• search
 • Live TV
ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಿಕ್ಕಮಗಳೂರಲ್ಲಿ ಜೂನ್ 1ರವರೆಗೂ ಸಂಪೂರ್ಣ ಲಾಕ್‌ಡೌನ್ ವಿಸ್ತರಣೆ

By ಚಿಕ್ಕಮಗಳೂರು ಪ್ರತಿನಿಧಿ
|

ಚಿಕ್ಕಮಗಳೂರು, ಮೇ 28: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಮತ್ತೆ ಮುಂದುವರಿಕೆಯಾಗಿದೆ. ಜೂನ್ 1ರ ಬೆಳಗ್ಗೆ 6 ಗಂಟೆಯವರೆಗೆ ಲಾಕ್‌ಡೌನ್ ಮುಂದುವರೆಸಲು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಾತನಾಡಿ, ಜನರ ಅಗತ್ಯಗಳಿಗಾಗಿ ಮಾರ್ಗಸೂಚಿಯಲ್ಲಿ ಕೊಂಚ ಬದಲಾವಣೆ ಮಾಡಲಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ದಿನಸಿ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.

ರೈತರಿಗಾಗಿ ಗೊಬ್ಬರ, ಬಿತ್ತನೆ ಬೀಜಗಳ ಖರೀದಿಗೆ ಗ್ರಾಮೀಣ ಪ್ರದೇಶದಲ್ಲಿ ಅವಕಾಶ ಒದಗಿಸಿದ್ದು, ಬೆಳಗ್ಗೆ 6 ರಿಂದ 10ರವರೆಗೆ ಮಾತ್ರ ಅವಕಾಶ ನೀಡಿದೆ.

ಹಳ್ಳಿಯಿಂದ ನಗರಗಳ ಕಡೆಗೆ ಸಂಚಾರ ಸಂಪೂರ್ಣ ಬಂದ್ ಮಾಡಿದ್ದು, ಗ್ರಾಮೀಣ ಭಾಗದ ವ್ಯಾಪ್ತಿಯಲ್ಲೇ ಗೊಬ್ಬರ, ಬಿತ್ತನೆ ಬೀಜಗಳ ಖರೀದಿಗೆ ಅವಕಾಶ ನೀಡಿದೆ.

   ತನ್ನ ಮೇಲಿರುವ ಎಲ್ಲಾ ಆರೋಪಕ್ಕೂ ಪ್ರತ್ಯುತ್ತರ ಕೊಟ್ಟ ರಿಯಲ್ ಸ್ಟಾರ್ Upendra | Oneindia Kannada

   ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಜೂನ್ 1 ರವರೆಗೆ ಸಂಪೂರ್ಣ ಲಾಕ್‌ಡೌನ್ ವಿಸ್ತರಣೆ ಮಾಡಿ, ನಗರದ ಪ್ರದೇಶದಲ್ಲಿ ದಿನಸಿ ವಸ್ತುಗಳ ಹೋಂ ಡೆಲಿವರಿಗೆ ಅವಕಾಶ ಕೊಡಲಾಗಿದೆ. ಹೋಟೆಲ್‌ಗಳಿಗೂ ಹೋಂ ಡೆಲಿವರಿಗೆ ಅವಕಾಶ ನೀಡಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಹೇಳಿದ್ದಾರೆ.

   English summary
   The district administration has issued order a complete lockdown in Chikkamagaluru district till June 1.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X