ಚಿಕ್ಕಮಗಳೂರು: ದತ್ತ ಜಯಂತಿ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು, ಅಕ್ಟೋಬರ್‌, 04: ದತ್ತಮಾಲೆ ಹಾಗೂ ದತ್ತ ಜಯಂತಿ ಕಾರ್ಯಕ್ರಮ ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಇಂದು ನಡೆದ 2023ನೇ ಸಾಲಿನ ದತ್ತ ಮಾಲೆ ಮತ್ತು ದತ್ತ ಜಯಂತಿ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೊಲೀಸ್ ಇಲಾಖೆಯಿಂದ ಅಗತ್ಯ ಭದ್ರತಾ ವ್ಯವಸ್ಥೆ ಕೈಗೊಳ್ಳಬೇಕು. ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರಸ್ತೆಗಳ ದುರಸ್ಥಿ ಪಡಿಸುವಂತೆ ತಿಳಿಸಿದರು.

chikkamagaluru-deputy-commissioner

ಚಿಕ್ಕಮಗಳೂರು ತಹಶೀಲ್ದಾರ್ ಕಛೇರಿ, ಅಲ್ಲಂಪುರ ಗ್ರಾಮ ಪಂಚಾಯಿತಿ ವತಿಯಿಂದ ಅಲ್ಲಂಪುರ ಹಾಗೂ ಕೈಮರದ ಬಳಿ ಅಗತ್ಯ ಪಾರ್ಕಿಂಗ್, ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಮಾಡಬೇಕು. ಅಲ್ಲದೆ ಜವರಾಯಿ ಬಳಿ ಪೊಲೀಸ್ ಚೆಕ್‌ಪೋಸ್ಟ್ ವ್ಯವಸ್ಥೆ ಮಾಡುವಂತೆ ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ತಾತ್ಕಾಲಿಕ ಆಸ್ಪತ್ರೆ ತೆರೆದು ಅಗತ್ಯ ವೈದ್ಯರು ಮತ್ತು ಸಿಬ್ಬಂದಿಗಳನ್ನು ನೇಮಿಸಲಬೇಕು. ಜೊತೆ ಆಂಬುಲೆನ್ಸ್‌ಗಳ ವ್ಯವಸ್ಥೆ ಮಾಡಬೇಕು ಎಂದರು.

ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಹಾಗೂ ಕೆಎಸ್‌ಆರ್‌ಟಿಸಿ, ವಿಭಾಗೀಯ ನಿಯಂತ್ರಣಾಧಿಕಾರಿಗಳು ಅಗತ್ಯ ಬಸ್ ವ್ಯವಸ್ಥೆ, ಕ್ರೇನ್, ನಗರಸಭೆಯಿಂದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ನಿರ್ಮಿತಿ ಕೇಂದ್ರದಿಂದ ತಾತ್ಕಾಲಿಕ ಮೊಬೈಲ್ ಶೌಚಾಯಲ, ಕಾರ್ಯಕ್ರಮ ನಡೆಯುವ ದಿನಗಳಲ್ಲಿ ತೆರೆಯುವ ಚೆಕ್ ಪೋಸ್ಟ್‌ಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸೂಚಿಸಿದರು. ಹಾಗೆಯೇ ಎರಡು ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆಯಲು ಕ್ರಮವಹಿಸುವಂತೆ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+