ಚಿಕ್ಕಮಗಳೂರು: ನಮೋ ಭಾರತ್ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರ ವಿರೋಧ: ಚಿಕ್ಕಮಗಳೂರು ಉದ್ವಿಗ್ನ

ಚಿಕ್ಕಮಗಳೂರು: ನಗರದ ವಿಜಯಪುರ ಬಡಾವಣೆಯಲ್ಲಿ ಚಕ್ರವರ್ತಿ ಸೂಲಿಬೆಲೆಯ ಸೂಲಿಬೆಲೆಯ ನಮೋ ಭಾರತ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.

ಚಕ್ರವರ್ತಿ ಸೂಲಿಬೆಲೆಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿದ್ದರಿಂದ ವಿವಾದ ಶುರುವಾಯಿತು. ವೇದಿಕೆ ಬಳಿ ತೆರಳುತ್ತಿದ್ದವರನ್ನ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

 Congress Workers Protest Against Chakravarthi Sulibeles Namo Bharath Programme in Chikkamagaluru

ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮದ ವಿರುದ್ದ ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. 20ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು.

ದೊಡ್ಡದಾದ ವಿವಾದ

ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಚಿಕ್ಕಮಗಳೂರು ನಗರದಲ್ಲಿ ಪರಿಸ್ಥಿತಿ ಉದ್ವಿಗ್ನವಾಯಿತು. ವಿಜಯಪುರದಲ್ಲಿ ರೊಚ್ಚಿಗೆದ್ದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಚಕ್ರವರ್ತಿ ಸೂಲಿಬೆಲೆಯವರನ್ನು ವಶಕ್ಕೆ ಪಡೆದ ಹಿನ್ನೆಲೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಆಕ್ರೋಶಗೊಂಡರು. ಬಿಜೆಪಿ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

ಬಳಿಕ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮಹಡಿ ಮೇಲೆ ನಿಂತು ಬಾವುಟ ಪ್ರದರ್ಶಿಸಿದರು. ಮಹಡಿ ಮೇಲಿದ್ದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶಗೊಂಡರು. ಕೂಡಲೇ ಮಹಡಿ ಮೇಲಿದ್ದ ಕಾಂಗ್ರೆಸ್ ಕಾರ್ಯಕರ್ತರ ರಕ್ಷಣೆಗೆ ಪೊಲೀಸರು ಮುಂದಾದರು.

200ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ರೊಚ್ಚಿಗೆದ್ದ ಪರಿಣಾಮ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು. ಬಿಜೆಪಿ ನಾಯಕ ಸಿ.ಟಿ.ರವಿ ಕೂಡ ಕಾಂಗ್ರೆಸ್ ವಿರುದ್ಧ ರೊಚ್ಚಿಗೆದ್ದರು. ವೇದಿಕೆ ಬಿಟ್ಟು ರಸ್ತೆಗಿಳಿದು ಬಂದ ಸಿ.ಟಿ.ರವಿ ಪೊಲೀಸರ ಜೊತೆ ವಾಗ್ವಾದಕ್ಕಿಳಿದರು.

ಪೊಲೀಸರು-ಬಿಜೆಪಿಗರ ಮಧ್ಯೆ ಮಾತಿನ ಚಕಮಕಿ, ನೂಕಾಟ-ತಳ್ಳಾಟ ನಡೆಯಿತು. ಕ್ಷಣಾರ್ಧದಲ್ಲಿ ವೇದಿಕೆ ಹಿಂಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಕಾರ್ಯಕ್ರಮದ ನಡುವೆಯೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಕೋಪಗೊಂಡರು. ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆಯಿತು. ಬಳಿಕ ಬಿಜೆಪಿ ಕಾರ್ಯಕರ್ತರೇ ಕಾರ್ಯಕ್ರಮಕ್ಕೆ ರಕ್ಷಣೆ ನೀಡಿದರು. ಕಾಂಗ್ರೆಸ್ಸಿಗರ ವಿರೋಧದ ನಡುವೆಯೂ ಭಾಷಣ ಮಾಡಿದರು.

ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಸ್ಥಳಕ್ಕೆ ಎಸ್ಪಿ ವಿಕ್ರಂ ಅಮಟೆ ಭೇಟಿ ನೀಡಿದರು. ಕಾಂಗ್ರೆಸ್ ಕಾರ್ಯಕರ್ತರು ಇದ್ದ ಕಟ್ಟಡದ ಮೇಲೆ ಬಿಜೆಪಿ ಕಾರ್ಯಕರ್ತರು ಕಲ್ಲು ತೂರಿದರು. ಒಂದು ತಂಡ ರಸ್ತೆ ಮಧ್ಯೆಯೇ ಕಪ್ಪು ಬಾವುಟ ಪ್ರದರ್ಶನ ಮಾಡಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+