ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೆಡಿಎಸ್ ಕೈಯಿಂದ ಬಿಜೆಪಿ ತೆಕ್ಕೆಗೆ ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಚುಕ್ಕಾಣಿ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಅಕ್ಟೋಬರ್ 12: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಡಿ.ಎಸ್ ಸುರೇಶ್, ಉಪಾಧ್ಯಕ್ಷ ಸ್ಥಾನಕ್ಕೆ ಟಿ.ಎಲ್ ರಮೇಶ್ ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ ನೇತೃತ್ವದಲ್ಲಿ ಭಾನುವಾರ ತಡರಾತ್ರಿವರೆಗೂ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದ್ದು ಅದರಂತೆಯೇ ಎಲ್ಲವೂ ನಡೆದಿದೆ.

ಸೋಮವಾರ ಬೆಳಿಗ್ಗೆ ಬ್ಯಾಂಕ್ ಪ್ರಕ್ರಿಯೆಯಂತೆ ಅಧ್ಯಕ್ಷ ಸ್ಥಾನಕ್ಕೆ ತರೀಕೆರೆ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಂಘಗಳಿಂದ ನಿರ್ದೇಶಕರಾಗಿ ಆಯ್ಕೆಯಾಗಿದ್ದ ಶಾಸಕ ಡಿ.ಎಸ್ ಸುರೇಶ್ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಇತರೆ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕುರುಬ ಸಮಾಜದ, ಸಹಕಾರಿ ಕ್ಷೇತ್ರದಲ್ಲಿ ಹೆಸರು ಮಾಡಿರುವ ಟಿ.ಎಲ್ ರಮೇಶ್ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು.

ಮಂಜುನಾಥ ಗೌಡರಿಗೆ ಹಿನ್ನಡೆ; ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಹೊಸ ಅಧ್ಯಕ್ಷರುಮಂಜುನಾಥ ಗೌಡರಿಗೆ ಹಿನ್ನಡೆ; ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಹೊಸ ಅಧ್ಯಕ್ಷರು

ಇನ್ನುಳಿದ ಯಾವುದೇ ನಿರ್ದೇಶಕರು ನಾಮಪತ್ರ ಸಲ್ಲಿಸದ ಕಾರಣ ಇಬ್ಬರನ್ನು ಅವಿರೋಧವಾಗಿ ಆಯ್ಕೆಮಾಡಿ ಆಯ್ಕೆ ಮಾಡಿರುವುದಾಗಿ ಚುನಾವಣಾಧಿಕಾರಿಗಳು ಘೋಷಣೆ ಮಾಡಿದರು.

Chikkamagaluru: BJP Got Authority In Districts DCC Bank

ಕಾರ್ಯಕರ್ತರ ಸಂಭ್ರಮ: ಬೆಳಿಗ್ಗೆ 10 ಗಂಟೆಗೆ ಡಿಸಿಸಿ ಬ್ಯಾಂಕ್ ಎದುರಿಗೆ ಜಮಾಯಿಸಿದ್ದ ಸಹಕಾರಿ ಕ್ಷೇತ್ರದ ಹಿರಿಯ ದುರೀಣರು, ರೈತರು ಹಾಗೂ ಬಿಜೆಪಿ ಕಾರ್ಯಕರ್ತರು ಬ್ಯಾಂಕ್ ಎದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ನಂತರ ಬ್ಯಾಂಕ್ ಸಭಾಂಗಣದಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ನೇತೃತ್ವದಲ್ಲಿ ಅಭಿನಂದನಾ ಸಭೆ ನಡೆಸಲಾಯಿತು.

Recommended Video

ಹೇಳ್ದೆ ಕೇಳ್ದೆ ಕೊಟ್ರು ನೋಡಿ Ramuluge Shock!! | Oneindia Kannada

ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಸುರೇಶ್ ಹಾಗೂ ರಮೇಶ್ ಗೆ ರೈತರು, ಹಿರಿಯ ಸಹಕಾರಿ ದುರೀಣರು ಹಾಗೂ ಬಿಜೆಪಿ ಕಾರ್ಯಕರ್ತರು ಹೂವಿನ ಹಾರ, ಹೂಗುಚ್ಚ ನೀಡಿ ಶುಭಾಶಯ ಕೋರಿದರು.

English summary
DS Suresh and TL Ramesh elected as president and vice president for DCC Bank chikkamagaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X