Drinks Party in School: ಸರ್ಕಾರಿ ಶಾಲೆ ಆವರಣದಲ್ಲೇ ಎಣ್ಣೆ ಪಾರ್ಟಿ: ವಿದ್ಯಾರ್ಥಿಗಳು, ಶಿಕ್ಷಕರಿಗೆ ಸ್ವಚ್ಚಗೊಳಿಸುವುದೇ ಕೆಲಸ!
ಚಿಕ್ಕಮಗಳೂರು ಆಗಸ್ಟ್ 6: ಶಾಲೆ ಎಂಬ ದೇಗುಲದಲ್ಲಿ ನಿತ್ಯ ಸರಸ್ವತಿ ಹಾಗೂ ಗಣೇಶನನ್ನು ನೆನೆದು ಶಿಕ್ಷಕರು ವಿದ್ಯಾರ್ಥಿಗಳಿಗೆ ಜ್ಞಾನವನ್ನು ನೀಡುತ್ತಾರೆ. ಆದರೆ ಶಾಲೆಯ ಆವರಣವೊಂದರಲ್ಲಿ ಪುಂಡರು ಎಣ್ಣೆ ಪಾರ್ಟಿ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಇದರಿಂದಾಗಿ ಬೆಳಗ್ಗೆ ಶಾಲೆಗೆ ಬರುವ ಮಕ್ಕಳು ಆವರಣದಲ್ಲಿ ಬಿದ್ದ ಎಣ್ಣೆ ಬಾಟಲಿಗಳ ದರ್ಶನ ಪಡೆದು ಕೊಠಡಿಗಳಿಗೆ ಪ್ರವೇಶ ಮಾಡುವಂತಾಗಿದೆ. ಹೀಗಿದ್ದರೂ ಇದನ್ನು ಪ್ರಶ್ನೆ ಮಾಡುವವರು ಇಲ್ಲದಂತಾಗಿದೆ.
ಹೌದು... ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಗ್ರಾಮದಲ್ಲಿ ಕಿಡಿಗೇಡಿಗಳು ಶಾಲಾ ಆವರಣವನ್ನೇ ಬಾರ್ ಮಾಡಿಕೊಂಡಿರುವುದು ಕಂಡು ಬಂದಿದೆ. ಗ್ರಾಮದ ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿವೆ. ಈ ಶಾಲೆಯ ಆವರಣದಲ್ಲಿ ಕೆಲ ಕಿಡಿಗೇಡಿಗಳು ರಾತ್ರಿಯಿಡೀ ಎಣ್ಣೆ ಪಾರ್ಟಿ ಮಾಡಿ ಬೆಳಗಿನ ಜಾವ ಮನೆಗೆ ಹೋಗುತ್ತಾರೆ. ಆದರೆ ಬೆಳಗ್ಗೆ ಶಾಲೆಗೆ ಬರುವ ಮಕ್ಕಳು ಬಾಟಲಿಗಳು, ತಿಂದು ಉಳಿದ ಮಾಂಸಾಹಾರವನ್ನು ಹಾಗೂ ಇತರ ತ್ಯಾಜ್ಯವನ್ನು ನೋಡಿಕೊಂಡು ಶಾಲಾ ಕೊಠಡಿಗಳಿಗೆ ತೆರಳಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಇದರಿಂದಾಗಿ ಶಾಲಾ ಆವರಣದಲ್ಲಿ ಮಕ್ಕಳು ಆಟವಾಡುವಂತಿಲ್ಲ. ಪ್ರಾರ್ಥನೆ ಮಾಡುವಂತಿಲ್ಲ, ಯೋಗ ಮಾಡುವಂತಿಲ್ಲ. ಎಲ್ಲಂದರಲ್ಲಿ ಎಣ್ಣೆ ಬಾಟಲಿಗಳು, ಒಡೆದ ಗಾಜುಗಳಿಂದಾಗಿ ಮಕ್ಕಳು ಶಾಲಾ ಆವರಣದಲ್ಲಿ ಆಟವಾಡುವುದನ್ನೇ ಬಿಟ್ಟು ಬಿಟ್ಟಿದ್ದಾರೆ ಎಂದು ಶಿಕ್ಷಕರು ಆರೋಪಿಸಿದ್ದಾರೆ.
ಸ್ಥಳೀಯ ಕಿಡಿಗೇಡಿಗಳು ಶಾಲೆಯ ಆವರಣದಲ್ಲಿ ನಿತ್ಯ ಎಣ್ಣೆ ಪಾರ್ಟಿ ಮಾಡಲು ಅಡ್ಡ ಮಾಡಿಕೊಂಡಿದ್ದಾರೆ. ಇವರು ಮಾಡಿದ ಗಲೀಜನ್ನು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸ್ವಚ್ಚಗೊಳಿಸುವುದೇ ನಿತ್ಯದ ಕೆಲಸವಾಗಿ ಹೋಗಿದೆ. ಕಿಡಿಗೇಡಿಗಳ ಈ ಅಸಭ್ಯ ವರ್ತನೆಯಿಂದಾಗಿ ವಿದ್ಯಾರ್ಥಿಗಳು, ಶಿಕ್ಷಕರು ಬೇಸರ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಶಾಲಾ ಆವರಣದಲ್ಲಿ ತಡರಾತ್ರಿಯವರೆಗೂ ಕುಡಿದು ಕೂಗಾಡಿ ಜಗಳವಾಡಿ ಹೋಗುವುದರಿಂದ ಸ್ಥಳೀಯರು ಬೇಸತ್ತಿದ್ದಾರೆ. ಇದರಿಂದ ಶಾಲೆಯ ಸುತ್ತಲು ವಾಸಿಸುವ ಜನರಿಗೆ ತೊಂದರೆಯಾಗಿದೆ. ಅವರಿಗೆ ಬುದ್ಧಿ ಹೇಳಲು ಹೋದವರಿಗೆ ಜೀವ ಬೆದರಿಕೆ ಹಾಕುತ್ತಾರೆ. ಹೀಗಾಗಿ ಅವರಿಗೆ ಬುದ್ಧಿ ಹೇಳುವುದನ್ನೂ ಬಿಟ್ಟು ಬಿಟ್ಟಿರುವುದಾಗಿ ಗ್ರಾಮಸ್ಥರು ಹೇಳುತ್ತಾರೆ. ಇದರಿಂದ ಪೊಲೀಸರು ಕೃತ್ಯ ಎಸಗುವ ಯುವಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕಿಡಿಗೇಡಿಗಳಿಗೆ ಹೆದರಿ ಜನ ಕೂಡ ದೂರು ನೀಡಲು ಮುಂದೆ ಬರುತ್ತಿಲ್ಲ. ಅವರ ಪುಂಡಾಟಿಕೆಯನ್ನು ತಡೆಯಲು ಕೂಡ ಮುಂದಾಗುತ್ತಿಲ್ಲ. ಕಾಲೇಜು ವಯಸ್ಸಿನ ಹುಡುಗರು ಕುಡಿದು ಹಾಲಾಗುತ್ತಿದ್ದಾರೆ ಎನ್ನುವ ಆರೋಪವಿದೆ. ಹೀಗಾಗಿ ಪೊಲೀಸರು ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾತಯಿಸಿದ್ದಾರೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ











Click it and Unblock the Notifications