ಕಡೂರು: ಭ್ರಷ್ಟಾಚಾರ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಚಿಕ್ಕಮಗಳೂರು, ನವೆಂಬರ್14 : ಜಿಲ್ಲೆಯ ಕಡೂರು ತಾಲೂಕಿನಲ್ಲಿ ಬಿಜೆಪಿ ಸಂಕಲ್ಪ ಯಾತ್ರೆಗೆ ತಯಾರಿ ನಡೆಸುತ್ತಿದೆ. ಈ ಮೂಲಕ ಮುಂದಿನ ಚುನಾವಣೆಗೆ ಮತ ಬೇಟೆ ನಡೆಸುತ್ತಿದ್ದು, ಕಾಫಿ ನಾಡು ಜನರ ಮತ ಸೆಳೆಯಲು ಮುಂದಾಗಿದೆ.
ಇತ್ತ ಚಿಕ್ಕಮಗಳೂರಿನ ಕಾಂಗ್ರೆಸ್ ಕಾರ್ಯಕರ್ತರು ಇದೊಂದು ಭ್ರಷ್ಟಾಚಾರದ ಸರ್ಕಾರ, 40% ಸರ್ಕಾರ, ಈ ಸರ್ಕಾರವನ್ನ ಕಿತ್ತೊಗೆಯಬೇಕು ಎಂದು ಕಡೂರು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಾಲೂಕು ಕಚೇರಿಗೆ ಬೀಗ ಜಡಿದಿದ್ದಾರೆ.
ಕಡೂರು ತಾಲೂಕಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನ ಖಂಡಿಸಿ ನವೆಂಬರ್ 14ರಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.

ಕಡೂರು ತಾಲೂಕಿನಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ. ಹಲವು ಅಧಿಕಾರಿಗಳು ಲಂಚ ಪಡೆಯುವಾಗಲೇ ಸಿಕ್ಕಿಬಿದ್ದು ಅಮಾನತ್ತಾಗಿದ್ದಾರೆ. ತಾಲೂಕು ಪಂಚಾಯಿತಿ ಇಓ ಲಂಚ ಕೇಳುತ್ತಿರುವ ಆಡಿಯೋ ವೈರಲ್ ಆಗಿದೆ. ಅದರಲ್ಲಿ ಶಾಸಕರಿಗೆ ಪಾಲು ನೀಡಬೇಕು ಎಂಬ ಅರ್ಥ ಬರುವ ಸಂಭಾಷಣೆಯೂ ಇದೆ. ಈ ವಿಷಯವಾಗಿ ಗುತ್ತಿಗೆದಾರರೊಬ್ಬರು ಬಿಲ್ ಕೊಡಿಸಿ ಅಥವಾ ದಯಾಮರಣ ಕರುಣಿಸಿ ಎಂದು ರಾಷ್ಟ್ರಪತಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ತಾಲೂಕು ಆಡಳಿತ ಅಧಿಕಾರಿಗಳು ಸಾರ್ವಜನಿಕರ ಕೆಲಸ ಮಾಡಿಕೊಡಲು ಶಾಸಕರ ಅನುಮತಿಗೆ ಕಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.
ಪ್ರತಿಭಟನೆ ವೇಳೆ ಕೆಪಿಸಿಸಿ ಸದಸ್ಯ ಕೆ.ಎಸ್. ಆನಂದ್ ಮಾತನಾಡಿ "ತಾಲೂಕಿನಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ. ಹಲವು ಅಧಿಕಾರಿಗಳು ಲಂಚ ಪಡೆಯುವಾಗಲೇ ಸಿಕ್ಕಿಬಿದ್ದು ಅಮಾನತು ಗೊಂಡಿದ್ದಾರೆ. ತಾಲೂಕು ಪಂಚಾಯತಿಯಲ್ಲಿ ಲಂಚ ಕೇಳುತ್ತಿರುವ ಆಡಿಯೋ ವೈರಲ್ ಆಗಿದ್ದು ಅದರಲ್ಲಿ ಶಾಸಕರಿಗೆ ಪಾಲು ನೀಡಬೇಕು ಎಂಬ ಅರ್ಥ ಬರುವ ಸಂಭಾಷಣೆ ಇರುವುದು ಎಲ್ಲರಿಗೂ ತಿಳಿದಿರುವ ವಿಷಯ" ಎಂದರು.

ಇನ್ನು "ಈ ವಿಷಯವಾಗಿ ಗುತ್ತಿಗೆದಾರರೊಬ್ಬರು ಬಿಲ್ ಕೊಡಿಸಿ ಅಥವಾ ದಯಾಮರಣ ಕರುಣಿಸಿ ಎಂದು ರಾಷ್ಟ್ರಪತಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ತಾಲೂಕು ಆಡಳಿತ ಅಧಿಕಾರಿಗಳು ಸಾರ್ವಜನಿಕರ ಕೆಲಸ ಮಾಡಿಕೊಡಲು ಶಾಸಕರ ಅನುಮತಿಗೆ ಕಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದೆಲ್ಲವನ್ನು ಗಮನಿಸಿ ಜಿಲ್ಲಾಧಿಕಾರಿ ಅವರು ಸೂಕ್ತ ಕ್ರಮಕೈಗೊಂಡು ತಾಲೂಕಿನ ಜನತೆಗೆ ನ್ಯಾಯ ಒದಗಿಸಿ ಕೊಡುವಂತೆ ಮನವಿ ಸಲ್ಲಿಸಿದ್ದೇವೆ. ಒಂದು ವೇಳೆ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು" ಎಂದು ಎಚ್ಚರಿಕೆ ನೀಡಿದರು.












Click it and Unblock the Notifications