ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಕಟಿಂಗ್ ಶಾಪ್ ಮಾಲೀಕನಿಗೆ ಧಮ್ಕಿ, ಆಡಿಯೋ ವೈರಲ್
ಚಿಕ್ಕಮಗಳೂರು, ಸೆಪ್ಟೆಂಬರ್, 14 : ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ 7 ಕೋಟಿ ವಂಚನೆ ಆರೋಪ ಹಿನ್ನೆಲೆ ಹಿಂದೂ ಕಾರ್ಯಕರ್ತೆ ಆಗಿದ್ದ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇನ್ನು ವಂಚನೆ ಪ್ರಕರಣದ ಮಾಸ್ಟರ್ ಮೈಂಡ್ ಗಗನ್‌ಗೆ ಸಾಥ್ ನೀಡಿದ್ದಾರೆ ಎನ್ನಲಾದ ಕಡೂರಿನ ಕಟಿಂಗ್ ಶಾಪ್‌ನ ರಮೇಶ್ ಈ ಬಗ್ಗೆ ವಿಡಿಯೋ ಮೂಲಕ ಹೇಳಿಕೆಯೊಂದನ್ನು ನೀಡಿದ್ದರು. ಈ ಬೆನ್ನಲ್ಲೇ ಆರೋಪಿ ಧನ್‌ರಾಜ್ ಸ್ನೇಹಿತ ಕಟಿಂಗ್ ಶಾಪ್‌ನ ಮಾಲೀಕ ರಾಮುಗೆ ಧಮ್ಕಿ ಹಾಕಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಟ್ಟಿಂಗ್ ಶಾಪ್ ಮಾಲೀಕ ರಾಮುಗೆ ಧನರಾಜ್ ಸ್ನೇಹಿತ ಕಾಂಗ್ರೆಸ್ ಮುಖಂಡ ನೂತನ್ ಧಮ್ಕಿ ಹಾಕಿರುವ ಆಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. "ನಿನ್ಯಾಕೆ ಮಾಧ್ಯಮ ಮುಂದೆ ಮಾತಾನಾಡಿದೆ. ನನಗೆ ಗೊತ್ತಿಲ್ಲ ಅಂತಾ ಹೇಳಬೇಕಿತ್ತು. ಅವರೇ ಬರ್ತಾರಾ? ಅಂಗಡಿ ಹೇಗೆ ನಡೆಸುತ್ತೀಯಾ ನೋಡುತ್ತೇನೆ," ಎಂದು ಧಮ್ಕಿ ಹಾಕಿರುವ ಆಡಿಯೋ ವೈರಲ್ ಆಗಿದೆ.

ಮತ್ತೊಂದೆಡೆ ಚೈತ್ರಾ ಕುಂದಾಪುರ ವಂಚನೆ ಪ್ರಕರಣದ ಆರೋಪಿ ಧನರಾಜ್ ಬಂಧನವಾಗುತ್ತಿದ್ದಂತೆ, ಧನರಾಜ್ ಅವರು ಕಡೂರಿನ ಶಾಸಕ ಕೆ.ಎಸ್. ಆನಂದ್ ಜೊತೆಗಿರುವ ಫೋಟೋಗಳು ವೈರಲ್ ಆಗುತ್ತಿವೆ. ಧನರಾಜ್ ಶಾಸಕರಿಗೆ ದೂರದ ಸಂಬಂಧಿಯಾಗಿದ್ದಾರೆ ಎನ್ನಲಾಗಿದೆ. ಇನ್ನು ಧನರಾಜ್ , ಗಗನ್, ಚೈತ್ರಾ ಕುಂದಾಪುರ, ರಮೇಶ್ ಗೋವಿಂದ ಬಾಬುಗೆ ವಂಚನೆ ಮಾಡಿದವರಾಗಿದ್ದಾರೆ ಎನ್ನಲಾಗಿದೆ.
ಪ್ರಕರಣದ ಹಿನ್ನೆಲೆ
ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ 7 ಕೋಟಿ ರೂಪಾಯಿ ವಂಚಿಸಿರುವ ಆರೋಪ ಹಿನ್ನೆಲೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇನ್ನೂ ವಂಚನೆಗೆ ಸಹಾಯ ಮಾಡುತ್ತಿದ್ದರೆನ್ನಲಾದ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಧನರಾಜ್ ಮತ್ತು ರಮೇಶ್ ಎನ್ನುವವರು ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.
ಉದ್ಯಮಿಗೆ ವಂಚಿಸಲು ನಕಲಿ ಬಿಜೆಪಿ, ಆರ್‌ಎಸ್‌ಎಸ್ ನಾಯಕರನ್ನು ಚೈತ್ರಾ ಕುಂದಾಪುರ ಮತ್ತು ತಂಡ ಸೃಷ್ಟಿಸುತ್ತಿದ್ದರು ಎನ್ನಲಾಗಿದ್ದು, ಇದೀಗ ಅದೇ ಟೀಂನ ಕಡೂರಿನ ಧನರಾಜ್ ಮತ್ತು ರಮೇಶ್ ಪ್ರಕರಣದ ಕುರಿತು ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ನಿಮಗೂ ಅನುಕೂಲ ಆಗುತ್ತದೆ ಎಂದಿದ್ದಕ್ಕೆ ನಾವು ಒಪ್ಪಿಕೊಂಡಿದ್ದೀವಿ ಎಂದು ವೀಡಿಯೋ ಮಾಡುವ ಮೂಲಕ ಚೈತ್ರಾ ಕುಂದಾಪುರ ವಿರುದ್ಧ ಆರೋಪ ಮಾಡಿದ್ದಾರೆ.
ಇಷ್ಟೊಂದು ದೊಡ್ಡ ಮಟ್ಟದ ವ್ಯವಹಾರ ಎಂದು ನಮಗೆ ಗೊತ್ತಿರಲಿಲ್ಲ. ನಾನು ಹೇಳಿದ ರೀತಿಯಲ್ಲಿ ನೀವು ನಟಿಸಿ ಎಂದು ಹೇಳಿದ್ದರು. ನಾವು ಹಾಗೇ ಮಾಡಿದ್ವಿ ಅಷ್ಟೇ. ದೊಡ್ಡ ವ್ಯವಹಾರದ ಬಗ್ಗೆ ಮಾಹಿತಿ ಇಲ್ಲ. ಎಲ್ಲಾ ಕ್ರಿಯೆಟ್ ಮಾಡಿದ್ದು ಗಗನ್. ಟಿಕೆಟ್ ನೀಡಿದರೆ ಅವರು ಗೆಲ್ಲುತ್ತಾರೆ, ಆಗ ನಿಮಗೆ ಸಹಾಯ ಆಗುತ್ತದೆ ಎಂದಿದ್ದರು ಎಂದು ಮಾಹಿತಿ ನೀಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಸಲೂನ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ರಮೇಶ್ ಹಾಗೂ ಧನರಾಜ್ ಎಂಬವರನ್ನು ಆರ್‌ಎಸ್‌ಎಸ್ ಪ್ರಚಾರಕರು ಮತ್ತು ಬೆಂಗಳೂರಿನ ಕೆಆರ್ ಪುರಂ ರಸ್ತೆ ಬದಿ ಕಬಾಬ್ ಮಾರುತ್ತಿದ್ದ ನಾಯಕ್ ಎಂಬಾತನನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ ಎಂದು ಉದ್ಯಮಿಗೆ ಚೈತ್ರಾ ಪರಿಚಯಿಸಿದ್ದರು ಎಂದು ತಿಳಿದುಬಂದಿದೆ.
ಬೈಂದೂರಿನ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗೋವಿಂದ ಬಾಬು ಪೂಜಾರಿ ಮುಂದೆ ಹೇಗೆ ನಟಿಸಬೇಕು ಎಂದು ಮೊದಲೇ ಸೂಚನೆ ನೀಡಿದ್ದರು. ಅಲ್ಲದೆ ಚೈತ್ರಾ, ನಕಲಿ ಬಿಜೆಪಿ-ಆರ್‌ಎಸ್‌ಎಸ್ ನಾಯಕರಿಗೆ ಕಡೂರಿನ ಮನೆಯೊಂದರಲ್ಲಿ ತರಬೇತಿ ನೀಡಿದ್ದರು ಎನ್ನುವ ಮಾಹಿತಿ ಬೆಳಕಿಗೆ ಬಂದಿದೆ. ಈ ಕೆಲಸಕ್ಕೆ ರಸ್ತೆ ಬದಿ ಕಬಾಬ್ ಮಾರುತ್ತಿದ್ದ ವ್ಯಕ್ತಿಗೆ ಚೈತ್ರಾ ಮತ್ತು ಗಗನ್ ಹಣ ನೀಡಿದ್ದರು. ಸಲೂನ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಗಗನ್ ಮತ್ತು ಧನರಾಜ್ ಎಂಬವರಿಗೂ ನಟನೆ ಮಾಡಲು ಹಣ ಕೊಟ್ಟಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications