ಚಿಕ್ಕಮಗಳೂರು: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು, ಇಬ್ಬರು ಸ್ಥಳದಲ್ಲೇ ಸಾವು, ಓರ್ವ ಮಹಿಳೆಗೆ ಗಂಭೀರ ಗಾಯ
ಚಿಕ್ಕಮಗಳೂರು, ಸೆಪ್ಟೆಂಬರ್, 06: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಮಹಿಳೆ ಗಂಭೀರ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ಕಣಿವೆ ಕ್ರಾಸ್ ಬಳಿ ನಡೆದಿದೆ.
ನಿರಂಜನ್ (42) ಚೆನ್ನಮ್ಮ (67) ಕಾರು ಅಪಘಾತದಲ್ಲಿ ಸಾವನ್ನಪ್ಪಿದವರಾಗಿದ್ದು, ಗಂಭೀರ ಗಾಯಗೊಂಡ ಮಹಿಳೆ ರತ್ನಮ್ಮ ಎಂಬುವವರವನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕ್ಕಮಗಳೂರಿನಿಂದ ಕಡೂರಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಇನ್ನು ಮೃತರು ಚಿಕ್ಕಮಗಳೂರಿನ ವಿಜಯಪುರ ಬಡಾವಣೆ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಕಾರು ಅಪಘಾತದಲ್ಲಿ ಮೃತರಾದ ನಿರಂಜನ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.
ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ನಾಲ್ವರು ಸಾವು
ಇನ್ನು ಇತ್ತೀಚೆಗಷ್ಟೇ ಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿತ್ತು.
ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಲಾರಿಗೆ ಕಾರು ಹಿಂಬಂದಿಯಿಂದ ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದರು.
ಶಂಶುದ್ದೀನ್ (40), ಮಲ್ಲಿಕಾ (37), ಖಲೀಲ್ (42), ತಬ್ರೇಜ್ (13) ಇವರು ಭೀಕರ ಅಪಘಾತದಲ್ಲಿ ಮೃತಪಟ್ಟವರಾಗಿದ್ದರು. ಇನ್ನು ರೆಹಾನ್ (14), ರೆಹಮಾನ್ (12), ಮುಬಿ (9) ಎನ್ನುವ ಮೂವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆಗೆ ಕಾರು ತೆರಳುತ್ತಿತ್ತು. ಈ ವೇಳೆ ಮುಂದೆ ಹೋಗುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದ್ದು, ಈ ವೇಳೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.












Click it and Unblock the Notifications