ತರೀಕೆರೆಯಲ್ಲಿ ಸೇತುವೆ ಮೇಲಿಂದ ಬಿದ್ದ ಬಸ್; 15 ಮಂದಿಗೆ ಗಂಭೀರ ಗಾಯ

ಚಿಕ್ಕಮಗಳೂರು, ನವೆಂಬರ್ 28: ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಪಲ್ಟಿ ಹೊಡೆದು ಸೇತುವೆ ಮೇಲಿಂದ ಉರುಳಿ ಬಿದ್ದಿರುವ ಘಟನೆ ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದಿದೆ.

ತರೀಕೆರೆ ತಾಲೂಕಿನ ಕಲ್ಲತ್ತಗಿರಿ ಗ್ರಾಮದ ಬಳಿ ಖಾಸಗಿ ಬಸ್ಸೊಂದು ಅಪಘಾತಕ್ಕೀಡಾಗಿದೆ. ಸೇತುವೆ ಕೆಳಗೆ ನೀರು ಹರಿಯುತ್ತಿದ್ದು, ನಿಯಂತ್ರಣ ಕಳೆದುಕೊಂಡ ಬಸ್, ಸೇತುವೆ ಮೇಲಿಂದ ಬಸ್ ಉರುಳಿ ಬಿದ್ದಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Bus Fell From Bridge And 15 Injured In Tarikere

ಬಸ್ ಬೀಳುತ್ತಿರುವುದನ್ನು ಕಂಡ ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ಬಂದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಾಲಕನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಲಿಂಗದಹಳ್ಳಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+