2023ರ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ಬಿಚ್ಚಿಟ್ಟ ಬಿ ಎಸ್ ಯಡಿಯೂರಪ್ಪ ಆಪ್ತ
ಚಿಕ್ಕಮಗಳೂರು, ಮಾರ್ಚ್ 08: 2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿದ್ದು, ರಾಜ್ಯ ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಿದೆ. 2024 ರ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿ ನಿರೀಕ್ಷೆಗೆ ತಕ್ಕಂತೆ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿಲ್ಲ ಎನ್ನುವ ಮಾತುಗಳು ಕೇಳಿಬಂದಿದ್ದು, 2023 ರ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವನ್ನ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಆಪ್ತ ಹಾಗೂ ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಅವರು ಬಿಚ್ಚಿಟ್ಟಿದ್ದಾರೆ.
ಈ ಕುರಿತು ಚಿಕ್ಕಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ್ದಕ್ಕೆ ವೀರಶೈವ ಸಮಾಜದ ಮತಗಳು ದೂರವಾಗಿದ್ದು ಅಲ್ಲದೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸೋಲಿಗೆ ಇದೆ ಕಾರಣವಾಯಿತು ಎಂದು ಬಿಜೆಪಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಸ್ಫೋಟಕವಾದ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ವೀರಶೈವ ಲಿಂಗಾಯತರ ಅಗ್ರಗಣ್ಯ ನಾಯಕ ಬಿಎಸ್ ಯಡಿಯೂರಪ್ಪ. ಕಳೆದ ವಿಧಾನಸಭಾ ಚುನಾವಣೆ ಸೋಲಿಗೆ ಇದೇ ಪ್ರಮುಖ ಕಾರಣ. ಯಡಿಯೂರಪ್ಪ ಕೆಳಗಿಳಿಸಿದ್ದು, ನೂರಕ್ಕೆ ನೂರು ಸೋಲಿಗೆ ಕಾರಣವಾಯ್ತು. ಟಿಕೆಟ್ ಕೊಡುವ ಗೊಂದಲ, ಹಿರಿಯರ ಕಡೆಗಣನೆ ಹಾಗೂ ವೀರಶೈವ ಮತಗಳು ದೂರವಾಗಿದ್ದು ಕೂಡ ಸೋಲಿಗೆ ಕಾರಣವಾಗಿದೆ ಎಂದು ಚಿಕ್ಕಮಂಗಳೂರಿನಲ್ಲಿ ಮಾಜಿ ಶಾಸಕ ರೇಣುಕಾಚಾರ್ಯ ಅವರು ಹೇಳಿದರು.
ಇನ್ನೂ ರಾಜ್ಯಕ್ಕೆ ನಿನ್ನೆ ಅಮಿತ್ ಶಾ ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಹಾಗೂ ಕೇಂದ್ರ ಸಚಿವ ಅಮಿತ್ ಶಾ ಒಂದೇ ಕಾರಿನಲ್ಲಿ ಬಂದರು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವೇದಿಕೆಯ ಮೇಲೆ ಇದ್ದರು. ಯಾರ್ಯಾರು ಏನೇನು ಕೊಟ್ಟರು ಎಂಬ ಬಗ್ಗೆ ಮಾಹಿತಿ ಇಲ್ಲ. ರಾಷ್ಟ್ರೀಯ ನಾಯಕರು ವಿಜಯೇಂದ್ರನನ್ನು ಆಯ್ಕೆ ಮಾಡಿದ್ದಾರೆ ಹೊರತು ನಾವ್ಯಾರು ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿಲ್ಲ. ಯಾರು ಬೇಕಿದ್ದರೂ ದೂರು ಕೊಡಲಿ ಅದಕ್ಕೆ ಹೆಚ್ಚಿನ ಮಹತ್ವ ಕೊಡುವುದಿಲ್ಲ ನಾವು ಯಾರ ವಿರುದ್ಧ ಸಮಾವೇಶ ಮಾಡುತ್ತಿಲ್ಲ ಎಂದು ಮಾಜಿ ಶಾಸಕ ರೇಣುಕಾಚಾರ್ಯ ಅವರು ತಿಳಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದಿಂದ ವಿಜಯೇಂದ್ರ ಅವರನ್ನು ಬದಲಾಯಿಸುವುದು ಬಸವನಗೌಡ ಪಾಟೀಲ್ ಯತ್ನಾಳ್ ಅವರ ಹಣೆಯಲ್ಲಿ ಬರೆದಿಲ್ಲ. ಯತ್ನಾಳ್ ಹೆಸರು ಹೇಳುವುದನ್ನು ನಾನು ಬಯಸುವುದಿಲ್ಲ. ಅವರು ಸವಕಲು ನಾಣ್ಯ, ಸಮುದಾಯಕ್ಕೂ ಬೇಡವಾದ ವ್ಯಕ್ತಿ ಎಂದು ವ್ಯಂಗ್ಯವಾಡಿದ್ದಾರೆ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರೆಯುವುದು ಸೂರ್ಯ ಚಂದ್ರ ಇರುವುಷ್ಟೇ ಸತ್ಯ. ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ. ರಾಜ್ಯಾಧ್ಯಕ್ಷರ ಬದಲಾವಣೆ ಮಾಡ್ತೀವಿ ಎನ್ನುತ್ತಿರುವವರ ಹಣೆಯಲ್ಲೂ ಅದು ಬರೆದಿಲ್ಲ. ತಾಕತ್ತಿದ್ದರೆ ರಾಜ್ಯಾಧ್ಯಕ್ಷ ಬದಲಾವಣೆ ಮಾಡಲಿ ಎಂದು ಮಾಜಿ ಸಚಿವರಾ ಎಂ ಪಿ ರೇಣುಕಾಚಾರ್ಯ ಅವರು ಸವಾಲು ಹಾಕಿದ್ದಾರೆ.












Click it and Unblock the Notifications