BJP List: ಸಚಿವೆ ಶೋಭಾ ಕರಂದ್ಲಾಜೆ ಕ್ಷೇತ್ರ ಬದಲು!

ಬೆಂಗಳೂರು, ಮಾರ್ಚ್ 13: ಲೋಕಸಭೆ ಚುನಾವಣೆ 2024ಕ್ಕೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಯಾಗಿದೆ. ಕರ್ನಾಟಕದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಹಲವು ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪಿದೆ. ಉಡುಪಿ-ಚಿಕ್ಕಮಗಳೂರು ಹಾಲಿ ಸಂಸದೆ ಶೋಭಾ ಕರಂದ್ಲಾಜೆಗೆ ಕ್ಷೇತ್ರ ಬದಲಾವಣೆಯಾಗಿದೆ.

ಬುಧವಾರ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟಗೊಂಡಿದೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. 3 ಸೀಟು ಜೆಡಿಎಸ್‌ಗೆ ಬಿಟ್ಟು ಕೊಡಲಾಗುತ್ತದೆ ಎಂಬ ಮಾಹತಿ ಇದೆ. ಆದ್ದರಿಂದ ಇನ್ನೂ 5 ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಬಾಕಿ ಇದೆ.

BJP Candidate List Shobha Karandlaje To Contest From Bengaluru North

ಅಚ್ಚರಿ ಎಂಬಂತೆ 'ಗೋ ಬ್ಯಾಕ್ ಶೋಭಾ' ಎಂಬ ಅಭಿಯಾನ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಫಲ ಕೊಟ್ಟಿದೆ. ಹಾಲಿ ಸಂದಸೆ ಶೋಭಾ ಕರಂದ್ಲಾಜೆ ಕ್ಷೇತ್ರ ಬದಲಾವಣೆಯಾಗಿದೆ. ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಅವರಿಗೆ ನೀಡಲಾಗಿದೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅಭ್ಯರ್ಥಿ ಎಂದು ಬಿಜೆಪಿ ಘೋಷಣೆ ಮಾಡಿದೆ. ಈ ಮೂಲಕ ಹಲವು ದಿನಗಳಿಂದ ಹರಿದಾಡುತ್ತಿದ್ದ ಎಲ್ಲಾ ಸುದ್ದಿಗಳಿಗೆ ಬಿಜೆಪಿ ತೆರೆ ಎಳೆದಿದೆ.

ಸದಾನಂದ ಗೌಡರಿಗೆ ಟಿಕೆಟ್ ಇಲ್ಲ: ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಗೆ ಬೆಂಗಳೂರು ಉತ್ತರದ ಟಿಕೆಟ್ ನೀಡಲಾಗಿದೆ. ಈ ಮೂಲಕ ಕ್ಷೇತ್ರದ ಹಾಲಿ ಸಂಸದ ಡಿ. ವಿ. ಸದಾನಂದ ಗೌಡರಿಗೆ ಟಿಕೆಟ್ ಕೈ ತಪ್ಪಿದೆ.

ಶೋಭಾ ಕರಂದ್ಲಾಜೆ 2014ರ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಜಯಪ್ರಕಾಶ್ ಹೆಗ್ಡೆ (399,525 ಮತ) ಸೋಲಿಸಿ, 581,168 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು.

2019ರ ಚುನಾವಣೆಯಲ್ಲಿ 718,916 ಮತಗಳನ್ನು ಪಡೆದು ಗೆದ್ದರು. ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವರು ಸಹ ಆದರು. ಆದರೆ 2019ರಲ್ಲಿಯೂ ಅವರಿಗೆ ಟಿಕೆಟ್ ನೀಡಲು ವಿರೋಧ ವ್ಯಕ್ತವಾಗಿತ್ತು. ಈ ಬಾರಿಯೂ ಸಹ ಟಿಕೆಟ್ ಅವರಿಗೆ ಬೇಡ ಎಂದು ಅಭಿಯಾನ ನಡೆದಿತ್ತು.

ಅಂತಿಮವಾಗಿ ಶೋಭಾ ಕರಂದ್ಲಾಜೆ ಕ್ಷೇತ್ರ ಬದಲಾವಣೆಯಾಗಿದೆ. ಉಡುಪಿ-ಚಿಕ್ಕಮಗಳೂರು ಬಿಟ್ಟು ಅವರು ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಬಂದಿದ್ದಾರೆ.

ಉಡುಪಿ ಜಿಲ್ಲೆ ಕೋಟದ ಕೋಟ ಶ್ರೀನಿವಾಸ ಪೂಜಾರಿ ಬಿಲ್ಲವ ಸಮುದಾಯಕ್ಕೆ ಸೇರಿದವರು. 1999, 2010, 2016ರಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಅವರು ಆಯ್ಕೆಯಾಗಿದ್ದಾರೆ. 2012ರಲ್ಲಿ ಅವರು ಮುಜರಾಯಿ ಮತ್ತು ಮೀನಿಗಾರಿಕೆ ಖಾತೆ ಸಚಿವರಾಗಿದ್ದರು. 2018ರಲ್ಲಿಯೂ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಸಾರಿಗೆ, ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವರಾಗಿದ್ದರು.

ಸಂಜೆಯೇ ಸುಳಿವು ಕೊಟ್ಟಿದ್ದ ಡಿವಿಎಸ್: ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್‌ ಕೈ ತಪ್ಪುವ ಕುರಿತು ಸಂಜೆಯೇ ಡಿ. ವಿ. ಸದಾನಂದ ಗೌಡ ಫೇಸ್‌ಬುಕ್ ಪೋಸ್ಟ್ ಮೂಲಕ ಸೂಚನೆ ನೀಡಿದ್ದರು.

ತಮ್ಮ ಪೋಸ್ಟ್‌ನಲ್ಲಿ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂಧುಗಳೇ, ನನಗೆ ಕಳೆದ ಹತ್ತು ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದವನ್ನು ಮಾಡಿದ್ದೀರಿ. ನಾನು ನನ್ನ ಶಕ್ತಿಮೀರಿ ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ. ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜೊತೆಯಲ್ಲಿ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ನಿಮ್ಮ ಜೊತೆಗೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು
ಇಂತಿ ನಿಮ್ಮವನೇ ಆದ
ಡಿ. ವಿ. ಸದಾನಂದ ಗೌಡ ಎಂದು ಪೋಸ್ಟ್ ಹಾಕಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+