ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿ- ಚಿಕ್ಕಮಗಳೂರು: ಮಾಳ ಗೇಟಿನಿಂದ ಕಾರ್ಕಳವರೆಗಿನ ಚತುಷ್ಪಥ ರಸ್ತೆಗೆ ಅನುಮೋದನೆ

|
Google Oneindia Kannada News

ಚಿಕ್ಕಮಗಳೂರು, ಏಪ್ರಿಲ್ 1: ರಾಷ್ಟ್ರೀಯ ಹೆದ್ದಾರಿ-169ರ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮಾಳ ಗೇಟ್‌ನಿಂದ ಕಾರ್ಕಳ ತನಕದ ದ್ವಿಪಥ ರಸ್ತೆಯನ್ನು ಚತುಷ್ಪಥಗೊಳಿಸಬೇಕೆಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭೇಟಿಯಾಗಿ ಮನವಿ ಸಲ್ಲಿಸಿದ್ದರು.

Central Transport Ministry Approval of the Four-lane Road from Mala Gate To Karkala

ಇದರ ಪರಿಣಾಮವಾಗಿ ಇಂದು (ಶುಕ್ರವಾರ) 15.27 ಕಿ.ಮೀ ಉದ್ದದ ರಸ್ತೆಯನ್ನು ಚತುಷ್ಪಥಿಕರಣಗೊಳಿಸಲು 177.84 ಕೋಟಿ ರೂಪಾಯಿಯನ್ನು ಬಿಡುಗಡೆಗೊಳಿಸಲು ರಾಷ್ಟ್ರೀಯ ಹೆದ್ದಾರಿ ಸಚಿವಾಲಯವು ಅನುಮೋದನೆಯನ್ನು ನೀಡಿದೆ ಎಂದು ತಿಳಿಸಿದ್ದಾರೆ.

Central Transport Ministry Approval of the Four-lane Road from Mala Gate To Karkala

Recommended Video

ಸಿದ್ದಗಂಗಾ ಮಠದಲ್ಲಿ ಅಪ್ಪು ಫೋಟೋ ಹಿಡಿದು ಕುಣಿದು ಕುಪ್ಪಳಿಸಿದ ಹುಡುಗರು | Oneindia Kannada

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಭಾಗದ ಜನರಿಗೆ ಪ್ರಯಾಣಿಸಲು ಬಹಳ ತ್ರಾಸದಾಯಕವಾಗಿದ್ದ ಈ ಮಾರ್ಗವನ್ನು ಚತುಷ್ಪಥಿಕರಣಗೊಳಿಸಲು ಅನುಮೋದನೆ ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಸಚಿವೆ ಶೋಭಾ ಕರಂದ್ಲಾಜೆ ಧನ್ಯವಾದ ತಿಳಿಸಿದ್ದು, ಶೀಘ್ರವೇ ಟೆಂಡರ್ ಪ್ರಕ್ರಿಯೆ ಆರಂಭಗೊಳ್ಳಲಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಕಾಮಗಾರಿಯು ಆರಂಭಗೊಳ್ಳಲಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

English summary
Central Transport Minister Nitin Gadkari Approval of the Four-lane road from Chikkamgaluru district's Mala Gate to Udupi district's Karkala.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X