ಪ್ಯಾಲಿಸ್ತೀನ್ ಧ್ವಜ ಹಿಡಿದು ಓಡಾಟ ಕೇಸ್: ಪೊಲೀಸರಿಂದ ಪ್ರಕರಣ ಮುಚ್ಚಿ ಹಾಕುವ ಯತ್ನ ಆರೋಪ
ಚಿಕ್ಕಮಗಳೂರು ಸೆಪ್ಟೆಂಬರ್ 16: ಚಿಕ್ಕಮಗಳೂರಿನಲ್ಲಿ ಪ್ಯಾಲಿಸ್ತೀನ್ ಧ್ವಜ ಹಿಡಿದು ಓಡಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಸೆರೆಹಿಡಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಬೈಕಿನಲ್ಲಿ ಪ್ಯಾಲಿಸ್ತೀನ್ ಧ್ವಜ ಹಿಡಿದು ಸಂಚರಿಸಿದ ದೇಶದ್ರೋಹಿಗಳನ್ನು ಬಂಧಿಸುವಂತೆ ಹಿಂದೂ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಈ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. FIR ದಾಖಲಿಸದ ಪೊಲೀಸರು ಬೈಕಿಗೆ ಪ್ಯಾಲಿಸ್ತೀನ್ ಧ್ವಜ ಕಟ್ಟಿ ಓಡಾಡಿದ್ದ ಐವರ ಪೈಕಿ ಇಬ್ಬರನ್ನು ಕರೆತಂದು ವಿಚಾರಣೆ ನಡೆಸಿದ್ದಾರೆ. ಆದರೆ ಪೊಲೀಸ್ ಠಾಣೆಗೆ ಇಬ್ಬರನ್ನು ಕರೆತಂದು ನೆಪ ಮಾತ್ರಕ್ಕೆ ವಿಚಾರಿಸಿ ಬಿಟ್ಟು ಕಳುಹಿಸಲಾಗಿದೆ ಎಂದು ಆರೋಪಿಸಲಾಗಿದೆ.

ದೇಶದ್ರೋಹಿ ಚಟುವಟಿಕೆಯಲ್ಲಿ ತೊಡಗಿದ್ದವರಿಗೆ ಪೊಲೀಸರು ಮಾಫಿ ಮಾಡಿದ್ದಾರೆ. ಸೂಕ್ತ ತನಿಖೆ ನಡೆಸಬೇಕಾದ ನಗರ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆನ್ನುವ ಆರೋಪ ಮಾಡಲಾಗಿದೆ. ಕಿಡಿಗೇಡಿಗಳನ್ನು ಬಂಧಿಸುವಂತೆ ನಿನ್ನೆ ನಗರ ಠಾಣೆಗೆ ದೂರು ನೀಡಿದರು FIR ದಾಖಲಿಸದ ಪೊಲೀಸರು ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದಾರೆಂದು ಹಿಂದೂ ಸಂಘಟನೆಗಳು ಆರೋಪಿಸಿವೆ.
ಹೌದು... ಚಿಕ್ಕಮಗಳೂರು-ಕಡೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕಿಗೆ ಪ್ಯಾಲಿಸ್ತೀನ್ ಧ್ವಜ ಕಟ್ಟಿ ಮುಸ್ಲಿಂ ಯುವಕರು ಓಡಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಾನುವಾರ ಬಾವುಟ ಕಟ್ಟಿಕೊಂಡು ಯುವಕರ ಗುಂಪೊಂದು ಘೋಷಣೆ ಕೂಗುತ್ತಿರುವುದು ಕಂಡು ಬಂದಿದೆ. ಇದಕ್ಕೆ ಹಿಂದೂ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಬೈಕಿಗೆ ಪ್ಯಾಲಿಸ್ತೀನ್ ಧ್ವಜ ಕಟ್ಟಿ ಓಡಾಡುವುದನ್ನು ಖಂಡಿಸಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಗೆ ಕಳೆದ ದಿನ ಹಿಂದೂಪರ ಸಂಘಟನೆಗಳು ದೂರು ನೀಡಿವೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸ್ ಠಾಣೆ ಮುಂದೆ 30ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರು ಜಮಾಯಿಸಿ ಪ್ಯಾಲಿಸ್ತೀನ್ ಧ್ವಜ ಹಾರಿಸಿದ ಯುವಕರ ಬಂಧನಕ್ಕೆ ಆಗ್ರಹಿಸಿದ್ದರು. ಪ್ಯಾಲಿಸ್ತೀನ್ ಧ್ವಜ ಹಾರಿಸಿದ ದೇಶದ್ರೋಹಿಗಳನ್ನು ಬಂಧಿಸದಿದ್ದರೆ ಮತ್ತಷ್ಟು ಹೋರಾಟದ ಎಚ್ಚರಿಕೆ ನೀಡಿದ್ದರು. ಆದರೆ ದೇಶದ್ರೋಹಿಗಳನ್ನು ಠಾಣೆಗೆ ಕರೆತಂದು ನೆಪ ಮಾತ್ರಕ್ಕೆ ವಿಚಾರಣೆ ಮಾಡಿ ಬಿಟ್ಟುಕಳುಹಿಸಿದ್ದಾರೆ ಎಂದು ಇಂದು ಆರೋಪಿಸಲಾಗಿದೆ. ರಾಜ್ಯದಲ್ಲಿ ಪ್ಯಾಲಿಸ್ತೀನ್ ಧ್ವಜ ಹಾರಿಸುತ್ತಿರುವುದು ಇದೇ ಮೊದಲಲ್ಲ. ಆಗಾಗ ಇಂತಹ ಪುಂಡಾಟ ನಡೆಯುತ್ತಲೇ ಇರುತ್ತವೆ.
ತುಮಕೂರಿನಲ್ಲಿ ಪ್ಯಾಲಿಸ್ತೀನ್ ಬಾವುಟ ಹಾರಿಸಲಾಗಿತ್ತು..
ತುಮಕೂರು ಜಿಲ್ಲೆಯ ಕುಣಿಗಲ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ ದಿನದಂದು (ಆಗಸ್ಟ್ 15,2024) ದೇಶಾದ್ಯಂತ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸುತ್ತಿರುವ ಸಂದರ್ಭದಲ್ಲಿ ಕೆಲ ಯುವಕರು ಪ್ಯಾಲಿಸ್ತೀನ್ ಬಾವುಟ (Palestine Flag) ಹಾರಿಸಲು ಯತ್ನಿಸಿರುವುದು ಕಂಡುಬಂದಿತ್ತು. ಇದಕ್ಕೆ ಸ್ಥಳೀಯರು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದರು.
ಕುಣಿಗಲ್ ಪಟ್ಟಣದ ಸರ್ಕಾರಿ ಶಾಲಾ ಮೈದಾನದಲ್ಲಿ ತಾಲೂಕು ಆಡಳಿತದಿಂದ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮ ನಡೆಯುತ್ತಿತ್ತು. ಇದೇ ಸಂದರ್ಭದಲ್ಲಿ ಮತ್ತೊಂದು ಕಡೆ ಕೆಲ ಯುವಕರ ಗುಂಪು ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನಿಸಿತ್ತು. ಅದಕ್ಕೆ ಮತ್ತೊಂದು ಯುವಕರ ತಂಡ ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದು, ಇವತ್ತು ಪ್ಯಾಲೇಸ್ತೀನ್ ಧ್ವಜ ಹಾರಿಸುತ್ತಾರೆ, ನಾಳೆ ಪಾಕಿಸ್ತಾನ ಧ್ವಜ ಹಾರಿಸುತ್ತಾರೆ. ಹಾರಿಸುವುದಾದರೆ ಭಾರತ ಧ್ವಜ ಹಾರಿಸಿ, ಇಲ್ಲದಿದ್ದರೆ ವಿವಾದವಾಗಲಿದೆ ಎಂದು ಯುವಕರಿಗೆ ಬುದ್ಧಿ ಹೇಳಿದ್ದಾರೆ. ಆಗ ಯುವಕರು ಸುಮ್ಮನಾಗಿದ್ದರು.












Click it and Unblock the Notifications