• search
 • Live TV
ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಿಕ್ಕಮಗಳೂರು: ರಿಯಲ್ ಎಸ್ಟೇಟ್ ಮಾತುಕತೆ ವೇಳೆ ಗುಂಡಿನ ದಾಳಿ

By ಚಿಕ್ಕಮಗಳೂರು ಪ್ರತಿನಿಧಿ
|

ಚಿಕ್ಕಮಗಳೂರು, ಮೇ 28: ರಿಯಲ್ ಎಸ್ಟೇಟ್ ವ್ಯವಹಾರದ ಮಾತುಕತೆ ವೇಳೆ ಮಾತಿನ ಚಕಮಕಿ ನಡೆದು ಇಬ್ಬರ ಮೇಲೆ ಗುಂಡು ಹಾರಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಬಾಣೂರು ಗ್ರಾಮದಲ್ಲಿ ನಡೆದಿದೆ.

   ಮನೆಯಲ್ಲೇ ಕ್ವಾರಂಟೈನ್ ಗೆ ಅವಕಾಶ ಕೊಡಿ ಎಂದು ಬೇಡಿಕೊಳ್ತಿದ್ದಾರೆ ಗರ್ಭಿಣಿಯರು | Oneindia Kannada

   ಚಿಕ್ಕಮಗಳೂರು ನಗರದ ಬಿಜೆಪಿ ಮುಖಂಡರ ಸಂಬಂಧಿ ಕಲ್ಯಾಣ್ ಕುಮಾರ್ ಹಾಗೂ ಖಾಸಗಿ ಶಾಲೆಯ ಉಪನ್ಯಾಸಕ ಸುಮಂತ್ ಎಂಬುವವರಿಗೆ ಗುಂಡೇಟು ಬಿದ್ದಿದೆ. ಬೆಂಗಳೂರಿನಿಂದ ಬಂದಿದ್ದ ರಿಯಲ್ ಎಸ್ಟೇಟ್ ಉದ್ಯಮಿಗಳ ಜೊತೆ ವ್ಯವಹಾರದ ವೇಳೆ ಮಾತಿನ ಚಕಮಕಿ ನಡೆದು ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

   ಚಿಕ್ಕಮಗಳೂರು; ಮದುವೆಯಲ್ಲಿ ತಾಂಬೂಲದ ಬದಲು ಮಾಸ್ಕ್ ವಿತರಣೆಚಿಕ್ಕಮಗಳೂರು; ಮದುವೆಯಲ್ಲಿ ತಾಂಬೂಲದ ಬದಲು ಮಾಸ್ಕ್ ವಿತರಣೆ

   ಗುಂಡೇಟು ಬಿದ್ದ ಇಬ್ಬರಿಗೂ ಚಿಕ್ಕಮಗಳೂರಿನ ಕೆ.ಆರ್.ಎಸ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ನಂತರ ಬೆಂಗಳೂರಿಗೆ ರವಾನಿಸಲಾಗಿದೆ. ಇಬ್ಬರ ಮೇಲೆ ಫೈರಿಂಗ್ ಮಾಡಿದ ಬೆಂಗಳೂರು ಮೂಲದ ರಿಯಲ್ ಎಸ್ಟೇಟ್ ಉದ್ಯಮಿಗಳು ನಾಪತ್ತೆಯಾಗಿದ್ದಾರೆ.

   ಗುಂಡೇಟು ತಿಂದ ಕಲ್ಯಾಣ್ ಕುಮಾರ್ ಹಾಗೂ ಸುಮಂತ್ ಅವರ ದೇಹದಲ್ಲಿ ಗುಂಡುಗಳು ಹಾಗೇ ಇದ್ದು, ಅವುಗಳನ್ನು ತೆಗೆಯಲು ಇಬ್ಬರನ್ನೂ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

   ಸಖರಾಯಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಸಖರಾಯಪಟ್ಟಣ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ರಿಯಲ್ ಎಸ್ಟೇಟ್ ವ್ಯವಹಾರದ ವೇಳೆ ಈ ಘಟನೆ ನಡೆದಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನೆ ಮೂಲ ಕಾರಣ ಏನೆಂದು ಇನ್ನಷ್ಟೇ ಪೊಲೀಸರ ತನಿಖೆಯಿಂದ ಸ್ಪಷ್ಟವಾಗಲಿದೆ.

   English summary
   Bullet Shot On Two Persons when in Real estate business discussion. This incident took place in Banur village of Kadur taluk in Chikkamagaluru district.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X