ಚಿಕ್ಕಮಗಳೂರು: ಬ್ರಿಟನ್ ನಿಂದ ಆಗಮಿಸಿದ ಇಬ್ಬರಿಗೆ ಕೊರೊನಾ ಸೋಂಕು

ಚಿಕ್ಕಮಗಳೂರು, ಡಿಸೆಂಬರ್ 25: ಬ್ರಿಟನ್ ದೇಶದಿಂದ ಚಿಕ್ಕಮಗಳೂರು ಜಿಲ್ಲೆಗೆ ಬಂದಿರುವ 18 ಜನರಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ತಿಳಿಸಿದ್ದಾರೆ.

ಈ ಕುರಿತು ಚಿಕ್ಕಮಗಳೂರು ನಗರದ ಐಡಿಎಸ್‍ಜಿ ಕಾಲೇಜು ಆವರಣದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಗುರುವಾರ ಬ್ರಿಟನ್ ನಿಂದ ಆಗಮಿಸಿದ 18 ಜನರಲ್ಲಿ ಇಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

39 ಹಾಗೂ 41 ವರ್ಷದ ಇಬ್ಬರು ಪುರುಷರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಉಳಿದಂತೆ 16 ಜನರಲ್ಲಿ ಸೋಂಕು ಪತ್ತೆಯಾಗಿಲ್ಲ. ಇಬ್ಬರನ್ನೂ ಸಹ ಜಿಲ್ಲಾಸ್ಪತ್ರೆಯ ಕೋವಿಡ್ ಸೆಂಟರ್‍ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಸಹ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Chikkamagaluru: Coronavirus Positive For Two Arrived From Britain

ಈವರೆಗೆ ಜಿಲ್ಲೆಗೆ 18 ಜನರು ಬಂದಿದ್ದು, ಅವರಲ್ಲಿ ಬುಧವಾರ ಒಬ್ಬರು, ಗುರುವಾರ 17 ಜನರು ಆಗಮಿಸಿದ್ದಾರೆ. ಕೊರೊನಾ ಸೋಂಕು ತಗುಲಿರುವ ಇಬ್ಬರೂ ಸಹ ಚಿಕ್ಕಮಗಳೂರು ತಾಲ್ಲೂಕಿನವರು ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+