ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರಚಾರದ ವೇಳೆ ಶೋಭಾ ಕರಂದ್ಲಾಜೆಯನ್ನು ತರಾಟೆಗೆ ತೆಗೆದುಕೊಂಡ ಬಿದರೆ ಗ್ರಾಮಸ್ಥರು

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಏಪ್ರಿಲ್ 03:ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಬಳಿ ಸಮಸ್ಯೆ ಬಗೆಹರಿಸಿ ಎಂದು ಕೇಳಿಕೊಂಡ ಗ್ರಾಮಸ್ಥರ ವಿರುದ್ಧ ಬಿಜೆಪಿ ಮುಖಂಡರು ಹಲ್ಲೆಗೆ ಮುಂದಾದ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಎಸ್ ಬಿದರೆ ಗ್ರಾಮದಲ್ಲಿ ನಡೆದಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಸಂಸದೆ ಶೋಭಾ ಕರಂದ್ಲಾಜೆ ಎದುರೇ ಗ್ರಾಮಸ್ಥರು ಹಾಗೂ ಬಿಜೆಪಿ ಮುಖಂಡರು ವಾಗ್ವಾದ ನಡೆಸಿದ್ದು, ಕೆಲಸ ಮಾಡದೇ ಈಗ ವೋಟು ಕೇಳಲು ಬಂದಿದ್ದಾರೆ ಎಂದು ಶೋಭಾ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಕನ್ನಡ 13, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ 12 ಅಭ್ಯರ್ಥಿಗಳು ಕಣದಲ್ಲಿದಕ್ಷಿಣ ಕನ್ನಡ 13, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ 12 ಅಭ್ಯರ್ಥಿಗಳು ಕಣದಲ್ಲಿ

ಶೋಭಾ ಕರಂದ್ಲಾಜೆ ಪ್ರಚಾರದ ವೇಳೆ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದು, ಮೊದಲು ನೀರು ಕೊಡಿ, ಆಮೇಲೆ ವೋಟು ಕೇಳಿ ಎಂದು ಆಗ್ರಹಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಬಿಜೆಪಿ ಮುಖಂಡರು ಗ್ರಾಮಸ್ಥರ ಮೇಲೆ ಮುಗಿಬಿದ್ದಿದ್ದಾರೆ.

Bidare villagers have spoken against Shobha Karandlaje during the campaign

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಖಾಡ ಸಿದ್ಧಗೊಂಡಿದೆ. ಭಾರೀ ವಿರೋಧದ ನಡುವೆ ಸಂಸದೆ ಶೋಭಾ ಕರಂದ್ಲಾಜೆ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ. ಈ ನಡುವೆ ಶೋಭಾ ಕರಂದ್ಲಾಜೆ ವಿರುದ್ಧ ಇಂತಹ ಘಟನೆಗಳು ಎದುರಾಗುತ್ತಿರುವುದು ಇದೀಗ ಬಿಜೆಪಿಗರ ಆತಂಕಕ್ಕೆ ಕಾರಣವಾಗಿದೆ.

English summary
Lok Sabha Elections 2019:In Chikmagalur, Bidare villagers have spoken against Shobha Karandlaje during the campaign. Here's a brief report on this.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X