ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೈ ಕಾರ್ಯಕರ್ತರಿಂದ ಸಿಟಿ ರವಿ ಮನೆಗೆ ಮುತ್ತಿಗೆ ಯತ್ನ: ಬಿಗುವಿನ ವಾತಾವರಣ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಡಿ. 03: ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ನೀಡಿದ ಅವಹೇಳನಕಾರಿ ಹೇಳಿಕೆ ಖಂಡಿಸಿ ಶಾಸಕ ಸಿ.ಟಿ ರವಿ ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ರೂಪಿಸಿದ್ದ ತಂತ್ರವನ್ನು ಪೊಲೀಸರು ವಿಫಲಗೊಳಿಸಿದ್ದಾರೆ.

ತಾಲೂಕು ಕಚೇರಿಯಿಂದ ಮೆರವಣಿಗೆ ಸಾಗಿ ನಗರದ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಸಿಟಿ ರವಿ ಮನೆಗೆ ನೂರಾರು ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಹಾಕುವ ಕಾರ್ಯಕ್ರಮ ರೂಪಿಸಲಾಗಿತ್ತು. ಆದರೆ, ಪ್ರತಿಭಟನಾಕಾರರನ್ನು ರಸ್ತೆ ಮಧ್ಯೆಯೇ ಪೊಲೀಸರು ತಡೆದಿದ್ದಾರೆ. ಇನ್ನೊಂದೆಡೆ ಬಿಜೆಪಿ ಕಾರ್ಯಕರ್ತರು ಸಿ.ಟಿ ರವಿ ಮನೆ ರಸ್ತೆ ಮಧ್ಯೆಯೇ ಅಡ್ಡ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಬರುವಂತೆ ಸವಾಲು ಹಾಕಿದರು.

ದತ್ತಜಯಂತಿ ಹಿನ್ನೆಲೆ ಗಿರಿ ಭಾಗದಲ್ಲಿ ಪ್ರವಾಸಿಗರಿಗೆ ನಿರ್ಬಂಧ: ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ ದತ್ತಜಯಂತಿ ಹಿನ್ನೆಲೆ ಗಿರಿ ಭಾಗದಲ್ಲಿ ಪ್ರವಾಸಿಗರಿಗೆ ನಿರ್ಬಂಧ: ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ

ಹಂತದಲ್ಲಿ ಮುಲ್ಲಾ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರ ಬಂಧನಕ್ಕೆ ಪೊಲೀಸರು ಮುಂದಾಗುತ್ತಿದ್ದಂತೆ ಮಾತಿನ ವಾಕ್ ಸಮರ ನಡೆದು ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಗೊಂಡಿತ್ತು.

Congress workers attempt to lay siege to Ct Ravis house

ಈ ವೇಳೆ ಪೊಲೀಸರು - ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಶಾಸಕ ಸಿಟಿ ರವಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರೆ ರವಿ ಪರ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದರು.

ಕೇಸರಿ ಶಲ್ಯ ಹಾಕಿಕೊಂಡು ಸಿ.ಟಿ.ರವಿ ಮನೆಗೆ ಮುತ್ತಿಗೆಗೆ ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ ನಡೆದಿದೆ. ನಗರಸಭೆ ಮಾಜಿ ಸದಸ್ಯ ಪುಷ್ಪರಾಜ್ ರಿಂದ ಹಲ್ಲೆ ನಡೆಸಿದ್ದಾರೆ.

ಒಂದೆಡೆ ಕಾಂಗ್ರೆಸ್ ಮುಖಂಡರು ಭಾಷಣ ಮಾಡಿದರೆ ಮತ್ತೊಂದೆಡೆ ಬಿಜೆಪಿ ಪ್ರತಿಭಟನೆ ಕೂಗು ಮೊಳಗಿ ಗೊಂದಲದ ವಾತಾವರಣ ಉಂಟಾಗಿತ್ತು. ಶಾಸಕರ ಮನೆಗೆ ಪೊಲೀಸ್ ಹೆಚ್ಚಿನ ಕಾವಲು ಹಾಕಿದ್ದು ಎಚ್ಚರಿಕೆ ವಹಿಸಲಾಗಿದೆ.

English summary
Congress workers attempt to lay siege to MLA CT Ravi's house: clash between BJP workers Congress workers. Tension in chikkamagaluru . know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X