ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೂಡಿಗೆರೆಯಲ್ಲಿ ಬೈಕ್ ಸಮೇತ ಕುಸಿದುಬಿದ್ದ ಸೇತುವೆ; ಸವಾರನಿಗೆ ಗಂಭೀರ ಗಾಯ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಅಕ್ಟೋಬರ್ 14: ಬೈಕೊಂದು ಸಂಚರಿಸುತ್ತಿರುವಾಗಲೇ ಸೇತುವೆಯೊಂದು ಕುಸಿದುಬಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಎರಡು ತಿಂಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗಿತ್ತು. ಈಗಲೂ ಬಿಟ್ಟು ಬಿಟ್ಟು ಜಿಲ್ಲೆಯ ಅಲ್ಲಲ್ಲಿ ಮಳೆಯಾಗುತ್ತಿದೆ. ಭಾನುವಾರ ಸಂಜೆಯೂ ಚಿಕ್ಕಮಗಳೂರಿನಲ್ಲಿ ನಿರಂತರ ಮಳೆಯಾಗಿತ್ತು. ಜಿಲ್ಲೆಯ ಮಲೆನಾಡು ಭಾಗವಾದ ಮೂಡಿಗೆರೆ ತಾಲೂಕಿನಲ್ಲಿ ಎಡೆಬಿಡದೇ ಮಳೆ ಸುರಿದಿದ್ದು, ಈ ವೇಳೆ ಮೊದಲೇ ಮಳೆಯಿಂದ ಶಿಥಿಲಗೊಂಡಿದ್ದ ಸೇತುವೆ ನಿನ್ನೆ ಏಕಾಏಕಿ ಕುಸಿದು ಬಿದ್ದಿದೆ.

ಮೂಡಿಗೆರೆ ತಾಲೂಕಿನ ಮಾಲಿಂಗನಾಡು ಗ್ರಾಮದಲ್ಲಿ ಹಿರೇಬೈಲು-ಕೂವೆ ಸಂಪರ್ಕಿಸುವ ಸೇತುವೆ ಇದಾಗಿದ್ದು, ಸುಮಾರು 40 ರಿಂದ 50 ಅಡಿ ಆಳಕ್ಕೆ ಕುಸಿದಿದೆ. ಕುಸಿದು ಬಿದ್ದ ಸೇತುವೆ ಕೆಳಗೆ ಬೈಕ್ ಸಿಕ್ಕಿಕೊಂಡಿದೆ.

Bridge Collapsed While Riding Bike In Mudigere

ಸೇತುವೆ ಕುಸಿದು ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ. ಸೇತುವೆ ಕುಸಿದು ಬಿದ್ದಿರುವ ಪರಿಣಾಮ ಹಿರೇಬೈಲು - ಕೂವೆ ಸಂಪರ್ಕ ಸಹ ಕಡಿತವಾಗಿದೆ.
English summary
A bridge collapsed while riding a bike and bike rider seriously injured in a incident which happened in mudigere of chikkamagaluru district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X