ಚಂದ್ರಯಾನ-3 ಯಶಸ್ವಿ ಹಿನ್ನೆಲೆ ರಾಷ್ಟ್ರಧ್ವಜ ಹಿಡಿದು ಸಂಭ್ರಮಿಸಿದ ಕಾಫಿನಾಡ ಜನ

ಚಿಕ್ಕಮಗಳೂರು, ಆಗಸ್ಟ್‌, 23: ಚಂದ್ರಯಾನ-3 ಯಶಸ್ವಿ ಹಿನ್ನೆಲೆ ಭಾರತದಲ್ಲಿ ಸಂಭ್ರಮಾಚರಣೆ ಮನೆ ಮಾಡಿದೆ. ಅದೇ ರೀತಿ ರಾಜ್ಯದ ಕಾಫಿನಾಡು ಅಂತಲೇ ಪ್ರಸಿದ್ಧಿಯಾಗಿರುವ ಚಿಕ್ಕಮಗಳೂರಿನಲ್ಲಿ ಜನರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಚಂದ್ರನ ಮೇಲೆ ವಿಕ್ರಂ ಲ್ಯಾಂಡರ್ ಸೇಫ್ ಆಗಿ ಲ್ಯಾಂಡಿಗ್ ಆಗುತ್ತಿದ್ದಂತೆಯೇ ನಗರದ ಹನುಮಂತಪ್ಪ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ರಾಷ್ಟ್ರಧ್ವಜ ಹಿಡಿದು ಸಂಭ್ರಮಾಚರಣೆ ಮಾಡಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿಜ್ಞಾನಿಗಳಿಗೆ ಜೈಘೋಷ ಮೊಳಗಿಸಿದ್ದಾರೆ. ಅಲ್ಲದೆ ಇಸ್ರೋ ವಿಜ್ಞಾನಿಗಳ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.

Chandrayaan-3 success: People celebration in chikkamagaluru

ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಚಂದ್ರಯಾನ-3ರ ವಿಕ್ರಮ್‌ ಲ್ಯಾಂಡರ್‌ ಕೊನೆಗೂ ಚಂದ್ರನ ಮೇಲೆ ಲ್ಯಾಂಡ್ ಆಗಿದ್ದು, ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದೆ. ಅಲ್ಲದೇ ದೇಶದೆಲ್ಲೆಡೆ ಚಂದ್ರಯಾನ-3ರ ಯಶಸ್ವಿ ಸಂಭ್ರಮ ಮನೆ ಮಾಡಿದೆ. ಹಾಗೆಯೇ ಹಾಸನದಲ್ಲಿಯೂ ಜನರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ.

ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿಯುತ್ತಿದ್ದಂತೆ ಹಾಸನದ ಎಂಜಿ ರಸ್ತೆಯಲ್ಲಿ ಜನರು ಪಟಾಕಿ ಸಿಡಿಸಿ ಜೈ ಇಸ್ರೋ ಎಂದು ಘೋಷಣೆ ಕೂಗುವುದಲ್ಲದೇ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+