ಕುಡ್ಲೂರು ಬಳಿ ಅಪಘಾತ; ಬಸ್ ಚಾಲಕ ಸಾವು, 20 ಮಂದಿಗೆ ಗಾಯ
ಚಿಕ್ಕಮಗಳೂರು, ಸೆಪ್ಟೆಂಬರ್ 5: ಕೆಎಸ್ಆರ್ ಟಿಸಿ ಹಾಗೂ ಎಸ್ ಆರ್ ಎಸ್ ಖಾಸಗಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕೆಎಸ್ಆರ್ ಟಿಸಿ ಬಸ್ ಚಾಲಕ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕುಡ್ಲೂರು ಸಮೀಪ ಶಿವಮೊಗ್ಗ -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಕೆಎಸ್ ಆರ್ ಟಿಸಿ ಬಸ್ ತೆರಳುತ್ತಿತ್ತು.
ಉಡುಪಿಯಲ್ಲಿ ಟೆಂಪೋ ಪಲ್ಟಿ: ಹುಲಿವೇಷಧಾರಿ ಸಾವು
ಖಾಸಗಿ ಬಸ್ ನಲ್ಲಿ ಸಿಲುಕಿದ್ದ ಚಾಲಕನನ್ನು ಹರಸಾಹಸ ಪಟ್ಟು ಸ್ಥಳೀಯರು ಹೊರತೆಗೆದಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ತರೀಕೆರೆ, ಬೀರೂರು, ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸುಮಾರು ಎರಡು ಕಿ.ಮೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ತರೀಕೆರೆ, ಬೀರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.