ಮೂಡಿಗೆರೆ ಬಳಿ ಅಪಘಾತ: ಬೆಂಗಳೂರು ಮೂಲದ ವ್ಯಕ್ತಿ ಸಾವು
ಚಿಕ್ಕಮಗಳೂರು, ಫೆಬ್ರವರಿ 25: ಸ್ಕೂಟಿಯಲ್ಲಿ ಬೆಂಗಳೂರಿನಿಂದ ಹೊರನಾಡಿಗೆ ಪ್ರವಾಸಕ್ಕೆ ಹೋಗಿದ್ದ ವ್ಯಕ್ತಿಯು ಅಪಘಾತದಲ್ಲಿ ಮೃತಪಟ್ಟಿದ್ದಾನೆ.
ಮೂಡಿಗೆರೆ ತಾಲೂಕಿನ ಕೆಳಗೂರು ಬಳಿ ಓಮಿನಿ ಮತ್ತು ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿ ಬೆಂಗಳೂರಿನ ರಾಜಾಜಿನಗರ ಮೂಲದ ದಿವಾಕರ್ ಎಂಬುವವನು.

ಇನ್ನೊಬ್ಬ ನೆಲಮಂಗಲದ ಧನರಾಜ್ ಎಂಬುವವರಿಗೆ ಗಂಭೀರ ಗಾಯವಾಗಿದೆ. ಹೊರನಾಡಿನಿಂದ ಬೆಂಗಳೂರಿಗೆ ಹೋಗುವಾಗ ಅವಘಡ ಸಂಭವಿಸಿದೆ.

ಸ್ಕೂಟಿಯಲ್ಲಿ 370 ಕಿ.ಮೀ. ಪ್ರವಾಸಕ್ಕೆ ಬಂದಿದ್ದರು. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications