ಜಮ್ಮು ಕಾಶ್ಮೀರದಲ್ಲಿ 370, 35ಎ ರದ್ದು; ಚಿಕ್ಕಮಗಳೂರಿನಲ್ಲಿ ಸಂಭ್ರಮಾಚರಣೆ
Recommended Video
Article 370 | ಜಮ್ಮು ಕಾಶ್ಮೀರದ ಬಗ್ಗೆ ನರೇಂದ್ರ ಮೋದಿ ಐತಿಹಾಸಿಕ ನಿರ್ಣಯ | ಎಲ್ಲೆಲ್ಲೂ ಸಂಭ್ರಮ
ಚಿಕ್ಕಮಗಳೂರು, ಆಗಸ್ಟ್ 5: ನರೇಂದ್ರ ಮೋದಿ ಸರ್ಕಾರದಿಂದ ಐತಿಹಾಸಿಕ ಮಸೂದೆ ಮಂಡನೆ ಮಾಡಿದ್ದು, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಅಧಿಕಾರ, ಸ್ಥಾನಮಾನ ನೀಡುವ ಸಂವಿಧಾನದ 370 ಮತ್ತು 35ಎ ಅನುಚ್ಛೇದ ರದ್ದುಗೊಳಿಸಿದ ಬೆನ್ನಲ್ಲೇ ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು. ಸಂಭ್ರಮಾಚರಣೆಯಲ್ಲಿ ನರೇಂದ್ರ ಮೋದಿ, ಅಮಿತ್ ಶಾ ಗೆ ಜೈಕಾರ ಕೂಗಿದರು.

ಇದೇ ವೇಳೆ, ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಈ ನಡೆಗೆ ಮೆಚ್ಚುಗೆ ಸೂಚಿಸಿದ್ದಾರೆ. "ಕೇಂದ್ರ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ಮಾಡಿರುವುದು ಸ್ವಾಗತಾರ್ಹ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ನಿರ್ಣಯ ದೇಶದ ಪ್ರತಿಯೊಬ್ಬ ನಾಗರಿಕರಲ್ಲೂ ಹೆಮ್ಮೆ ಮೂಡಿಸಿದೆ' ಎಂದು ಹೇಳಿದ್ದಾರೆ.












Click it and Unblock the Notifications