Bhadra Dam: ಜೂನ್ 15ರಂದು ಭದ್ರಾ ಜಲಾಶಯದ ನೀರಿನ ಮಟ್ಟ ಎಷ್ಟಿದೆ ತಿಳಿಯಿರಿ
Bhadra Dam: ರಾಜ್ಯಕ್ಕೆ ಅವಧಿಗೂ ಮುನ್ನ ಮುಂಗಾರು ಎಂಟ್ರಿ ಕೊಟ್ಟ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಹಾಗೆಯೇ ಹಲವೆಡೆ ಕೆರೆ-ಕಟ್ಟೆಗಳು ತುಂಬಿ ಹರಿಯುತ್ತಿದ್ದು, ಕೆಲ ಜಲಾಶಯಗಳಿಗೂ ಸಹ ಅಲ್ಪ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಹಾಗಾದರೆ ಇಂದು (ಜೂನ್ 15) ಭದ್ರಾ ಜಲಾಶಯದ ನೀರಿನ ಮಟ್ಟ ಎಷ್ಟಿದೆ ಎನ್ನುವ ಮಾಹಿತಿಯನ್ನು ಅಂಕಿಅಂಶಗಳ ಸಹಿತ ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅವಧಿಗೂ ಮುನ್ನ ಎಂಟ್ರಿ ಕೊಟ್ಟ ಮುಂಗಾರಿನ ಆರ್ಭಟ ಕೆಲ ದಿನಗಳಿಂದ ತಗ್ಗಿದ್ದು, ಇದೀಗ ಮತ್ತೆ ಆರ್ಭಟ ಶುರು ಮಾಡಿದೆ. ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದು ಅವಾಂತರಗಳೇ ಸೃಷ್ಟಿಯಾಗಿವೆ. ಇನ್ನು ವರುಣಾರ್ಭಟ ಹಿನ್ನೆಲೆ ಭದ್ರಾ ಜಲಾಶಯಕ್ಕೆ ಅಲ್ಪ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ.

ಭದ್ರಾ ಜಲಾಶಯ ವ್ಯಾಪ್ತಿಯಲ್ಲಿ ಮುಂಗಾರು ಮಳೆ ಇದೀಗ ಮತ್ತೆ ಚುರುಕು ಪಡೆದಿದ್ದು, ಅಲ್ಪ ಪ್ರಮಾಣದಲ್ಲಿ ಒಳ ಹರಿವು ಇದೆ. ಜೂನ್ 15 ಭಾನುವಾರ ಬೆಳಗ್ಗೆ ವೇಳೆಗೆ ಒಳ ಹರಿವು 1,275 ಕ್ಯೂಸೆಕ್‌ನಷ್ಟಿದೆ. ಮೇ ತಿಂಗಳ ಕೊನೆಯಲ್ಲಿ ಸತತವಾಗಿ ಸುರಿದ ಮಳೆಯಿಂದ ಒಳ ಹರಿವು 8,000 ಕ್ಯೂಸೆಕ್ ದಾಟಿತ್ತು. ಆದರೆ, ಇದೀಗ ಮುಂಗಾರು ಏಂಟ್ರಿ ಬಳಿಕ ನಿಧಾನಗತಿಯಲ್ಲಿ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ.
ಜಲಾಶಯದ ಪ್ರಸ್ತುತ ನೀರಿನ ಮಟ್ಟ: ಭದ್ರಾ ಡ್ಯಾನ ಇದೀಗ ಪ್ರಸ್ತುತ ನೀರಿನ ಮಟ್ಟ 144.3 ಅಡಿ ಇದ್ದು, ಒಳ ಹರಿವು 1,275 ಕ್ಯೂಸೆಕ್ ಇದೆ. ಕಳೆದ ವರ್ಷ ಇದೇ ದಿನ 118.10 ಅಡಿ ಇತ್ತು. ಕಳೆದ ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆ ಈ ವಾರ ಮತ್ತೆ ಆರ್ಭಟ ಶುರು ಮಾಡಿದ್ದು ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.
ವರ್ಷದ ಜೂನ್ ಆರಂಭದಲ್ಲೇ ಮುಂಗಾರು ಎಂಟ್ರಿ ಕೊಟ್ಟು ಭಾರೀ ಮಳೆ ಸುರಿದ ಪರಿಣಾಮ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಪ್ರಮುಖ ಜಲಾಶಯಗಳು ತುಂಬಿ ಹರಿದಿದ್ದವು. ಅಲ್ಲದೆ, ದೊಡ್ಡ ಅವಾಂತರಗಳು ಕೂಡ ಸಂಭವಿಸಿದ್ದವು. ಮತ್ತೊಂದೆಡೆ ಮಳೆ ರೈತರ ಮುಖದಲ್ಲಿ ಮಂದಹಾಸ ಮೂಡಿಸಿತ್ತು. ಇನ್ನೂ ಈ ವರ್ಷ 2025ರಲ್ಲಿ ಅವಧಿಗೂ ಮುನ್ನ ಮೇ ಕೊನೆಯಲ್ಲಿ ಮುಂಗಾರು ಎಂಟ್ರಿ ಕೊಟ್ಟ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದಿತ್ತು.
ಮುಂದಿನ ದಿನಗಳಲ್ಲಿ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದು ವೇಳೆ ಹವಾಮಾನ ಇಲಾಖೆ ಮುನ್ಸೂನೆಯಂತೆ ಭಾರೀ ಮಳೆಯಾದ್ರೆ, ಕಳೆದ ವರ್ಷದಂತೆ ಈ ಬಾರಿಯೂ ಜಲಮೂಲಗಳು ತುಂಬಿಹರಿಯುವುದರಲ್ಲಿ ಯಾವುದೇ ಅನುಮಾನವಿಲ್ಲ.
ಸಾಮಾನ್ಯವಾಗಿ ಕರ್ನಾಟಕಕ್ಕೆ ಜೂನ್ ತಿಂಗಳ ಆರಂಭದಲ್ಲಿ ಮುಂಗಾರು ಎಂಟ್ರಿ ಕೊಡುತ್ತದೆ. ಆದರೆ ಈ ಬಾರಿ ಮೇ ತಿಂಗಳಿನಲ್ಲೇ ಎಂಟ್ರಿ ಕೊಟ್ಟಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಪರಿಣಾಮ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಮನೆಗಳು ಜಲಾವೃತ ಆಗಿರುವ ಘಟನೆಗಳು ನಡೆದಿವೆ. ಈ ಭಾಗದಲ್ಲಿ ವರುಣಾರ್ಭಟ ಇನ್ನೂ ಕೂಡ ನಿಂತಿಲ್ಲ. ಆದ್ದರಿಂದ ಇಲ್ಲಿನ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಕೂಡ ಸೂಚನೆ ನೀಡಿದೆ.












Click it and Unblock the Notifications