ಬಿಜೆಪಿ ನಾಯಕರಿಗೆ ಶಾಕ್: ಸಿ.ಟಿ ರವಿ ಸೇರಿದಂತೆ ಚಿಕ್ಕಮಗಳೂರಿನ ನಾಲ್ಕು ಕ್ಷೇತ್ರಗಳಲ್ಲಿ ಭಾರೀ ಹಿನ್ನಡೆ
ಚಿಕ್ಕಮಗಳೂರು, ಮೇ 13: ತೀವ್ರ ಕುತೂಹಲ ಮೂಡಿಸಿರುವ ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶದ ಮತ ಎಣಿಕೆ ಭರದಿಂದ ಸಾಗುತ್ತಿದ್ದು, ಬೆಳ್ಳಂಬೆಳಗ್ಗೆ ಬಿಜೆಪಿಗೆ ಹಿನ್ನಡೆಯ ಬಿಸಿತಟ್ಟುತ್ತಿದೆ. ರಾಜ್ಯದ ಹೈವೋಲ್ಟೇಜ್ ಕ್ಷೇತ್ರ, ಪ್ರಮುಖ ನಾಯಕರ ಕ್ಷೇತ್ರದಲ್ಲಿಯೇ ಬಿಜೆಪಿ ಹಿನ್ನಡೆ ಕಾಣುತ್ತಿದೆ.
ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರಿನಲ್ಲಿಯೇ ಬಿಜೆಪಿಗೆ ತೀವ್ರ ಹಿನ್ನಡೆಯಾಗುತ್ತಿದ್ದು, ಒಟ್ಟು ಐದು ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ಕು ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್.ಡಿ ತಮ್ಮಯ್ಯ 365 ಮತಗಳಿಂದ ಮುನ್ನಡೆ ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಸಿ.ಟಿ ರವಿಗೆ ಹಿನ್ನಡೆಯಾಗಿದೆ. ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಯನ ಮೋಟಮ್ಮ ಕಾಂಗ್ರೆಸ್ 97 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡ ಕಾಂಗ್ರೆಸ್ 4000 ಮುನ್ನಡೆ ಸಾಧಿಸಿದ್ದಾರೆ. ತರೀಕೆರೆ ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಹೆಚ್.ಶ್ರೀನಿವಾಸ್ 1255 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಇನ್ನು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಒಂದೇ ಒಂದು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಕಡೂರುವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬೆಳ್ಳಿ ಪ್ರಕಾಶ್ 937 ಮತಗಳಿಂದ ಮುನ್ನಡೆಯಲ್ಲಿದ್ದಾರೆ.












Click it and Unblock the Notifications