ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
ಚಿಕ್ಕಮಗಳೂರು, ಸೆಪ್ಟೆಂಬರ್ 13: ರಸ್ತೆಯಲ್ಲಿ ತೀವ್ರ ಮಂಜು ಕವಿದಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಶಿಫ್ಟ್ ಕಾರು ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಸ್ತೆಯಲ್ಲಿ ಭಾರೀ ಮಂಜು ಕವಿದಿದ್ದ ಕಾರಣ ಚಾರ್ಮಾಡಿ ಘಾಟಿಯ ಸೋಮನಕಾಡು ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು ಜಲಪಾತದತ್ತ ಮುನ್ನುಗ್ಗಿ ಮಡಚಿ ಬಿದ್ದಿದೆ. ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ದಾವಣಗೆರೆ ಮೂಲದ ಶಿಫ್ಟ್ ಕಾರಿನಲ್ಲಿ ಐವರು ಚಾರ್ಮಾಡಿ ಘಾಟ್ ಮುಖಾಂತರ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಐವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯಾದಿಂದ ಪಾರಾಗಿದ್ದಾರೆ.

ಜಲಪಾತದ ಬಳಿ ಮಗುಚಿ ಬಿದ್ದ ಕಾರನ್ನು ಸ್ಥಳೀಯರು ಹಾಗೂ ಬಣಕಲ್ ಪೊಲೀಸರು ಹಿಟಾಚಿ ಮೂಲಕ ಮೇಲೆತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications