ಚಿಕ್ಕಮಗಳೂರಿನಿಂದ ಎಚ್.ಡಿ.ತಮ್ಮಯ್ಯಗೆ "ಕೈ" ಟಿಕೆಟ್ ನೀಡಿ: ಶೃಂಗೇರಿಯಲ್ಲಿ ಡಿ.ಕೆ.ಶಿವಕುಮಾರ್ ಬೆನ್ನತ್ತಿದ ಬೆಂಬಲಿಗರು
ಚಿಕ್ಕಮಗಳೂರು, ಏಪ್ರಿಲ್, 10: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ನಲ್ಲಿ ಟಿಕೆಟ್ ಆಕಾಂಕ್ಷಿಗಳ ಜಿದ್ದಾಜಿದ್ದಿಯೂ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದೇ ರೀತಿಯಲ್ಲಿ ಸೋಮವಾರ (ಏಪ್ರಿಲ್ 10) ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶೃಂಗೇರಿಗೆ ಭೇಟಿ ನೀಡಿದ್ದು, ಈ ವೇಳೆ ಚಿಕ್ಕಮಗಳೂರು ಕ್ಷೇತ್ರದಿಂದ ಎಚ್.ಡಿ.ತಮ್ಮಯ್ಯಗೆ ಟಿಕೆಟ್ ನೀಡುವಂತೆ ಬೆಂಬಲಿಗರು ಒತ್ತಾಯಿಸಿದ್ದಾರೆ. ಅಲ್ಲದೇ ಇನ್ನುಳಿದ ಆಕಾಂಕ್ಷಿಗಳು ಕೂಡ ಡಿ.ಕೆ.ಶಿವಕುಮಾರ್‌ಗೆ ದೇವರ ದರ್ಶನಕ್ಕೂ ಬಿಡದೇ ಬೆನ್ನು ಬಿದ್ದಿದ್ದಾರೆ.
ಈಗಾಗಲೇ ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಟಿಕೆಟ್ ಕೈ ತಪ್ಪಿದ ಆಕಾಂಕ್ಷಿಗಳು ಮುನಿಸಿಕೊಂಡಿದ್ದಾರೆ. ಮತ್ತೊಂದೆಡೆ ಇದೀಗ ಎಲ್ಲರ ಚಿತ್ತ ಮೂರನೇ ಪಟ್ಟಿ ಬಿಡುಗಡೆ ಕಡೆಗೆ ನೆಟ್ಟಿದ್ದು, ಆಕಾಂಕ್ಷಿಗಳು ಟಿಕೆಟ್‌ಗಾಗಿ ತೀವ್ರ ಕಸರತ್ತನ್ನು ನಡೆಸುತ್ತಿದ್ದಾರೆ. ಹಾಗೆಯೇ ಚಿಕ್ಕಮಗಳೂರು ಕ್ಷೇತ್ರದಿಂದ ಎಚ್.ಡಿ.ತಮ್ಮಯ್ಯಗೆ ಟಿಕೆಟ್ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಬೆಂಬಲಿಗರು ಮನವಿ ಮಾಡಿದ್ದಾರೆ. ಇದೇ ವೇಳೆ ಇನ್ನುಳಿದ ಆಕಾಂಕ್ಷಿಗಳು ಕೂಡ ತಮಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.

ಎಚ್.ಡಿ ತಮ್ಮಯ್ಯಗೆ "ಕೈ" ಟಿಕೆಟ್ ನೀಡುವಂತೆ ಒತ್ತಾಯ
ಎಚ್.ಡಿ.ತಮ್ಮಯ್ಯಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ ಅವರನ್ನು ಗೆಲ್ಲಿಸುತ್ತೇವೆ ಎಂದು ಬೆಂಬಲಿಗರು ಮನವಿ ಮಾಡಿದರು. ಹೀಗೆ ಡಿ.ಕೆ.ಶಿವಕುಮಾರ್ ಶೃಂಗೇರಿಯಲ್ಲಿ ತಾಯಿ ಶಾರದಾಂಬೆ ದರ್ಶನ ಪಡೆದು ವಾಪಸ್ ಬರುತ್ತಿದ್ದಂತೆಯೇ ಅವರನ್ನು ಸುತ್ತುವರಿದ ಎಚ್.ಡಿ ತಮ್ಮಯ್ಯ ಬೆಂಬಲಿಗರು ಟಿಕೆಟ್ ನೀಡುವಂತೆ ಬೆಂಬಾಲು ಬಿದ್ದಿದ್ದರು.
ಕಾಂಗ್ರೆಸ್‌ಗೆ ಶಾಕ್ ನೀಡಿದ ವೈ.ಎಸ್.ವಿ.ದತ್ತ
ಇನ್ನು ಕಾಂಗ್ರೆಸ್‌ನಿಂದ ಟಿಕೆಟ್ ಕೈತಪ್ಪಿದ ಹಿನ್ನೆಲೆ ಬೇಸರಗೊಂಡಿದ್ದ ವೈ.ಎಸ್.ವಿ ದತ್ತ ಇದೀಗ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಟವೆಲ್ ಗುರುತಿನಿಂದ ಸ್ಪರ್ಧೆಗಿಳಿಯುವುದಾಗಿ ಕಡೂರಿನಲ್ಲಿ ಘೋಷಣೆ ಮಾಡುವ ಮೂಲಕ ಕಾಂಗ್ರೆಸ್‌ಗೆ ಶಾಕ್ ನೀಡಿದ್ದಾರೆ.
ಇದೇ ವೇಳೆ ವೈ.ಎಸ್.ವಿ ದತ್ತ ಅವರು ಹೆಗಲ ಮೇಲೆ ಟವೆಲ್ ಹಾಕಿಕೊಂಡು ಮತ ಮತ್ತು ಚುನಾವಣೆ ಖರ್ಚಿಗಾಗಿ ಹಣ ನೀಡಿ ಎಂದು ಕ್ಷೇತ್ರದ ಜನರ ಬಳಿ ಭಿಕ್ಷೆ ಬೇಡಿದ್ದು, ಅಭಿಮಾನಿಗಳು 50 ಸಾವಿರ, ಲಕ್ಷ, 2 ಲಕ್ಷದ ಚೆಕ್ ನೀಡಿದ್ದಾರೆ. ಮತ್ತಷ್ಟು ಹಣವನ್ನು ಕೊಡುತ್ತೇವೆ ಅಂತಲೂ ಅಭಿಮಾನಿಗಳು ಹೇಳಿದ್ದಾರೆ.
ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದಕ್ಕೆ ಸ್ವತಂತ್ರವಾಗಿ ನಿಲ್ಲುವಂತೆ ಅಭಿಮಾನಿಗಳು ಸೂಚನೆ ನೀಡಿದ್ದರು. ಅಭಿಮಾನಿಗಳ ಒತ್ತಾಯದ ಮೇರೆಗೆ ಸ್ವತಂತ್ರವಾಗಿ ಸ್ಪರ್ಧೆಗಿಳಿಯಲು ವೈ.ಎಸ್.ವಿ ದತ್ತ ಅವರು ನಿರ್ಧಾರ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ನ್ನು ವೈ.ಎಸ್.ವಿ.ದತ್ತಾಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅವರ ಮನೆಯಲ್ಲಿ ಅಭಿಮಾನಿಗಳು ಮೇಲಿಂದ ಮೇಲೆ ಬಂಡಾಯದ ಸಭೆಯನ್ನು ಮಾಡುತ್ತಲೇ ಇದ್ದರು. ಇದನ್ನು ಕಂಡಂತಹ ಜಿಲ್ಲೆಯ ಕಡೂರು ಅಭ್ಯರ್ಥಿ ಕೆ.ಎಸ್.ಆನಂದ್‍ಗೆ ನುಂಗಲಾರದ ಬಿಸಿ ತುಪ್ಪವಾಗಿತ್ತು. ಕಾಂಗ್ರೆಸ್‌ನ ಎರಡನೇ ಪಟ್ಟಿ ಘೋಷಣೆ ಆದಾಗಿನಿಂದಲೂ ದತ್ತ ಅವರ ಮನೆಯಲ್ಲಿ ಅಭಿಮಾನಿಗಳು ಮೇಲಿಂದ ಮೇಲೆ ಸಭೆ ಮಾಡುತ್ತಲೇ ಇದ್ದರು.
ಇನ್ನು ಗುರುವಾರ ಸಂಜೆ ಬೆಂಗಳೂರಿನಿಂದ ಕಡೂರಿಗೆ ಬಂದ ಮಧ್ಯರಾತ್ರಿ 2 ಗಂಟೆಯವರೆಗೂ ಅಭಿಮಾನಿಗಳನ್ನು ಸಮಾಧಾನ ಮಾಡಿದ್ದಾರೆ. ಭಾನುವಾರ ( ಏಪ್ರಿಲ್ 09) ಕಡೂರಿನ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಅಭಿಮಾನಿಗಳ ಬಹಿರಂಗ ಸಭೆಯನ್ನು ಕರೆಯಲಾಗಿತ್ತು. ಇದೇ ವೇಳೆ ದತ್ತ ಅವರು ಅಭಿಮಾನಿಗಳು ಹೇಗೆ ಹೇಳುತ್ತಾರೋ ಹಾಗೆ ಎಂದು ಎಲ್ಲವನ್ನೂ ಅಭಿಮಾನಿಗಳ ಮೇಲೆ ಹಾಕಿದ್ದರು.
ಶನಿವಾರ (ಏಪ್ರಿಲ್ 08) ರಾತ್ರಿಯೂ ಸಾವಿರಾರು ಅಭಿಮಾನಿಗಳು ಸಭೆ ಸೇರಿ ನೀವು ಸ್ವತಂತ್ರವಾಗಿ ಸ್ಪರ್ಧಿಸಲೇಬೇಕು ಎಂದು ದತ್ತ ಅವರ ಮೇಲೆ ಒತ್ತಡ ಹಾಕಿದ್ದರು. ಇದು ಕಾಂಗ್ರೆಸ್ ಅಭ್ಯರ್ಥಿ ಕೆ.ಎಸ್.ಆನಂದ್‍ಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿತ್ತು. ಟಿಕೆಟ್ ಕೈತಪ್ಪುತ್ತಿದ್ದಂತೆಯೇ ಭಾವನಾತ್ಮಕ ಪತ್ರದ ಮೂಲಕ ಅಭಿಮಾನಿಗಳ ಮನಗೆದ್ದಿರುವ ದತ್ತ ಎಲ್ಲವನ್ನೂ ಕಾರ್ಯಕರ್ತರ ಮೇಲೆ ಹಾಕಿ ಕಾದು ನೋಡುವ ತಂತ್ರ ಅನುಸರಿಸಿದ್ದರು.












Click it and Unblock the Notifications