ಅನ್ವರ್ ಕೊಲೆ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ
ಚಿಕ್ಕಮಗಳೂರು, ಜೂನ್ 22: ಬಿಜೆಪಿ ಮುಖಂಡ ಮಹಮದ್ ಅನ್ವರ್ ಕೊಲೆ ನಡೆದು ಒಂದು ವರ್ಷ ಕಳೆದರೂ ಆರೋಪಿಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಮಹಮದ್ ಅನ್ವರ್ ಕುಟುಂಬಸ್ಥರು ಉಪವಾಸ ಸತ್ಯಾಗ್ರಹವನ್ನು ಕೈಗೊಂಡಿದ್ದಾರೆ.
ಕೊಲೆ ನಡೆದು ಒಂದು ವರ್ಷವಾದರೂ ಪ್ರಕರಣದಲ್ಲಿ ಏನೂ ಬೆಳವಣಿಗೆಯಾಗಿಲ್ಲ. ಆರೋಪಿಗಳ ರಕ್ಷಣೆಗೆ ಪೊಲೀಸ್ ಇಲಾಖೆ ನಿಂತಿದೆ. ಆದ್ದರಿಂದ ಪ್ರಕರಣವನ್ನು ಸಿಬಿಐಗೆ ವಹಿಸಿ ಎಂದು ಕುಟುಂಬಸ್ಥರು ಒತ್ತಾಯಿಸಿದರು.
ಚಿಕ್ಕಮಗಳೂರಿನ ಗಾಂಧಿ ಪ್ರತಿಮೆ ಬಳಿ ಉಪವಾಸ ಸತ್ಯಾಗ್ರಹ ನಡೆಸಿದರು. ಈ ಸಮಯದಲ್ಲಿ ಬಿಜೆಪಿ ಮುಖಂಡರು ಹಾಗೂ ಕುಟುಂಬಸ್ಥರು ಪೊಲೀಸ್ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಎಲ್ಲಾ ಹಂತಗಳಲ್ಲೂ ಪೊಲೀಸ್ ಇಲಾಖೆ ವಿಫಲವಾಗಿದೆ. ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಆಗ್ರಹಿಸಿದರು.

ಕಳೆದ ವರ್ಷ ಬಿಜೆಪಿ ಮುಖಂಡ ಮಹಮದ್ ಅನ್ವರ್ ನನ್ನು ನಗರದ ಗೌರಿ ಕಾಲುವೆಯಲ್ಲಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಅಣ್ಣಾಮಲೈ ನೇತೃತ್ವದಲ್ಲಿ ಆರೋಪಿ ಸೆರೆಗೆ 3 ತಂಡಗಳ ರಚನೆ ಮಾಡಲಾಗಿತ್ತು.












Click it and Unblock the Notifications