ಕಾಫಿನಾಡು ಚಿಕ್ಕಮಗಳೂರಲ್ಲಿ ಕಾಫಿ ತೋಟ ಮುಟ್ಟುಗೋಲು
ಚಿಕ್ಕಮಗಳೂರು, ಫೆಬ್ರವರಿ 11: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಫಿ ತೋಟ ಸೀಜ್ ಮಾಡಿದ್ದು, 200 ಎಕರೆ ಕಾಫಿ ತೋಟವನ್ನು ಬ್ಯಾಂಕ್ ಮುಟ್ಟುಗೋಲು ಹಾಕಿಕೊಂಡಿದೆ.
ಚಿಕ್ಕಮಗಳೂರು ತಾಲೂಕಿನ ಹಿರೇಕೊಳಲೆಯ ವಾಟೇಖಾನ್ ಕಾಫಿ ಎಸ್ಟೇಟ್ ಅನ್ನು ಚಿಕ್ಕಮಗಳೂರಿನ ಯೂನಿಯನ್ ಬ್ಯಾಂಕ್ ನಿಂದ ಮುಟ್ಟುಗೋಲು ಹಾಕಿಕೊಂಡಿದ್ದು, ರಮೇಶ್ ರಾವ್ ಎಂಬುವರಿಗೆ ಕಾಫಿ ತೋಟ ಸೇರಿದೆ.
ಶೃಂಗೇರಿ ಅತ್ಯಾಚಾರ ಪ್ರಕರಣ; ಮತ್ತೆ 5 ಆರೋಪಿಗಳ ಬಂಧನ
22 ಕೋಟಿ ರುಪಾಯಿ ಸಾಲವನ್ನು ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಕಾಫಿ ಎಸ್ಟೇಟ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಯೂನಿಯನ್ ಬ್ಯಾಂಕ್ ಅಧಿಕಾರಿಗಳು ಪೊಲೀಸರೊಂದಿಗೆ ತೆರಳಿ ಕಾಫಿ ಎಸ್ಟೇಟ್ ವಶಪಡಿಸಿಕೊಂಡಿದ್ದಾರೆ.
ಕಾಫಿ ಎಸ್ಟೇಟ್ ಮಾಲೀಕ ವಾಟೇಖಾನ್ ಅವರು ಕಾಫಿ ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೂ ಲಕ್ಷಾಂತರ ರುಪಾಯಿ ಬಾಕಿ ಉಳಿಸಿಕೊಂಡಿದ್ದು, ನಾವು ಕಾಫಿ ತೋಟದಿಂದ ತೆರಳುವುದಿಲ್ಲವೆಂದು ಪಟ್ಟು ಹಿಡಿದಿದ್ದಾರೆ.
ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ 50ಕ್ಕೂ ಹೆಚ್ಚು ಕಾರ್ಮಿಕರು. ದಯವಿಟ್ಟು.. ನಮ್ಮನ್ನು ಹೊರ ಕಳಿಸಬೇಡಿ ಅಂತ ಅಂಗಲಾಚುತ್ತಿದ್ದಾರೆ. ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.