ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರಿನಲ್ಲಿ ಸೋಂಕಿತ ಸಾವು; ಆಂಬುಲೆನ್ಸ್ ಬರದೇ ಆದ ಎಡವಟ್ಟು

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಜುಲೈ 27: ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಬರದೇ, ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಮೂಲದ 32 ವರ್ಷದ ವ್ಯಕ್ತಿ ಸಾವನ್ನಪ್ಪಿದವರು.

Recommended Video

EMISAT ಪ್ರಕಾರ India China Border ನಲ್ಲಿ ಇನ್ನು ಬೆಂಕಿ ಆರಿಲ್ಲ | Oneindia Kannada

ಐದು ದಿನಗಳ ಹಿಂದೆ ಕೊರೊನಾ ವೈರಸ್ ನಿಂದಾಗಿ ತಾಯಿಯನ್ನು ಕಳೆದುಕೊಂಡಿದ್ದ ಇವರು ಕಳೆದ ರಾತ್ರಿಯಿಂದ ಹುಷಾರಿಲ್ಲದೇ ನರಳುತ್ತಿದ್ದರು. ಕಳೆದ ವಾರವೇ ಇವರ ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸಿದ್ದು, ವರದಿ ಇನ್ನೂ ಬಂದಿರಲಿಲ್ಲ. ಇವರ ತಂದೆಯೂ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ರೈತ ಸಂಘದ ಅಧ್ಯಕ್ಷ ಬಲಿಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ರೈತ ಸಂಘದ ಅಧ್ಯಕ್ಷ ಬಲಿ

ಆದರೆ ಶನಿವಾರ ರಾತ್ರಿ ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡಿದ್ದರು. ಭಾನುವಾರ ಬೆಳಿಗ್ಗೆಯಿಂದಲೇ ಮನೆಯವರು ಆಂಬುಲೆನ್ಸ್ ಗೆ ಕರೆ ಮಾಡಿದ್ದರು. ಎಷ್ಟೇ ಹೊತ್ತಾದರೂ ಆಂಬುಲೆನ್ಸ್ ಬಂದಿಲ್ಲ. ಬೆಳಿಗ್ಗೆ ಕರೆ ಮಾಡಿದ್ದಕ್ಕೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಆಂಬುಲೆನ್ಸ್ ಬಂದಿದೆ.

Corona Infected Man Dies Due To Ambulance Problem In Chikkamagaluru


ಇದೀಗ ಈ ಮೃತ ವ್ಯಕ್ತಿಯಲ್ಲೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಆದರೆ ಈ ವರದಿ ಮುನ್ನವೇ ಬಂದಿದ್ದರೆ ಅವರನ್ನು ಬದುಕಿಸಬಹುದಿತ್ತು. ಆರೋಗ್ಯ ಇಲಾಖೆ ಸ್ಪಂದಿಸಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಮಯಕ್ಕೆ ಸರಿಯಾಗಿ ಆಂಬುಲೆನ್ಸ್ ಬರದೇ ಇದ್ದ ಕಾರಣ ಈ ಸಾವು ಸಂಭವಿಸಿದೆ ಎಂದು ಆರೋಪಿಸಿದ್ದಾರೆ.

English summary
32 year old corona virus infected person dies due to ambulance problem in tarikere taluk of Chikkamagaluru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X