Chikkamagaluru Utsav 2023 : ಜನವರಿ 18ರಿಂದ ಚಿಕ್ಕಮಗಳೂರು ಜಿಲ್ಲಾ ಉತ್ಸವ, ಕಾರ್ಯಕ್ರಮಗಳ ಸಂಪೂರ್ಣ ವಿವರ ತಿಳಿಯಿರಿ
ಚಿಕ್ಕಮಗಳೂರು, ಜನವರಿ, 13: ಜನವರಿ 18 ರಿಂದ 22ರ ವರೆಗೆ ಜಿಲ್ಲಾ ಉತ್ಸವ ನಡೆಯಲಿದ್ದು, ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಎಐಟಿ ಕಾಲೇಜು ಆವರಣದಲ್ಲಿ ಕೃಷಿ ಮತ್ತು ವಸ್ತುಪ್ರದರ್ಶನ 'ಜ್ಞಾನ ವೈಭವ' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದ್ದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜ್ಞಾನ ವೈಭವ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಿ ನಂತರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ್ದರು. ಜ್ಞಾನ ವೈಭವ ಸಜೀವ ಮಾದರಿಗಳ ಸಿದ್ಧತೆ ಈಗಾಗಲೇ ನಡೆಯುತ್ತಿದೆ. ಕೃಷಿ ಮತ್ತು ವಸ್ತು ಪ್ರದರ್ಶನ, ಫಲಪುಷ್ಪ ಪ್ರದರ್ಶನ, ಶ್ವಾನ ಪ್ರದರ್ಶನ, ಆಕೀರ್ಡ್ ಪ್ರದರ್ಶನ, ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸಿ ಸನ್ಮಾನ ಮಾಡಲಾಗುವುದು. ಹಾಗೂ ವಿಚಾರ ಗೋಷ್ಟಿಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರತೀ ವರ್ಗದ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಕೃಷಿ ಮತ್ತು ಜ್ಞಾನ ವೈಭವವನ್ನು ಹಮ್ಮಿಕೊಳ್ಳಲಾಗುವುದು. ಚಿಕ್ಕಮಗಳೂರು ಜಿಲ್ಲಾ ಉತ್ಸವ ಸರ್ಕಾರಿ ಉತ್ಸವ ಆಗಬಾರದು, ಅದು ಜನರ ಉತ್ಸವ ಆಗಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಪ್ರಯೋಜನವಾಗುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜ್ಞಾನ ವೈಭವದಲ್ಲಿ ಕೃಷಿ ಮತ್ತು ವಸ್ತುಪ್ರದರ್ಶನದ ಜೊತೆಗೆ ಕಲೆ, ಸಾಹಿತ್ಯ, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ಅಂಶಗಳು ಒಳಗೊಂಡಿವೆ ಎಂದು ಮಾಹಿತಿ ನೀಡಿದ್ದಾರೆ.

ಫಲಪುಷ್ಪ ಪ್ರದರ್ಶನಕ್ಕೆ ವ್ಯವಸ್ಥೆ
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಚಿಕ್ಕಮಗಳೂರು ಉತ್ಸವ ಸಾಂಸ್ಕೃತಿಕ ವೈಭವದ ಜೊತೆ ಜ್ಞಾನದ ಹಬ್ಬ ಆಗಬೇಕು. ಎಲ್ಲಾ ವರ್ಗದವರನ್ನು ತಲುಪಬೇಕು ಎನ್ನುವ ಉದ್ದೇಶದಿಂದ ಎಐಟಿ ಕಾಲೇಜು ಆವರಣ ನಾಲ್ಕು ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ವಸ್ತು ಪ್ರದರ್ಶನ ಪ್ರತ್ಯೇಕವಾಗಿ ನಿರ್ಮಿಸಲಾಗಿದೆ. ಜೊತೆಗೆ ಮಾರಾಟ ಮಳಿಗೆಗಳಿಗೂ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ವಸ್ತುಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ
ಕೃಷಿಮೇಳ ಮತ್ತು ವಸ್ತುಪ್ರದರ್ಶನದಲ್ಲಿ ಹೂವಿನ ಕಲಾಕೃತಿಗಳು, ತರಕಾರಿ ಕಲಾಕೃತಿ ಕೆತ್ತನೆ, ನಟ ಡಾ.ಪುನೀತ್ ರಾಜ್‍ಕುಮಾರ್ ಹೂವಿನ ಪುತ್ಥಳಿ, ರಂಗೋಲಿ ಕಲಾಕೃತಿ ಪ್ರದರ್ಶನ, ಬೋನ್ಸಾಯ್ ಗಿಡಗಳ ಪ್ರದರ್ಶನ, ಆರ್ಕೀಡ್ ಪ್ರದರ್ಶನ, ಎಕ್ಸೋಟಿಕ್ ತರಕಾರಿ ಮತ್ತು ಹಣ್ಣುಗಳ ಪ್ರದರ್ಶನ, ತೋಟಗಾರಿಕೆ ಬೆಳೆಗಳ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ, ಹನಿ ನೀರಾವರಿ ಮಾದರಿ ಪ್ರದರ್ಶನ, ಜೇನು ಕೃಷಿ, ವಿವಿಧ ಯಂತ್ರೋಪಕರಣಗಳ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.

ಯಾವೆಲ್ಲ ಪ್ರದರ್ಶನಗಳು ಇರಲಿವೆ?
ಕೃಷಿ ಮತ್ತು ಇತರೆ 40 ಇಲಾಖೆಗಳಿಂದ ಅತ್ಯಾಕರ್ಷಕ ಸಜೀವ ಮಾದರಿಗಳ ನಿರ್ಮಾಣ ಕಾರ್ಯ ಈಗಾಗಲೇ ಆರಂಭವಾಗಿದೆ. ಕೃಷಿ ಮೇಳ ಮೂರು ವಿಭಾಗದಲ್ಲಿ ನಡೆಯಲಿದೆ. ಸಾಧಕರಿಗೆ ಸನ್ಮಾನ, ವಿಚಾರಗೋಷ್ಠಿಗಳು, ಸಜೀವ ಮಾದರಿ ವಸ್ತುಪ್ರದರ್ಶನ ನಡೆಯಲಿದೆ. ತೋಟಗಾರಿಕೆ ಇಲಾಖೆಯಿಂದ ಬೆಂಗಳೂರಿನ ಲಾಲ್‍ಬಾಗ್ ಮಾದರಿಯಲ್ಲಿ ಫಲಪುಷ್ಪ ಪ್ರದರ್ಶನ, ಸಿರಿಧಾನ್ಯ, ಬೆಳವಾಡಿಯ ವೀರನಾರಾಯಣ ದೇವಸ್ಥಾನ ಸೇರಿದಂತೆ 50ಕ್ಕಿಂತ ಹೆಚ್ಚು ಕಲಾಕೃತಿಗಳನ್ನು ಹಾಗೂ 10ಸಾವಿರಕ್ಕೂ ಹೆಚ್ಚು ಹೂವಿನ ಕುಂಡಗಳನ್ನು ಪ್ರದರ್ಶನದಲ್ಲಿ ಇರಿಸಲಾಗುವುದು ಎಂದು ತಿಳಿಸಿದ್ದಾರೆ.

ಮತ್ಯಾ ಮೇಳದ ಸಂಪೂರ್ಣ ವಿವರ ಇಲ್ಲಿದೆ
ಮೀನುಗಾರಿಕೆ ಇಲಾಖೆಯಿಂದ ಅತ್ಯಾಕರ್ಷಕ ಮತ್ಯಾಮೇಳವನ್ನು ಆಯೋಜಿಸಲಾಗಿದೆ. ರೇಷ್ಮ ಇಲಾಖೆಯಿಂದ ರೈತರ ನೇರ ಸಂದರ್ಶನ ಮತ್ತು ರೇಷ್ಮೇ ಉತ್ಪನ್ನಗಳ ಪ್ರದರ್ಶನ ಇರಲಿದೆ ಎಂದ ಅವರು, ಇಂಜಿನಿಯರಿಂಗ್ ಇಲಾಖೆಯಿಂದ ಹಿರೆನಲ್ಲೂರು, ಬಗ್ಗುವಳ್ಳಿ, ಅಮೃತೇಶ್ವರ ದೇವಸ್ಥಾನ ಮಾದರಿಯು ಪ್ರದರ್ಶನಲ್ಲಿ ಇರಲಿದ. ಕೈಗಾರಿಕೋದ್ಯಮ ಇಲಾಖೆಯಿಂದ ರೋಬೋಟಿಕ್ ಪ್ರದರ್ಶನ ಮತ್ತು ತಂತ್ರಜ್ಞಾನ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದ್ದಾರ.

ಎರಡು ಆನೆಗಳ ಪ್ರದರ್ಶನಕ್ಕೆ ವ್ಯವಸ್ಥೆ
ಪಶುಸಂಗೋಪಾನೆ ಇಲಾಖೆಯಿಂದ ಶ್ವಾನ ಪ್ರದರ್ಶನ, ಉತ್ತಮ ಶ್ವಾನಗಳ ಪ್ರದರ್ಶನ ಮತ್ತು ಮಾಹಿತಿ ಲಭ್ಯವಾಗಲಿದೆ. ಎರಡು ಆನೆಗಳನ್ನು ಪ್ರದರ್ಶನಕ್ಕೆ ಕರೆಸಲಾಗುತ್ತಿದೆ. ಹಾಗೆಯೇ ಆಹಾರ ಮೇಳ, ಜಿಲ್ಲೆಯಲ್ಲಿರುವ ಶತಮಾನಗಳ ಪರಿಕರಗಳ ಪರಿಚಯ, ನವೀನ ತಂತ್ರಜ್ಞಾನ ವಸ್ತು ಪ್ರದರ್ಶನ, ವಿದ್ಯಾರ್ಥಿಗಳಿಗೆ ಅನು ಕೂಲವಾಗುವಂತೆ ಇಸ್ರೋ ಸಂಸ್ಥೆ ತಾರಾಲಯ ಹಾಗೂ ಎಚ್‍ಎಎಲ್ ವೈಜ್ಞಾನಿಕ ಪ್ರದರ್ಶನ ಏರ್ಪಡಿಸಲಾಗಿದೆ. ಇನ್ನು ಪುಸ್ತಕ ಮೇಳ, ಅರಣ್ಯ ಇಲಾಖೆಯಿಂದ ವನ್ಯ ಜಗತ್ತು ಸೃಷ್ಟಿಸಲಿದ್ದಾರೆ. ತೋಟಗಾರಿಕೆ ಇಲಾಖೆಯಿಂದ ಚಿಟ್ಟೆ ಮತ್ತು ಕೀಟಗಳ ಪ್ರದರ್ಶನ, ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಗಾಂಧಿಸ್ಮರಣೆ, ವಿಜ್ಞಾನ ಮೇಳವನ್ನು ಆಯೋಜಿಸಲಾಗುತ್ತದೆ. ವಿದ್ಯಾರ್ಥಿಗಳು, ರೈತರು, ಸಾರ್ವಜನಿಕರು ಈ 'ಜ್ಞಾನ ವೈಭವ' ವಸ್ತು ಪ್ರದರ್ಶನ ಮತ್ತು ಫಲಪುಷ್ಪ ಪ್ರರ್ದಶನವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications