Power Theft: ಕರೆಂಟ್ ಕದ್ದ ಕಾಂಗ್ರೆಸ್ ನಾಯಕಿ, ಹಣ ಕದ್ದ ಪೊಲೀಸ್!
ಚಿಕ್ಕಮಗಳೂರು ಆಗಸ್ಟ್ 20: ಗ್ರಾಮ ಪಂಚಾಯತಿ ಸದಸ್ಯೆ, ಕಾಂಗ್ರೆಸ್ ನಾಯಕಿಯಿಂದ ವಿದ್ಯುತ್ ಕಳ್ಳತನವಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಮುಖಂಡೆಯೊಬ್ಬರು ಅಕ್ರಮವಾಗಿ ಕರೆಂಟ್ ಕದ್ದು ಸಿಕ್ಕಿಬಿದ್ದಿದ್ದಾರೆ. ದಾಳಿ ಬಳಿಕ ಕಾಂಗ್ರೆಸ್ ಮಹಿಳಾ ಮೋರ್ಚ ಅಧ್ಯಕ್ಷೆ ಆಶಾ ನಾರಾಯಣ್ ವಂಚನೆ ಬಯಲಾಗಿದೆ.
ಹೌದು.... ಎನ್ ಆರ್ ಪುರ ಮಹಿಳಾ ಮೋರ್ಚಾ ಅಧ್ಯಕ್ಷೆ ಆಶಾ ನಾರಾಯಣ್, ಕಡಬಗೆರೆಯಲ್ಲಿ ಮೂರು ಮನೆಗಳಿಗೆ ಅಕ್ರಮ ವಿದ್ಯುತ್ ಸಂಪರ್ಕ ನೀಡಿಸಿದ್ದರು ಎನ್ನುವ ಆರೋಪ ಕೇಳಿ ಬಂದಿದೆ. ಚಿಕ್ಕಮಗಳೂರು ತಾಲೂಕಿನ ಕಡಬಗೆರೆ ಮನೆ ಮೇಲೆ ದಾಳಿ ನಡೆಸಿದಾಗಿ ಈ ಪ್ರಕರಣ ಬೆಳಕಿಗೆ ಬಂದಿದೆ.

ವಿಷಯ ತಿಳಿದು ಧಿಡೀರನೆ ಮಂಗಳೂರಿನಿಂದ ಆಗಮಿಸಿದ ಮೆಸ್ಕಾಂ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ವಂಚನೆ ಬಯಲಾಗಿದೆ. 1 ಲಕ್ಷಕ್ಕೂ ಹೆಚ್ಚು ದಂಡವನ್ನು ವಿಧಿಸಲಾಗಿದೆ. ಪ್ರಭಾವಿ ಎನ್ನುವ ಕಾರಣಕ್ಕೆ ಅಕ್ರಮ ಗೊತ್ತಿದ್ದರೂ ಸ್ಥಳೀಯ ಅಧಿಕಾರಿಗಳು ಸುಮ್ಮನಾಗಿದ್ದರು ಎಂದು ತಿಳಿದು ಬಂದಿದೆ.
ದೇವದಾನ ಗ್ರಾಮ ಪಂಚಾಯಿತಿ ಸದಸ್ಯೆಯೂ ಆಗಿರುವ ಆಶಾ ಪ್ರಭಾವಿ ಎನ್ನುವ ಕಾರಣಕ್ಕೆ ಸ್ಥಳೀಯ ಅಧಿಕಾರಿಗಳೇ ಕ್ರಮ ಕೈಗೊಳ್ಳದೆ ಸುಮ್ಮನಿದ್ದರು ಎಂದು ತಿಳಿದು ಬಂದಿದೆ. ಅದ್ಯ ಅವರ ವಿರುದ್ಧವೂ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿ ಇನ್‌ಸ್ಪೆಕ್ಟರ್‌ನಿಂದಲೇ ಕಳ್ಳತನ
ಇನ್‌ಸ್ಪೆಕ್ಟರ್ ಒಬ್ಬರ ಮೇಲೆ ಕಳ್ಳತನ ಪ್ರಕರಣದಲ್ಲಿ ಮುಟ್ಟುಗೋಲು ಹಾಕಿಕೊಂಡಿದ್ದ ಹಣವನ್ನು ದುರ್ಬಳಕೆ ಮಾಡಿದ ಆರೋಪ ಕೇಳಿ ಬಂದಿದೆ. ಬಿಡದಿ ಠಾಣೆಯಲ್ಲಿ ಪರಾರಿಯಾಗಿರುವ ಇನ್‌ಸ್ಪೆಕ್ಟರ್ ಶಂಕರ್ ನಾಯ್ಕ್ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ.
ಇವರು ಕಳ್ಳತನ ಪ್ರಕರಣದಲ್ಲಿ ಮುಟ್ಟುಗೋಲು ಹಾಕಿಕೊಂಡಿದ್ದ ಹಣವನ್ನು ದುರ್ಬಳಕೆ ಮಾಡಿದ ಆರೋಪ ಹೊತ್ತಿದ್ದು ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಸದ್ಯ ಸಿಸಿಬಿ ಪೊಲೀಸರಿಂದ ಶೋಧ ನಡೆಯುತ್ತಿದೆ. ಇನ್‌ಸ್ಪೆಕ್ಟರ್ ಶಂಕರ್ ನಾಯ್ಕ್ ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಜೊತೆಗೆ ಅವರ ಫೋನ್ ಅನ್ನು ಸ್ವಿಚ್ ಆಫ್ ಮಾಡಿದ್ದಾರೆ ಎನ್ನಲಾಗುತ್ತಿದೆ.
ಶಂಕರ್ ನಾಯ್ಕ್ ಕರ್ತವ್ಯದ ವೇಳೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 72 ಲಕ್ಷ ಜಪ್ತಿ ಮಾಡಿದ್ದರು. ಆದರೆ ಈ ಹಣವನ್ನು ಸರ್ಕಾರದ ಖಜಾನೆ ಅಥವಾ ಠಾಣೆಯ ಸುಪರ್ದಿಗೆ ಕೊಡದೆ ಸ್ವಂತಕ್ಕೆ ಬಳಸಿಕೊಂಡ ಆರೋಪವಿದೆ. ಈ ಸಂಬಂಧ ಬ್ಯಾಟರಾಯನಪುರ ಠಾಣೆಯಲ್ಲಿ ಶಂಕರ್ ಹಾಗೂ ಮಧ್ಯವರ್ತಿ ಲೋಕನಾಥ್ ವಿರುದ್ಧ ಕೇಸ್ ದಾಖಲಾಗಿತ್ತು. ಎಸಿಪಿ ಭರತ್ ರೆಡ್ಡಿ ದೂರು ಆಧರಿಸಿ ಎಫ್‌ಐಆರ್ ದಾಖಲಾಗಿತ್ತು.
2023ರ ನವೆಂಬರ್‌ನಲ್ಲಿ ಎಫ್‌ಐಆರ್ ದಾಖಲಾಗಿತ್ತು. ನಂತರ ಪ್ರಕರಣದ ತನಿಖೆಯನ್ನು ಕಮಿಷನರ್ ಸಿಸಿಬಿಗೆ ವಹಿಸಿಸಲಾಗಿತ್ತು. ಪ್ರಕರಣ ರದ್ದು ಕೋರಿ ಶಂಕರ್ ನಾಯ್ಕೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿತ್ತು. ಆದರೆ ತಡೆಯಾಜ್ಷೆ ತೆರವುಗೊಳಿಸುವಂತೆ ಸಿಸಿಬಿ ಮೇಲ್ಮನವಿ ಸಲ್ಲಿಸಿತ್ತು. ಈ ಹಿನ್ನಲೆಯನ್ನು ತನಿಖೆಗೆ ನೀಡಿದ್ದ ತಡೆಯಾಜ್ಷೆಯನ್ನು ಹೈಕೊರ್ಟ್ ತೆರವುಗೊಳಿಸಿದೆ. ತಡೆಯಾಜ್ಞೆ ತೆರವುಗೊಳಿಸುತ್ತಿದ್ದಂತೆ ಇನ್‌ಸ್ಪೆಕ್ಟರ್ ಶಂಕರ್ ನಾಯಕ್ ನಾಪತ್ತೆಯಾಗಿದ್ದಾರೆ.












Click it and Unblock the Notifications