ಇಂದಿರಾಗಾಂಧಿಗೆ ಪುನರ್ಜನ್ಮ ಕಲ್ಪಿಸಿದ್ದ ಡಿ.ಬಿ.ಚಂದ್ರೇಗೌಡರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು, ನವೆಂಬರ್, 08: ಇಂದಿರಾಗಾಂಧಿಗೆ ಪುನರ್ಜನ್ಮ ಕಲ್ಪಿಸಿದ್ದ ಡಿ.ಬಿ.ಚಂದ್ರೇಗೌಡ ನಿನ್ನೆ (ನವೆಂಬರ್ 07) ವಿಧಿವಶರಾಗಿದ್ದು, ಇಂದು ಸ್ವಗ್ರಾಮ ಮೂಡಿಗೆರೆ ತಾಲೂಕಿನ ದಾರದಹಳ್ಳಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಈ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ ಅವರು ಚಂದ್ರೇಗೌಡರ ಅಂತಿಮ ದರ್ಶನ ಪಡೆದರು
ಇನ್ನು ಅಮೇರಿಕಾದಿಂದ ಬರುತ್ತಿರುವ ಚಂದ್ರೇಗೌಡ ಅವರ ಮಗಳಿಗಾಗಿ ಕುಟುಂಬ ಕಾಯುತ್ತಿದ್ದು, ಮಗಳು ಬಂದ ಕೂಡಲೇ ಅಂತ್ಯ ಸಂಸ್ಕಾರ ನೆರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಡಿ.ಬಿ.ಚಂದ್ರೇಗೌಡರ ರಾಜಕೀಯದ ಹಾದಿ
ಸಮಾಜವಾದಿ ಚಿಂತಕರಾಗಿದ್ದ ಡಿ.ಬಿ.ಚಂದ್ರೇಗೌಡರು ನಾಲ್ಕೂವರೆ ದಶಕಗಳ ಕಾಲ ರಾಜ್ಯ ಮತ್ತು ರಾಷ್ಟ್ರ ಮಟ್ಟದ ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ತಮ್ಮನ್ನು ವೈವಿದ್ಯಮಯವಾಗಿ ತೊಡಗಿಸಿಕೊಂಡಿದ್ದರು. 2014 ರಿಂದ ಈಚೆಗೆ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದರು. ದಾರದಹಳ್ಳಿಯ ತಮ್ಮ ಪೂರ್ಣಚಂದ್ರ ನಿವಾಸದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು.
ದೇಶ ಕಂಡ ಹಿರಿಯ ರಾಜಕೀಯ ಮುತ್ಸದ್ದಿಗಳಲ್ಲಿ ಒಬ್ಬರಾಗಿದ್ದ ಡಿ.ಬಿ.ಚಂದ್ರೇಗೌಡ ಅವರು ವಿಧಾನಸಭೆ, ವಿಧಾನ ಪರಿಷತ್ತು, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರಾಗಿ ಕಾರ್ಯನಿರ್ವಹಿಸಿದ ಅಪರೂಪದ ರಾಜಕಾರಣಿ. ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿ ಪಟೇಲ್ ಬೈರೇಗೌಡ ಶ್ರೀಮತಿ ಪುಟ್ಟಮ್ಮ ದಂಪತಿಯ ಪುತ್ರರಾಗಿ 1936ರ ಆಗಸ್ಟ್ 26ರಂದು ಜನಿಸಿದ್ದ ಚಂದ್ರೇಗೌಡರು ಕಾನೂನು ಪದವಿ ಪಡೆದು ವಕೀಲಿ ವೃತ್ತಿಯಲ್ಲಿದ್ದರು.
ರಾಜಕೀಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಸಿಕೊಂಡಿದ್ದ ಚಂದ್ರೇಗೌಡ ಅವರು 1977ರಲ್ಲಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿದ್ದರು. 1977ರಲ್ಲಿ ಎರಡನೇ ಅವಧಿಗೆ ಸಂಸದರಾಗಿ ಆಯ್ಕೆಯಾಗಿ, 1978ರಲ್ಲಿ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲೆಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದರು.
ರಾಜಕೀಯವಾಗಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಗೆ ರಾಜಕೀಯ ಮರು ಹುಟ್ಟು ನೀಡಲು ಕ್ಷೇತ್ರ ತ್ಯಾಗ ಮಾಡಿ, ಕಾಂಗ್ರೆಸ್ ಇತಿಹಾಸದಲ್ಲಿ ಅಜರಾಮರರಾಗಿ ಉಳಿದರು. ನಂತರ ವಿಧಾನಪರಿಷತ್ ಸದಸ್ಯರಾಗಿ ಮುಖ್ಯಮಂತ್ರಿ ದೇವರಾಜು ಅರಸು ಅವರ ಸಂಪುಟದಲ್ಲಿ 1979-1980ನೇ ಅವಧಿಯಲ್ಲಿ ನೀರಾವರಿ ಸಚಿವರಾಗಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ದೇವರಾಜು ಅರಸು ಅವರೊಂದಿಗೆ ಕ್ರಾಂತಿರಂಗದಲ್ಲಿ ಗುರುತಿಸಿಕೊಂಡು 1980-81ರಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರೂ ಆಗಿದ್ದರು.
1983ರಲ್ಲಿ ಜನತಾ ಪಕ್ಷದಿಂದ ತೀರ್ಥಹಳ್ಳಿ ಕ್ಷೇತ್ರದಿಂದ ವಿಧಾನಸಭಾ ಸದಸ್ಯರಾಗಿ ಗೆದ್ದಿದ್ದರು. ರಾಮಕೃಷ್ಣ ಹೆಗ್ಡೆಯವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 1983-85 ರವರೆಗೆ ಚಂದ್ರೇಗೌಡರು ವಿಧಾನಸಭಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. 1986ರಲ್ಲಿ ಜನತಾ ಪಕ್ಷದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. 1987ರಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ ಎರಡನೇ ಅವಧಿಗೆ ವಿಧಾನಸಭೆಗೆ ಪ್ರವೇಶಿಸಿದ್ದರು.
1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶೃಂಗೇರಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿ 1999 ರಿಂದ 2004ರ ವರೆಗೆ ಎಸ್.ಎಂ.ಕೃಷ್ಣಾ ಸಂಪುಟದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಇದೇ ಅವಧಿಯಲ್ಲಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರರೂ ಆಗಿದ್ದರು.
2009ರಲ್ಲಿ ಬಿ.ಜೆ.ಪಿ. ಅಭ್ಯರ್ಥಿಯಾಗಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿ ಪೂರ್ಣ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.
ಸಮಾಜವಾದಿ ಚಿಂತಕರಾಗಿದ್ದ ಡಿ.ಬಿ.ಚಂದ್ರೇಗೌಡರು ನಾಲ್ಕೂವರೆ ದಶಕಗಳ ಕಾಲ ರಾಜ್ಯ ಮತ್ತು ರಾಷ್ಟ್ರ ಮಟ್ಟದ ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ತಮ್ಮನ್ನು ವೈವಿದ್ಯಮಯವಾಗಿ ತೊಡಗಿಸಿಕೊಂಡಿದ್ದರು.
2014ರಿಂದ ಈಚೆಗೆ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದರು. ದಾರದಹಳ್ಳಿಯ ತಮ್ಮ ಪೂರ್ಣಚಂದ್ರ ನಿವಾಸದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು. ಮಂಗಳವಾರ (ನವೆಂಬರ್ 07) ಮುಂಜಾನೆ ತಮ್ಮ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದು, ಇಹಲೋಕದ ಪಯಣ ಮುಗಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications