Charmadi Ghat: ಚಾರ್ಮಾಡಿ ಘಾಟ್‌ 10ನೇ ತಿರುವಿನಲ್ಲಿ ಕೆಟ್ಟುನಿಂತ 16 ಚಕ್ರದ ಲಾರಿ-ಪೊಲೀಸರ ವಿರುದ್ಧ ಸ್ಥಳೀಯರ ಆಕ್ರೋಶ ಏಕೆ?

ಚಿಕ್ಕಮಗಳೂರು, ಮಾರ್ಚ್‌,18: 16 ಚಕ್ರದ ಲಾರಿ ಕೆಟ್ಟು ನಿಂತು ಟ್ರಾಫಿಕ್ ಜಾಮ್‌ ಸಂಭವಿಸಿ ವಾಹನ ಸವಾರರು ಪರದಾಡಿದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.

ಇತ್ತೀಚೆಗೆ ಚಾರ್ಮಾಡಿ ಘಾಟ್‌ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗುತ್ತಲೇ ಇದೆ. ಇದೀಗ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಈ ರಸ್ತೆಯಲ್ಲಿ ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ಇದರಿಂದ ವಾಹನ ಸವಾರರು ಪರದಾಡಿದ್ದಾರೆ. ಇನ್ನು ಕೆಟ್ಟು ನಿಂತ ಲಾರಿ ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿತ್ತು ಎಂದು ತಿಳಿದುಬಂದಿದೆ.

Charmadi Ghat 16 wheeler lorry stuck at Charmadi Ghat 10th turn motorists worried

ಕಿರಿದಾದ ರಸ್ತೆ ಇರುವ ಹಿನ್ನೆಲೆ ನಿಯಮದ ಪ್ರಕಾರ 10 ಚಕ್ರದ ವಾಹನಕ್ಕಿಂತ ದೊಡ್ಡ ವಾಹನಗಳು ಚಾರ್ಮಾಡಿ ಘಾಟಿಯಲ್ಲಿ ಸಂಚರಿಸುವಂತಿಲ್ಲ. ಆದರೂ ಕೂಡ ಘಾಟಿಯ ತಿರುವಿನಲ್ಲಿ 16 ಚಕ್ರದ ಬೃಹತ್‌ ಲಾರಿಯೊಂದು ಕೆಟ್ಟುನಿಂತು ಟರ್ನ್ ಮಾಡಲಾಗದೇ ಅಲ್ಲಿಯೇ ನಿಂತ ಪರಿಣಾಮ ಇಷ್ಟೆಲ್ಲ ಅವಾಂತರಗಳು ಸಂಭವಿಸಿವೆ.

ಇದನ್ನೆಲ್ಲ ಗಮನಿಸಿದರೆ ಕೊಟ್ಟಿಗೆಹಾರ ಚೆಕ್ ಪೋಸ್ಟ್‌ನಲ್ಲಿ ಪೊಲೀಸರು ಇದ್ರೂ ಹೇಗೆ ಹೋದ್ರು ಎಂಬ ಅನುಮಾನಗಳು ಕಾಡತೊಡಗಿದೆ. ಅಲ್ಲದೆ ಪೊಲೀಸರು ವಾಹನ ಬಿಟ್ಟಿರುವುದಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿ: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆ (KSRTC) ಬಸ್ ಪಲ್ಟಿಯಾದ ಘಟನೆ ಹನೂರು ತಾಲೂಕಿನ ಒಡೆಯರಪಾಳ್ಯ ಸಮೀಪ ಇತ್ತೀಚೆಗಷ್ಟೇ ನಡೆದಿತ್ತು.

ಈ ವೇಳೆ ಬಸ್‌ನಲ್ಲಿ 30 ಮಂದಿ ಪ್ರಯಾಣಿಕರಲ್ಲಿ ಶಿಕ್ಷಕರೇ ಹೆಚ್ಚು ಮಂದಿ ಇದ್ದರು‌. ಅದೃಷ್ಟವಶಾತ್ 6-7 ಮಂದಿ ಸಣ್ಣಪುಟ್ಟ ಗಾಯಗಳಾಗಿರುವುದು ಬಿಟ್ಟರೇ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿತ್ತು.

ರಾಜ್ಯದಲ್ಲಿ ಚಾಮರಾಜನಗರ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಭಾಗದಲ್ಲೇ ಅತೀ ಹೆಚ್ಚಾಗಿ ಸಾರಿಗೆ ಬಸ್‌ಗಳನ್ನು ಅಪಘಾತಕ್ಕೀಡಾಗಿವೆ. ಹಾಗೆಯೇ ಇನ್ನೂ ಇದೀಗ ಹನೂರು ತಾಲೂಕಿನ ಒಡೆಯರಪಾಳ್ಯ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿಯಾಗಿದ್ದು, ಇದಕ್ಕೆ ಕಾರಣ ಬಸ್‌ ಕಂಡಕ್ಟರ್‌ ಬಸ್‌ ಚಲಾಯಿಸಿದ್ದು ಎಂದು ತಿಳಿದುಬಂದಿದೆ. ಇನ್ನು ಇಲಾಖೆ ಈ ಘಟನೆ ಬಗ್ಗೆ ಯಾವ ರೀತಿ ಕ್ರಮ ಜರುಗಿಸಲಿದೆ ಎಂದು ಕಾದುನೋಡಬೇಕಿದೆ.

ಹನೂರು ತಾಲೂಕಿನ ಲೋಕ್ಕನಹಳ್ಳಿ ಮಾರ್ಗವಾಗಿ ಒಡೆಯರ್ ಪಾಳ್ಯ ಕಡೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಆನೆ ಕಾರಿಡಾರ್‌ ರಸ್ತೆಗೆ ಇಳಿದಿದೆ. ಕೂಡಲೇ ಸ್ಥಳೀಯರು ದೌಡಾಯಿಸಿ ಬಸ್ಸಿನಲ್ಲಿದ್ದವರನ್ನು ಹೊರಕ್ಕೆ ಕರೆತಂದಿದ್ದು, ಕಿಟಕಿ ಬಳಿ ಕುಳಿತಿದ್ದವರಿಗೆ 6-7 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ‌. ಈ ಘಟನೆ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇನ್ನು, ಕಂಡಕ್ಟರ್ ಬಸ್ ಅನ್ನು ಓಡಿಸುತ್ತಿದ್ದರಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+