• search
  • Live TV
ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಡಾನೆ ದಾಳಿಗೆ ಮಹಿಳೆ ಬಲಿ: ಮೂಡಿಗೆರೆ ಶಾಸಕರ ಮೇಲೆ ಜನರ ಹಲ್ಲೆ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ನವೆಂಬರ್‌ 21: ಕಾಡಾನೆ ದಾಳಿಯಿಂದ ಮಹಿಳೆ ಸಾವು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಶಾಸಕ ಎಂ. ಪಿ. ಕುಮಾರಸ್ವಾಮಿ ಮೇಲೆ ಜನರು ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹುಲ್ಲೇಮನೆ ಕುಂದೂರು ಗ್ರಾಮದಲ್ಲಿ ನಡೆದಿದೆ.

ಹುಲ್ಲೇಮನೆ ಕುಂದೂರು ಗ್ರಾಮದಲ್ಲಿ ಭಾನುವಾರ ರೈತ ಮಹಿಳೆ ಶೋಭಾ (45) ಕಾಡಾನೆ ದಾಳಿಯಿಂದ ಮೃತಪಟ್ಟಿದ್ದರು. ಜಿಲ್ಲೆಯಲ್ಲಿ ಕಾಡಾನೆ ದಾಳಿ ಹೆಚ್ಚಾಗುತ್ತಿದ್ದು, ಈಗಾಗಲೇ ಅನೇಕರು ಸಾವನ್ನಪ್ಪಿದ್ದಾರೆ. ಭಾನುವಾರವೂ ಸಹ ಇಂತಹ ಘಟನೆ ನಡೆದಿದ್ದು, ಜನರು ಆಕ್ರೋಶಗೊಂಡಿದ್ದಾರೆ.

ಕಾಡಾನೆ ದಾಳಿಗೆ ಮೂಡಿಗೆರೆಯ ಹುಲ್ಲೆಮನೆಯಲ್ಲಿ ಮತ್ತೊಂದು ಬಲಿಕಾಡಾನೆ ದಾಳಿಗೆ ಮೂಡಿಗೆರೆಯ ಹುಲ್ಲೆಮನೆಯಲ್ಲಿ ಮತ್ತೊಂದು ಬಲಿ

ಕಾಡಾನೆ ದಾಳಿಯಿಂದ ಮಹಿಳೆ ಸಾವು ಖಂಡಿಸಿ ಹುಲ್ಲೇಮನೆ ಕುಂದೂರು ಮತ್ತು ಸುತ್ತಮುತ್ತಲ ಗ್ರಾಮದ ಸಾವಿರಾರು ಜನರು ರಾಜ್ಯ ಸರ್ಕಾರ ಮತ್ತು ಅರಣ್ಯ ಇಲಾಖೆಯ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ್ದರು.

ಅರಣ್ಯಾಧಿಕಾರಿಗಳ ಮೌಖಿಕ ಭರವಸೆ ಬಳಿಕ ಶವ ಶಿಫ್ಟ್‌

ಅರಣ್ಯಾಧಿಕಾರಿಗಳ ಮೌಖಿಕ ಭರವಸೆ ಬಳಿಕ ಶವ ಶಿಫ್ಟ್‌

ಪ್ರತಿಭಟನೆ ತೀವ್ರಗೊಂಡಿದ್ದು, ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸುವವರೆಗೆ ಕಾಡಾನೆ ದಾಳಿಯಿಂದ ಮೃತರಾದ ಮಹಿಳೆ ಶವವನ್ನು ಮೇಲೆತ್ತಲು ಬಿಡುವುದಿಲ್ಲ ಎಂದು ಸಾರ್ವಜನಿಕರು ಪಟ್ಟು ಹಿಡಿದಿದ್ದರು. ಬಳಿಕ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಈ ಭಾಗದಲ್ಲಿ ಜನರ ಪ್ರಾಣಹಾನಿಗೆ ಕಾರಣವಾಗುತ್ತಿರುವ ಕಾಡಾನೆಯನ್ನು ಹಿಡಿಯುವುದಾಗಿ ಮೌಖಿಕ ಭರವಸೆ ನೀಡಿದ ಮೇರೆಗೆ ಪ್ರತಿಭಟನೆಯನ್ನು ಕೈಬಿಟ್ಟ ಜನರು ಶವವವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೋಯ್ಯಲು ಅವಕಾಶ ನೀಡಿದರು.

ಶಾಸಕರ ಬಟ್ಟೆ ಹರಿದು ಸಾರ್ವಜನಿಕರ ಆಕ್ರೋಶ

ಶಾಸಕರ ಬಟ್ಟೆ ಹರಿದು ಸಾರ್ವಜನಿಕರ ಆಕ್ರೋಶ

ಈ ಸಂದರ್ಭದಲ್ಲಿ ಪ್ರತಿಭಟನಾ ಸ್ಥಳಕ್ಕಾಗಮಿಸಿದ ಮೂಡಿಗೆರೆ ಶಾಸಕ ಎಂ. ಪಿ. ಕುಮಾರಸ್ವಾಮಿಯವರ ಮೇಲೆ ಉದ್ರಿಕ್ತ ಜನರು ಮುಗಿಬಿದ್ದರು. ಸತತ ಕಾಡಾನೆ ದಾಳಿಯಿಂದ ಸಂತ್ರಸ್ತರಾಗಿದ್ದ ನೂರಾರು ಪುರುಷರು ಮತ್ತು ಮಹಿಳೆಯರು ಶಾಸಕರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಸಕರ ಮೇಲೆ ಹಲ್ಲೆಗೆ ಮುಂದಾದರು. ಶಾಸಕರಿಗೆ ಪೊಲೀಸರು ರಕ್ಷಣೆ ನೀಡಲು ಹರಸಾಹಸಪಟ್ಟರು. ಪೊಲೀಸ್ ಜೀಪಿನಲ್ಲಿ ಶಾಸಕರನ್ನು ಕರೆದೊಯ್ಯಲು ಪ್ರಯತ್ನಿಸಿದಾಗ ಜನರು ಪೊಲೀಸ್ ಜೀಪಿಗೆ ಮುತ್ತಿಗೆ ಹಾಕಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರ ಮತ್ತು ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆಯಿತು. ಕೋಪಗೊಂಡಿದ್ದ ಜನರು ಶಾಸಕ ಎಂ. ಪಿ. ಕುಮಾರಸ್ವಾಮಿ ಬಟ್ಟೆ ಹರಿದು ಆಕ್ರೋಶ ವ್ಯಕ್ತಪಡಿಸಿದರು.

ಸಂಚು ಮಾಡಿ ಹಲ್ಲೆ ಮಾಡಲಾಗಿದೆ: ಎಂ. ಪಿ. ಕುಮಾರಸ್ವಾಮಿ

ಸಂಚು ಮಾಡಿ ಹಲ್ಲೆ ಮಾಡಲಾಗಿದೆ: ಎಂ. ಪಿ. ಕುಮಾರಸ್ವಾಮಿ

ಘಟನೆಯ ಬಗ್ಗೆ ಹರಿದ ಬಟ್ಟೆಯಲ್ಲೇ ಶಾಸಕ ಎಂ. ಪಿ. ಕುಮಾರಸ್ವಾಮಿ ತಮ್ಮ ಪರಿಸ್ಥಿತಿ ವಿವರಿಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ವೇಳೆ ಬೇಕು ಅಂತಾ ಗುಂಪುಗೂಡಿ ಹಲ್ಲೆ ಮಾಡಿದ್ದಾರೆ. ನಾನು ಅಲ್ಲೇ ಇರುತ್ತಿದ್ದೆ, ನನ್ನನ್ನು ಪೊಲೀಸರು ಮಿಸ್​ಗೈಡ್ ಮಾಡಿ ಹೊರಗೆ ಕಳಿಸಿದ್ದರು ಎಂದಿರುವ ಶಾಸಕರು, ಇದು ಪೊಲೀಸರ ವೈಫಲ್ಯ ಎಂದು ಹೇಳಿದ್ದಾರೆ. ಇನ್ನು ಜನರು ಶಾಸಕರು ಆನೆ ಸಾಕಿದ್ದಾರೆ ಎಂದು ಜನರು ಹೊಡೆದು ಕಳುಹಿಸಿದ್ದಾರೆ. ಕೋರ್ಟ್, ಸರ್ಕಾರ ಏನು ಹೇಳುತ್ತದೆ ಎನ್ನುವುದು ರಾಜ್ಯಕ್ಕೆ-ದೇಶಕ್ಕೆ ಗೊತ್ತಿದೆ. ಅದು ಗೊತ್ತಿದ್ದೂ, ಸಂಚು ಮಾಡಿ ಹಲ್ಲೆ ಮಾಡಲಾಗಿದೆ. ಸಾರ್ವಜನಿಕರ ಸೇವೆ ಮಾಡುವವರು ಎಲ್ಲ ತಾಗ್ಯಕ್ಕೂ ಸಜ್ಜಾಗಿರುತ್ತೇವೆ ಎಂದು ಹೇಳಿದ್ದಾರೆ.

ಕಾಡಾನೆ ದಾಳಿಯಿಂದ ಮಹಿಳೆ ಸಾವು

ಕಾಡಾನೆ ದಾಳಿಯಿಂದ ಮಹಿಳೆ ಸಾವು

ಇನ್ನು ಭಾನುವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಹುಲ್ಲೆಮನೆ ಗ್ರಾಮದ ಶೋಭಾ (45), ಪತಿ ಸತೀಶ್ ಗೌಡ ಅವರೊಂದಿಗೆ ತೋಟದಲ್ಲಿ ಹುಲ್ಲು ಕೊಯ್ಯುತ್ತಿದ್ದರು. ಜೊತೆಗೆ ವಿಜಯ ಎನ್ನುವವರು ಕೂಡ ಇದ್ದರು. ಈ ವೇಳೆ ಏಕಾಏಕಿ ಪ್ರತ್ಯಕ್ಷವಾದ ಕಾಡಾನೆ ದಾಳಿ ಮಾಡಲು ಮುಂದಾಗಿದೆ. ವಿಜಯ ಅವರ ಸಾಕು ನಾಯಿ ಅಲ್ಲಿಯೇ ಇದಿದ್ದರಿಂದ ಕಾಡಾನೆ ನಾಯಿ ಬೆರೆಸುವ ಸಮಯದಲ್ಲಿ ವಿಜಯ ಹಾಗೂ ಸತೀಶ್‌ ಗೌಡ ತಪ್ಪಿಸಿಕೊಂಡಿದ್ದಾರೆ. ಆದರೆ ಶೋಭಾ ತೋಟದಿಂದ ರಸ್ತೆಗೆ ದಾಟುವ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿ, ಸೊಂಡಿಲಿನಿಂದ ಎತ್ತಿ ಬಿಸಾಡಿ ತುಳಿದು ಸಾಯಿಸಿದೆ.

English summary
Woman killed by wild elephant attack. Chikkamagaluru Hulimane Kundur villagers attack on Mudigere BJP MLA M. P. Kumaraswamy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X