ಶೃಂಗೇರಿ ವಿಧಾನಸಭಾ ವ್ಯಾಪ್ತಿಯ 3 ತಾಲೂಕುಗಳು ಇಂದು ಬಂದ್- ಸರ್ಕಾರದ ಧೋರಣೆ ಖಂಡಿಸಿ ರೈತರ ಪ್ರತಿಭಟನೆ!

ಚಿಕ್ಕಮಗಳೂರು ಆಗಸ್ಟ್ 17: ಒತ್ತುವರಿ ತೆರವು ಸೇರಿದಂತೆ ರೈತ ವಿರೋಧಿ ಧೋರಣೆ ಖಂಡಿಸಿ ಶೃಂಗೇರಿ ವಿಧಾನಸಭಾ ವ್ಯಾಪ್ತಿಯ 3 ತಾಲೂಕುಗಳನ್ನು ಇಂದು ಬಂದ್ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರ, ಎನ್.ಆರ್.ಪುರ, ಕೊಪ್ಪ ತಾಲೂಕಿನಲ್ಲಿ ಮಲೆನಾಡು ನಾಗರೀಕ ರೈತ ಹಿತರಕ್ಷಣಾ ವೇದಿಕೆಯಿಂದ ಬಂದ್‌ಗೆ ಕರೆ ನೀಡಲಾಗಿದೆ.

ಅರಣ್ಯ, ಕಂದಾಯ ಭೂಮಿ ಒತ್ತುವರಿ ತೆರವು ಪ್ರಕರಣವನ್ನ ಖಂಡಿಸಿ ಸರ್ಕಾರದ ವಿರುದ್ಧ ಮಲೆನಾಡಿನ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 3 ತಾಲೂಕಿನಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಅಂಗಡಿ, ವ್ಯಾಪಾರ ವೈಹಿವಾಟು ನಿಲ್ಲಿಸಲಾಗಿದ್ದು, ಸಂಘಟನೆಗಳು ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ನಡೆಸಿವೆ. ಬಳಿಕ ಕೊಪ್ಪದಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನು ಸಂಘಟನೆಗಳು ನಡೆಸಲಿವೆ.

Chikkamagaluru s sringeri nr pura koppa today bandh

ರಾಜ್ಯ ಸರ್ಕಾರ ಆದೇಶ ನೀಡಿರುವ ಕಂದಾಯ, ಅರಣ್ಯ ಭೂಮಿ ಒತ್ತುವರಿ ತೆರವಿಗೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮೂರು ತಾಲೂಕಿನಲ್ಲಿ ವಿರೋಧ ವ್ಯಕ್ತವಾಗಿದೆ. ಈ ಬಂದ್‌ಗೆ ಬಿಜೆಪಿ, ಜೆಡಿಎಸ್‌ ಸೇರಿದಂತೆ ಸರ್ವ ಸಂಘಟನೆಗಳ ಬೆಂಬಲ ವ್ಯಕ್ತವಾಗಿದ್ದು, ಕೊಪ್ಪ, ಎನ್‌ಆರ್‌ ಪುರ ತಾಲೂಕು ಒಳಗೊಂಡ ಶೃಂಗೇರಿ ಕ್ಷೇತ್ರ ಬಂದ್‌ಗೆ ಮಲೆನಾಡು ನಾಗರಿಕ ರೈತ ಹಿತರಕ್ಷಣಾ ಸಮಿತಿಯೊಂದಿಗೆ ಕೈ ಜೋಡಿಸಿವೆ.

ಬಂದ್‌ಗೆ ಕಾರಣವೇನು?

ಮಲೆನಾಡು ಭಾಗದಲ್ಲಿ ಸುರಿದ ಮಳೆಯಿಂದ ಸಾಲು ಸಾಲು ಅನಾಹುತ ಸೃಷ್ಟಿಯಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ಕಂದಾಯ, ಅರಣ್ಯ ಭೂಮಿ ಒತ್ತುವರಿ ತೆರವಿಗೆ ಆದೇಶ ನೀಡಿದೆ. ಒಂದು ತಿಂಗಳೊಳಗೆ ಒತ್ತುವರಿ ತೆರವು ಮಾಡಲು ಜಿಲ್ಲಾಡಳಿತ, ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯ ನಡೆಯುತ್ತಿದ್ದು, ಮಲೆನಾಡಿನಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗಿದೆ.

ಕಂದಾಯ, ಅರಣ್ಯ ಭೂಮಿ ಒತ್ತುವರಿ ತೆರವು ಸಂಬಂಧಿಸಿದಂತೆ ಜಿಲ್ಲಾಡಳಿತ, ಅರಣ್ಯ ಇಲಾಖೆಗೆ ಗೊಂದಲವಿತ್ತು. ಇದಕ್ಕಾಗಿ ಕಂದಾಯ, ಅರಣ್ಯ ಭೂಮಿ ಗುರುತಿಸಲು ಕಂದಾಯ ಹಾಗೂ ಅರಣ್ಯ ಇಲಾಖೆಯ ನೇತೃತ್ವದಲ್ಲಿ ಜಂಟಿ ಸರ್ವೇಗೆ ಸರ್ಕಾರ ಈ ಹಿಂದೆ ಆದೇಶ ನೀಡಿತ್ತು.

ಆದರೆ ಜಂಟಿ ಸರ್ವೇ ನಡೆಸದೆ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಮುಂದಾಗಿದ್ದರಿಂದ ವಿರೋಧ ವ್ಯಕ್ತವಾಗಿದೆ. ಸರ್ವೇ ಮಾಡದೇ ರೈತರ ತೋಟಗಳ ತೆರವಿಗೆ ಸೂಚಿಸಲಾಗಿದೆ ಎಂದು ರೈತರು ಆರೋಪಿಸಿದ್ದಾರೆ. ರೈತರ ತೋಟಗಳ ತೆರವಿಗೂ ಮುನ್ನ ಪ್ರಭಾವಿಗಳ ತೋಟ, ರೆಸಾರ್ಟ್, ಹೋಂ ಸ್ಟೇ ತೆರವು ಮಾಡುವಂತೆ ರೈತರು ಪಟ್ಟು ಹಿಡಿದಿದ್ದಾರೆ. ಇದಕ್ಕಾಗಿ ಶೃಗೇರಿ ಕ್ಷೇತ್ರ ಸಂಪೂರ್ಣ ಬಂದ್ ಮಾಡಲಾಗಿದೆ. ಹೀಗಾಗಿ ತುರ್ತು ಸೇವೆ ಹೊರತುಪಡಿಸಿ ಇನ್ನುಳಿದ ಸೇವೆಗಳು ಬಂದ್ ಮಾಡಿ ಮೂರು ತಾಲೂಕಿನಲ್ಲಿ ಪ್ರತಿಭಟನೆಗೆ ರೈತರು ಮುಂದಾಗಿದ್ದಾರೆ.

ಸರ್ಕಾರ ರೈತರ ತೋಟಗಳನ್ನು ತೆರವಿಗೆ ಆದೇಶಿಸಿದೆ. ಪ್ರಭಾವಿಗಳನ್ನು ಉಳಿಸಿ ರೈತರ ತೋಟಗಳನ್ನು ತೆರವಿಗೆ ಮುಂದಾದ ಸರ್ಕಾರದ ದೋಋಣೆಯನ್ನು ಖಂಡಿಸಿ ರೈತರು ಇಂದು ಬಂದ್‌ಗೆ ಮುಂದಾಗಿದ್ದಾರೆ. ಸರ್ಕಾರ ಮದ್ಯ ಪ್ರವೇಶಿಸಿ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯಬೇಕು ಎಂದು ಒತ್ತಾಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+