ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೀದಿಗೆ ಬಂದು ಬಿತ್ತು ಚಿಕ್ಕಮಗಳೂರು ಕಾಂಗ್ರೆಸ್ ಒಳ ಜಗಳ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

Recommended Video

ಫ್ಲೆಕ್ಸ್ ಹಾಕುವ ವಿಚಾರಕ್ಕೆ ಕಿತ್ತಾಡಿಕೊಂಡ ಕಾಂಗ್ರೆಸ್ ನಾಯಕರು | Oneindia Kannada

ಚಿಕ್ಕಮಗಳೂರು, ನವೆಂಬರ್ 19: ಇಂದು ಚಿಕ್ಕಮಗಳೂರಿಗೆ ಕಾಂಗ್ರೆಸ್ ನಾಯಕರು ಆಗಮಿಸುತ್ತಿದ್ದು, ಈ ವೇಳೆ ಬೀದಿಯಲ್ಲಿ ಹಾಕಲಾಗುವ ಫ್ಲೆಕ್ಸ್ ವಿಚಾರವಾಗಿ ಚಿಕ್ಕಮಗಳೂರು ಕಾಂಗ್ರೆಸ್ ಮುಖಂಡರು ನಡು ರಸ್ತೆಯಲ್ಲಿಯೇ ವಾಗ್ವಾದಕ್ಕಿಳಿದ ಘಟನೆ ನಡೆಯಿತು.

ಸಿದ್ದರಾಮಯ್ಯನವರೇ 'ನೀನೇ ಸಾಕಿದ ಗಿಣಿ, ನಿನ್ನಾ ಹದ್ದಾಗಿ ಕುಕ್ಕಿತಲ್ಲೋ'ಸಿದ್ದರಾಮಯ್ಯನವರೇ 'ನೀನೇ ಸಾಕಿದ ಗಿಣಿ, ನಿನ್ನಾ ಹದ್ದಾಗಿ ಕುಕ್ಕಿತಲ್ಲೋ'

ಇಂದು ಮಾಜಿ ಪ್ರಧಾನಿ ಇಂದಿರಾಗಾಂಧಿ 103ನೇ ದಿನವನ್ನು ಚಿಕ್ಕಮಗಳೂರು ನಗರದಲ್ಲಿ ಕಾಂಗ್ರೆಸ್ ಅದ್ಧೂರಿ ಆಚರಣೆ ಮಾಡಲು ತೀರ್ಮಾನಿಸಿದೆ. ಇದಕ್ಕಾಗಿ ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ದಿನೇಶ್ ಗುಂಡೂರಾವ್ ಸೇರಿದಂತೆ ಹಲವರು ಚಿಕ್ಕಮಗಳೂರಿಗೆ ಇಂದು ಬರಲಿದ್ದಾರೆ.

Congress Local Leaders Fight On Road In Chikkamagaluru

ನಾಮಪತ್ರ ಸಲ್ಲಿಕೆ ಮುಕ್ತಾಯ: ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿ ನಾಮಪತ್ರ ಸಲ್ಲಿಕೆ ಮುಕ್ತಾಯ: ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿ

ಹೀಗಾಗಿ ಪಕ್ಷದಲ್ಲಿ ತರಾತುರಿಯಿಂದ ಕೆಲಸಗಳು ಸಾಗುತ್ತಿವೆ. ಈ ನಡುವೆಯೇ ಯುವ ಕಾಂಗ್ರೆಸ್ ಮುಖಂಡರ ನಡುವೆ ಚಿಕ್ಕ ವಿಷಯಕ್ಕೆ ಜಗಳ ಏರ್ಪಟ್ಟಿದ್ದು, ನಾವು ಪಕ್ಷ ಬಿಟ್ಟು ಹೋಗ್ತಿವಿ ಎಂದು ಬೀದಿಯಲ್ಲಿಯೇ ವಾಗ್ವಾದಕ್ಕಿಳಿದ ದೃಶ್ಯ ಕಂಡುಬಂದಿತು. ಹಿರಿಯ ಕಾಂಗ್ರೆಸ್ ಮುಖಂಡರು ಹಾಗೂ ಯುವ ಕಾಂಗ್ರೆಸ್ ಸದಸ್ಯರ ನಡುವೆ ಹನುಮಂತಪ್ಪ ವೃತ್ತದಲ್ಲಿ ಫ್ಲೆಕ್ಸ್ ಹಾಕುವ ವಿಚಾರವಾಗಿ ಬಿದಿಯಲ್ಲೇ ಜಗಳಕ್ಕಿಳಿದರು. ಅಷ್ಟೇ ಅಲ್ಲದೆ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಸೋಲಲು ಕಾಂಗ್ರೆಸ್ ನ ಮತ್ತೊಂದು ಗುಂಪು ಕೆಲಸ ಮಾಡ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪ ಪ್ರತ್ಯಾರೋಪಗಳನ್ನು ಮಾಡಿದರು.

English summary
Congress leaders are coming to Chikkamagaluru today on behalf of Indira Gandhi birth anniversary. At this time, the congress local leaders fight on road for flex matter
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X