ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪರಿಷತ್ ಫೈಟ್; ಸರ್ಕಾರಿ ಅಧಿಕಾರಿ ಕೈಯಲ್ಲಿ ಕಾಂಗ್ರೆಸ್ ಬಿ-ಫಾರಂ!

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ನವೆಂಬರ್ 24; ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪೂರ್ಣಗೊಂಡಿದೆ. ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗಾಯತ್ರಿ ಶಾಂತೇಗೌಡ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಬಿ-ಫಾರಂ ಅನ್ನು ಸರ್ಕಾರಿ ಅಧಿಕಾರಿ ಪಡೆದಿದ್ದಾರೆ ಎಂಬುದು ಈಗ ವಿವಾದಕ್ಕೆ ಕಾರಣವಾಗಿದೆ.

ಬಿಜೆಪಿ ಕಾನೂನು ಘಟಕದ ದೇವೇಂದ್ರ ಕುಮಾರ್ ಜೈನ್ ಎಂಬುವವರು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಈ ಕುರಿತು ದೂರು ನೀಡಿದ್ದಾರೆ. ಬೆಂಗಳೂರಿನಲ್ಲಿ ಅಬಕಾರಿ ಇಲಾಖೆಯ ಜಾರಿ ಅಧಿಕಾರಿಯಾಗಿರುವ ಬಿ. ಎಂ. ಸುನೀಲ್ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ, ಅವರ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ದೂರು ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಚಿಕ್ಕಮಗಳೂರು; ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಚಿಕ್ಕಮಗಳೂರು; ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ

ಬೆಂಗಳೂರಿನ ಕಾಂಗ್ರೆಸ್ ಪಕ್ಷದ ಕಚೇರಿಗೆ ಬಿ. ಎಂ. ಸುನೀಲ್ ತೆರಳಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಅವರಿಂದ ಚಿಕ್ಕಮಗಳೂರು ಕಾಂಗ್ರೆಸ್ ಅಭ್ಯರ್ಥಿ ಗಾಯಿತ್ರಿ ಶಾಂತೇಗೌಡರ ಪರವಾಗಿ ಬಿ-ಫಾರಂ ಪಡೆದು ಅಭ್ಯರ್ಥಿಗೆ ನೀಡಿರುವುದು ತಿಳಿದು ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪರಿಷತ್ ಫೈಟ್; ಕುಟುಂಬ ರಾಜಕೀಯದ ಬಗ್ಗೆ ಬಿಜೆಪಿ ಟ್ವೀಟ್! ಪರಿಷತ್ ಫೈಟ್; ಕುಟುಂಬ ರಾಜಕೀಯದ ಬಗ್ಗೆ ಬಿಜೆಪಿ ಟ್ವೀಟ್!

BJP Seeks Action Against Excise Department Official

ಸರ್ಕಾರಿ ಅಧಿಕಾರಿ ಬಿ-ಫಾರಂ ಪಡೆಯುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಈ ಕುರಿತ ಫೋಟೋಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಆದ್ದರಿಂದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಯಾವುದೇ ಸರ್ಕಾರಿ ಅಧಿಕಾರಿ ಯಾವುದೇ ರಾಜಕೀಯ ವ್ಯಕ್ತಿ ಅಥವಾ ಪಕ್ಷದ ಜೊತೆಗೆ ಗುರುತಿಸಿಕೊಂಡಿರಬಾರದು ಎಂಬ ನಿಯಮಾವಳಿ ಇದ್ದರೂ ಬಿ-ಫಾರಂ ಪಡೆದು ನಿಯಮ ಉಲ್ಲಂಘನೆಯನ್ನು ಮಾಡಿರುತ್ತಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪರಿಷತ್ ಚುನಾವಣೆ, ಕಾಂಗ್ರೆಸ್ ಅಭ್ಯರ್ಥಿಗಳು ಘೋಷಣೆ ಪರಿಷತ್ ಚುನಾವಣೆ, ಕಾಂಗ್ರೆಸ್ ಅಭ್ಯರ್ಥಿಗಳು ಘೋಷಣೆ

"ಬಿ. ಎಂ. ಸುನೀಲ್ ಸರ್ಕಾರಿ ಅಧಿಕಾರಿಯಾಗಿದ್ದು ಒಂದು ಪಕ್ಷದ ಏಜೆಂಟರಂತೆ ಚುನಾವಣೆಯಲ್ಲಿ ಭಾಗವಹಿಸಿದ್ದಾರೆ. ಅವರನ್ನು ಅಮಾನತು ಮಾಡಿ ಎಂದು ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಈಗಾಗಲೇ ದೂರು ಸಲ್ಲಿಸಲಾಗಿದೆ" ಎಂದು ಚಿಕ್ಕಮಗಳೂರು ಜಿಲ್ಲಾ ವಕ್ತಾರ ವರಸಿದ್ಧಿ ವೇಣುಗೋಪಾಲ್ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಅಧಿಕಾರಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಒಳಗೊಂಡಂತೆ ಇನ್ನಿತರ ಪದಾಧಿಕಾರಿಗಳೂ ನೀತಿ ಸಂಹಿತೆಯ ಉಲ್ಲಂಘನೆ ಮಾಡಿರುತ್ತಾರೆ. ಇವರ ವಿರುದ್ಧವೂ ದೂರು ದಾಖಲಿಸುವಂತೆ ಬಿಜೆಪಿ ಒತ್ತಾಯ ಮಾಡಿದೆ.

ಇದುವರೆಗೂ ಕಾಂಗ್ರೆಸ್ ಪಕ್ಷ ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣೆಯಲ್ಲಿ ಮತ್ತು ವಾಮ ಮಾರ್ಗ ಹಿಡಿದು ಜಯಶೀಲರಾಗಿರುವುದು ಸಾಬೀತು ಪಡಿಸುತ್ತಿದ್ದಾರೆ. ಇನ್ನು ಮುಂದೆ ಯಾವುದೇ ಸರ್ಕಾರಿ ಅಧಿಕಾರಿಗಳು ಈ ರೀತಿ ಚುನಾವಣೆಯಲ್ಲಿ ಒಂದು ಪಕ್ಷದ ಏಜೆಂಟರಂತೆ ವರ್ತಿಸಿದರೆ ಅವರನ್ನು ಕೆಲಸದಿಂದ ವಜಾಗೊಳಿಸುವಂತೆ ಚುನಾವಣಾ ಆಯೋಗ ಹಾಗೂ ಸರ್ಕಾರಕ್ಕೆ ಬಿಜೆಪಿ ಆಗ್ರಹಿಸಿದೆ.

ಮಂಗಳವಾರ ನಾಮಪತ್ರ ಸಲ್ಲಿಕೆ; ಸ್ಥಳೀಯ ಸಂಸ್ಥೆಗಳಿಂದ 25 ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಡಿಸೆಂಬರ್ 10ರಂದು ಚುನಾವಣೆ ನಡೆಯಲಿದ್ದು, 14ರಂದು ಫಲಿತಾಂಶ ಪ್ರಕಟವಾಗಲಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಪರಿಷತ್ ಚುನಾವಣೆ ಕಣ ರಂಗೇರಿದೆ. ಮಂಗಳವಾರ ಬಿಜೆಪಿ ಅಭ್ಯರ್ಥಿ ಎಂ. ಕೆ. ಪ್ರಾಣೇಶ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ನಾಮಪತ್ರ ಸಲ್ಲಿಕೆ ಮಾಡಿದರು. ಜೆಡಿಎಸ್ ಪಕ್ಷದ ಅಭ್ಯರ್ಥಿ ಕ್ಷೇತ್ರದಿಂದ ಕಣಕ್ಕಿಳಿಯುತ್ತಿಲ್ಲ.

ಬಿಜೆಪಿಯ ಎಂ. ಕೆ. ಪ್ರಾಣೇಶ್ ಬಿಜೆಪಿ ಕಚೇರಿಯಿಂದ ನೂರಾರು ಕಾರ್ಯಕರ್ತರ ಜೊತೆಗೆ ಮೆರವಣಿಗೆಯ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹಾಗೂ ಕಡೂರು ಶಾಸಕ ಬೆಳ್ಳಿ ಪ್ರಕಾಶ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ. ಎನ್. ಜೀವರಾಜ್ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಾಂಗ್ರೆಸ್ ಅಭ್ಯರ್ಥಿ ಗಾಯಿತ್ರಿ ಶಾಂತೇಗೌಡ ಎಂ. ಜಿ. ರಸ್ತೆಯ ಗಣಪತಿ ದೇವಸ್ಥಾನದಿಂದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ಮೆರವಣಿಗೆಯ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

Recommended Video

ದೇಸೀ ಹುಡುಗಿಯರ ಮನಗೆದ್ದ ದ್ರಾವಿಡ್ ಎಂದೆಂದಿಗೂ ಲವರ್ ಬಾಯ್ | Oneindia Kannada

ಸೋಮವಾರ ಕರ್ನಾಟಕ ಕಾಂಗ್ರೆಸ್ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿತ್ತು. ಅಭ್ಯರ್ಥಿ ಘೋಷಣೆ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಭ್ಯರ್ಥಿಗಳಿಗೆ ಬಿ-ಫಾರಂ ವಿತರಣೆ ಮಾಡಿದ್ದರು.

English summary
Excise department official B. M. Sunil received the B-form of Congress candidate of Chikkamagaluru seat for legislative council election. BJP seeks action against him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X