಿಷ್ಯವಾಣಿಯನ್ನು ನುಡಿದಿದ್ದಾರೆ. ಹಾಗಾದರೆ ಈ ವರ್ಷದ ಭವಿಷ್ಯವಾಣಿ ಏನಿದೆ ಅನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
"ಇಟ್ಟ ರಾಮನ ಬಾಣ ಹುಸಿಯಿಲ್ಲ, ಸುರರು ಅಸೂರರು ಕಾದಾಡಿದರು. ಭಕ್ತ ಕೋಟಿಗೆ ಮಂಗಳವಾಯಿತು. ಶಾಂತಿಯ ಮಂತ್ರ ಪಠಿಸಿದರು. ಸರ್ವರು ಎಚ್ಚರದಿಂದ ಇರಬೇಕು ಪರಾಕ್" ಎಂದು ಚಿಕ್ಕಮಗಳೂರು ಜಿಲ್ಲೆಯ ಇತಿಹಾಸ ಪ್ರಸಿದ್ಧ ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕದ ನುಡಿಮುತ್ತು ಬುಧವಾರ ಹೊರಬಿದ್ದಿದೆ.

ಬೀರೂರು ಪಟ್ಟಣದಲ್ಲಿರುವ ಮೈಲಾರಲಿಂಗ ಸ್ವಾಮಿ ದೇವಸ್ಥಾನದಲ್ಲಿ ರಾತ್ರಿಯಿಂದ ಹೂವಿನ ಪಲಕ್ಕಿಯೊಂದಿಗೆ ಮೈಲಾರಲಿಂಗ ಸ್ವಾಮಿಯ ಮೆರವಣಿಗೆ ನಡೆದಿದ್ದು, ಈ ವೇಳೆ ಮೈಲಾರಲಿಂಗೇಶ್ವರ ದರ್ಶನಕ್ಕೆ ರಾಜ್ಯದ ವಿವಿಧ ಮೂಲೆಗಳಿಂದ ಭಕ್ತರು ಆಗಮಿಸಿದ್ದರು.












Click it and Unblock the Notifications