ಚಿಕ್ಕಮಗಳೂರು; ಬಾಡಿ ಬಿಲ್ಡರ್ ಹತ್ಯೆ, ನಗರ ಬಂದ್‌ಗೆ ಕರೆ
ಚಿಕ್ಕಮಗಳೂರು, ಏಪ್ರಿಲ್ 9; ಚಿಕ್ಕಮಗಳೂರು ನಗರದಲ್ಲಿ ಬಾಡಿ ಬಿಲ್ಡರ್ ಆಗಿದ್ದ ಯುವಕನ ಕೊಲೆ ನಡೆದಿದೆ. ಹಿಂದೂಪರ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಯುವಕನ ಕೊಲೆ ಖಂಡಿಸಿ ಚಿಕ್ಕಮಗಳೂರು ನಗರ ಬಂದ್‌ಗೆ ಕರೆ ನೀಡಲಾಗಿದೆ.
ಬಾಡಿ ಬಿಲ್ಡರ್ ಆಗಿದ್ದ ಯುವಕನ ಮನು (21) ಮೇಲೆ ಬುಧವಾರ ಹಲ್ಲೆ ನಡೆದಿತ್ತು. ಗುರುವಾರ ರಾತ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮನು ಮೃತಪಟ್ಟಿದ್ದಾನೆ. ಶವಾಗಾರದ ಮುಂದೆ ಹಿಂದೂಪರ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದರು.
ಚಿಕ್ಕಮಗಳೂರು ನಗರದ ಅಯ್ಯಪ್ಪ ನಗರದ ಮನು ಕೊಲೆಯಾದ ಯುವಕ. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅನ್ಯಕೋಮಿನ ಯುವಕರು ಮನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

ಚಿಕ್ಕಮಗಳೂರು ಬಾಡಿ ಬಿಲ್ಡರ್ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದ ಮನು 'ಮಿಸ್ಟರ್ ಚಿಕ್ಕಮಗಳೂರು' ಆಗುವ ಕನಸು ಹೊತ್ತಿದ್ದ. ಕೊಲೆ ಖಂಡಿಸಿ ಚಿಕ್ಕಮಗಳೂರು ನಗರದ ಎಂ. ಜಿ. ರಸ್ತೆಯಲ್ಲಿ ಅಂಗಡಿಗಳ ಬಾಗಿಲು ಹಾಕಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.
ಹನುಮಂತಪ್ಪ ವೃತ್ತದಲ್ಲಿ ರಸ್ತೆ ಮಧ್ಯೆ ಕುಳಿತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ತಕ್ಷಣ ಉಳಿದ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರನ್ನು ಒತ್ತಾಯಿಸಲಾಗುತ್ತಿದೆ.












Click it and Unblock the Notifications